Showing 20 of 1954 posts • Page 21 of 98
ಹಿಟ್ ಅಂಡ್ ರನ್ಗೆ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಕೆಆರ್ ಪುರಂನ ಭಟ್ಟರಹಳ್ಳಿ ಸಿಗ್ನಲ್ ಬಳಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ನಾನ್ ವೆಜ್ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೀಗ ಮತ್ತೆ ಚಿಕನ್ ಮಾಂಸದ ಬೆಲೆ ಏಕಾಏಕಿ ಗಗನಕ್ಕೇರಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರಿಯಾ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಮಾಣ ನಿಲ್ದಾಣದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರಿನ ಉಪ್ಪಳಿಗೆಯಲ್ಲಿ ಆಯೋಜಿಸಲಾಗಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರು ಗ್ರಾಮೀಣ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.
ಅಕ್ರಮ ಗೋ ಸಾಗಾಟ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ.
ಸಿಗ್ನಲ್ ಜಂಪಿಂಗ್, ಒನ್ ವೇನಲ್ಲಿ ಗಾಡಿ ನುಗ್ಗಿಸುವುದು, ವೇಗವಾಗಿ ಚಾಲನೆಯಂತಹ ಘಟನೆಗಳ ವಿರುದ್ಧ ದೂರು ದಾಖಲಾಗುತ್ತಲೇ ಇದೆ.
ವಿಧಾನಮಂಡಲ ಅಧಿವೇಶನ ಇತಿಹಾಸದಲ್ಲೇ ಮೊದಲ ಬಾರಿಗೆ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಕೇವಲ 2 ಸಾಲಿನಲ್ಲಿ ಭಾಷಣ ಮುಗಿಸಿದ್ದಾರೆ.
ನಗರದಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದ ಲ್ಯಾಂಬೋರ್ಗಿನಿ ಕಾರು ಚಾಲನೆಯ ಪ್ರಕರಣ ಬೆಳಕಿಗೆ ಬಂದಿದೆ.
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಹೊಸ ವರ್ಷದ ಹಾಗೂ ಸಂಕ್ರಾಂತಿ ಹಬ್ಬದ ಅಂಗವಾಗಿ 20ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ಜನವರಿ 18ರ ಭಾನುವಾರದಂದು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನವೆಂಬರ್ 2025ರಲ್ಲಿ ಕರ್ನಾಟಕ ಸರ್ಕಾರದಿಂದ ಹೊಯ್ಸಳ ಶೌರ್ಯ ಪ್ರಶಸ್ತಿ ಪಡೆದ ಮಾಸ್ಟರ್ ದೀಪೇಶ್ ದೀಪಕ್ ಶೆಣೈ , ಮಾರ್ಚ್–ಏಪ್ರಿಲ್ 2026ರ SSLC ಪರೀಕ್ಷೆಗೆ ತಯಾರಾಗುತ್ತಿರುವ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಸೈಲೆನ್ಸರ್, ಗಾಜು, ಬಣ್ಣ, ಲೈಟ್ ಮಾರ್ಪಾಡು ಮಾಡಿದ್ದ ಕಾರಿಗೆ ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ₹1,11,500 ದಂಡ ವಿಧಿಸಿದ್ದಾರೆ. ಕಾರು ಸುಮಾರು 17 ವರ್ಷಗಳಷ್ಟು ಹಳೆಯದಾಗಿದ್ದು ₹70 ಸಾವಿರ ಮೌಲ್ಯ ಎಂದು ಅಂದಾಜಿಸಲಾಗಿದೆ.
ಗಂಡನ ವರ್ತನೆಗೆ ಬೇಸತ್ತ ಹೆಂಡತಿಯೊಬ್ಬಳು ತನ್ನ ಮಗಳನ್ನು ಬೆಂಕಿಹಚ್ಚಿ ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ.
ಗೋಕರ್ಣ ಪ್ಯಾರಡೈಸ್ ಬೀಚ್ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ದಾಖಲಿಸಿರುವ ಸಿವಿಲ್ ವ್ಯಾಜ್ಯದಲ್ಲಿ, ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಸೈಬರ್ ವಂಚನೆಯ ಜಾಲದ ಮೇಲೆ ಬೆಂಗಳೂರಿನ ಹುಳಿಮಾವು ಪೊಲೀಸರು ದಾಳಿ ನಡೆಸಿ 11 ಜನ ವಂಚಕರನ್ನು ಬಂಧಿಸಿರುವ ಘಟನೆ ನಡೆದಿದೆ.
ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆಯನ್ನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.