Showing 20 of 1954 posts • Page 22 of 98
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬರೋಬ್ಬರಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆ ಮಾಡಿರುವ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಕರೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ ಎಂದರು.
200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ ನಡೆದು ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ.
ರಾಮನಗರದಲ್ಲಿ ಸಂಭವಿಸಿದ್ದ ನಾಡಬಾಂಬ್ ಸ್ಫೋಟ ಕೇಸ್ ನಲ್ಲಿ ಪೊಲೀಸರು ಮೂವರು ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಹಸುವಿನ ಬಾಯಿ ಛಿದ್ರಗೊಂಡ ಪರಿಣಾಮ ಮೃತಪಟ್ಟಿತ್ತು.
14ನೇ ರಾಷ್ಟ್ರೀಯ ಡ್ರಾಗನ್ ಬೋಟ್ ಚಾಂಪಿಯನ್ಶಿಪ್ (ಸೀನಿಯರ್ ಪುರುಷರು & ಮಹಿಳೆಯರು, ಜೂನಿಯರ್ ಹುಡುಗರು & ಹುಡುಗಿಯರು) 6 ರಿಂದ 9 ಜನವರಿ 2026 ರ ವರೆಗೆ ಭೋಪಾಲ್, ಮಧ್ಯಪ್ರದೇಶ ನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ಕಾಂತಾರ ಚಾಪ್ಟರ್ ಒನ್ ಚಿತ್ರ ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದೆ. ಅತ್ಯುತ್ತಮ ಚಿತ್ರ ವಿಭಾಗದ ಸ್ಪರ್ಧಾ ಕಣಕ್ಕೂ ಪ್ರವೇಶ ಪಡೆದಿದೆ.
ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದ್ದ ಜನರಿಗೆ ಆಹಾರ ಇಲಾಖೆ ಶಾಕ್ ನೀಡಿದೆ.
ಬೆಂಗಳೂರಿನ ಹೃದಯಭಾಗದಲ್ಲಿ ಸ್ಥಿತವಾಗಿರುವ ಭಾರತದ ಪ್ರಮುಖ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಗಳಲ್ಲಿ ಒಂದಾದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (KMIO), ಕ್ಯಾನ್ಸರ್ ಆರೈಕೆಯನ್ನು ಪರಿಸರ ಜವಾಬ್ದಾರಿಯೊಂದಿಗೆ ಜೋಡಿಸುವ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.
ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವನ್ನು ಕೇಂದ್ರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಗಲಾಟೆ ಉಂಟಾಗಿದೆ.
ರಾಮನಗರ: ಕಾರು ಪಲ್ಟಿಯಾಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಬರ್ತಿದ್ದ ಕುಟುಂಬಕ್ಕೆ ಹೊಸವರ್ಷ ನರಕವಾಗಿದೆ. ಮಾಗಡಿ ತಾಲೂಕು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಕೇನಹಳ್ಳಿಯಲ್ಲಿ ಘಟನೆ ನಡೆದಿದೆ. ಬೈಕ್ ಹಿಂಬದಿ ಕೂತಿದ್ದ 29 ವರ್ಷದ ಅಶ್ವಿನಿ ದುರ್ಮರಣ ಹೊಂದಿದ್ದಾರೆ. ಬೈಕ್ ಸವಾರ ಪತಿ ರಮೇಶ್ ಹಾಗೂ ಮಗು ಯುವನ್ (1) ಗಂಭೀರ ಗಾಯಗೊಂಡಿದ್ದು, ಮತ್ತೊಂದು ಮಗು ಸಾನ್ವಿ (7) ಅಪಘಾತದಿಂದ ಪಾರಾಗಿದೆ. ಕುಣಿಗಲ್ ನಿಂದ ನೆಲಮಂಗಲದ ಕಡೆ ಬರುತಿದ್ದ ಕಾರು ಮೂರು ಪಲ್ಟಿ […]
ಹೊಸ ವರ್ಷದ ಹಿನ್ನಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ವಿದೇಶಿ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹೊಸ ವರ್ಷದ ಮೊದಲ ದಿನವೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಾಲ್ಲೂಕಿನ ಚಂದಾಪುರ ಫ್ಲೈಓವರ್ ಬಳಿ ಎರಡು ಸ್ಲೀಪರ್ ಕೋಚ್ ಬಸ್ಗಳ ನಡುವೆ ಭಾರೀ ಅಪಘಾತ ಸಂಭವಿಸಿದೆ.
ಒಂದೇ ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚೋದಿಲ್ಲ, ವಿಲೀನವೂ ಮಾಡೋದಿಲ್ಲ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ತಡರಾತ್ರಿ ಮೂವರು ಪುಂಡರು ಯುವತಿಗೆ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ನಡೆದಿದೆ.
ಜೈಲಿನಲ್ಲಿ ಸ್ನೇಹಿತರಾಗಿ ಹೊರ ಬಂದ ನಂತರ ಒಟ್ಟಾಗಿ ಸೇರಿ ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ತಡೆ ಗೋಡೆಗೆ ಡಿಕ್ಕಿ ಹೊಡೆದು ಮೋರಿಗೆ ಬಿದ್ದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮನೆಗೆ ನುಗ್ಗಿ 20 ಲಕ್ಷ ರೂ. ನಗದು ಮತ್ತು 20 ಲಕ್ಷ ರೂ. ಮೌಲ್ಯದ 180 ಗ್ರಾಂ ಚಿನ್ನಾಭರಣ ದೋಚಿದ ಘಟನೆ ಬೆಂಗಳೂರಿನ ಭಾರತ್ ನಗರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ.
ಅಪಾರ್ಟ್ಮೆಂಟ್ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ಹೋಬಳಿ ವರ್ತೂರು ರಸ್ತೆ ಬಳಿ ನಡೆದಿದೆ.