Showing 20 of 1796 posts • Page 3 of 90
ಆಫ್ರಿಕಾ ಖಂಡದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಹಾಗೂ ಕರ್ನಾಟಕ ರಾಜ್ಯದಲ್ಲಿ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.
ಹುಡುಗಿ ಕೈಕೊಟ್ಟಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಹೈಟೆನ್ಷನ್ ಕಂಬ ಏರಿದ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ.
: ರಾಜ್ಯದಾದ್ಯಂತ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಹೋಲ್ಸೇಲ್ ಚಿನ್ನ ಖರೀದಿಸುವುದಾಗಿ ನಂಬಿಸಿ 3 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆದಿದೆ.
ಸಿಲಿಕಾನ್ ಸಿಟಿಯಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು ಗುಟ್ಟಾಗಿ ನಡೆಸಲಾಗುತ್ತಿದ್ದ ಎರಡು ಪ್ರತ್ಯೇಕ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅಂಡಮಾನ್-ನಿಕೋಬಾರ್ ದ್ವೀಪ ಪ್ರದೇಶದಲ್ಲಿನ ಮೋಡಗಳ ಚಲನೆಯಿಂದಾಗಿ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮತ್ತಷ್ಟು ಬಿರುಸಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪ್ಲಾಸ್ಟಿಕ್ ಹಾಗೂ ಸ್ಕ್ರಾಪ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮೊಂದು ಧಗಧಗನೆ ಉರಿದಿದೆ. ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ.
ರಾಜ್ಯದ ಶಾಲೆ ಮತ್ತು ಕಾಲೇಜುಗಳಲ್ಲಿ ವಿವಾದಕ್ಕೆ ಕಾರಣವಾಗಿದ್ದ ವಸ್ತ್ರಸಂಹಿತೆಯ ನಿಯಮಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ.
ಅಂತರರಾಜ್ಯ ಮಟ್ಟದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ,
ವಸತಿ ಸಚಿವ ಝಮೀರ್ ಅಹ್ಮದ್ ಅವರ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣದ ಕಳ್ಳತನವಾಗಿರುವ ಪ್ರಕರಣ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ವಿಭಾಗದ ಯಶವಂತಪುರ ಹಾಗೂ ನಂದಿನಿ ಲೇಔಟ್ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರು ಪೆಡ್ಲರ್ಗಳನ್ನು ಬಂಧಿಸಿ ₹20.10 ಕೋಟಿ ಮೌಲ್ಯದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಇದೇ ಮೇ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
ಓವರ್ ಸ್ಪೀಡ್ನಲ್ಲಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ನ ಟೈರ್ ಸ್ಫೋಟಗೊಂಡು ಅಡ್ಡಾದಿಡ್ಡಿ ಚಲಿಸಿ ರಸ್ತೆ ಬದಿಗೆ ಬಂದು ನಿಂತ ಘಟನೆ ವಿದ್ಯಾರಣ್ಯಪುರ ರಸ್ತೆಯಲ್ಲಿ ನಡೆದಿದೆ.
ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆಯಾದ ಬೆನ್ನಲ್ಲೇ, ಬೆಂಗಳೂರಿನ ಹೋಟೆಲ್ ಮಾಲೀಕರು ತಿಂಡಿ, ಊಟ ಹಾಗೂ ಕಾಫಿ-ಟೀ ದರಗಳನ್ನು ಶೇ. 20ರಷ್ಟು ಹೆಚ್ಚಿಸಲು ಮುಂದಾಗಿದ್ದಾರೆ.
ಜನವಸತಿ ಪ್ರದೇಶಗಳಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು ಅಕ್ರಮವಾಗಿ ನಡೆಸುತ್ತಿದ್ದ ವೇಶ್ಯಾವಾಟಿಕೆಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಕೊಲೆ ಮಾಡಿದ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯುತ್ ವ್ಯತ್ಯಯದ ಕಾರಣ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ತಾಲ್ಲೂಕಿನ ಜಿಂಬೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಅಪರಿಚಿತ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಹೇಳಿದರು.