Showing 20 of 1954 posts • Page 31 of 98
ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ತುಳು ಭಾಷೆ, ಸಂಸ್ಕೃತಿ, ಮತ್ತು ಸಮುದಾಯ ಹಕ್ಕುಗಳ ರಕ್ಷಣೆಗೆ ಶತಮಾನಾಂತರದಿಂದ ಶ್ರಮಿಸುತ್ತಿರುವ ತುಳುವ ಮಹಾಸಭೆ, ಬೆಂಗಳೂರು ಮಹಾನಗರದ ಸಂಚಾಲಕರಾಗಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಮತ್ತು ಈಗಾಗಲೇ ದಾಖಲಾಗಿರುವ ಸೆಕ್ಷನ್ಗಳ ಅಡಿಯಲ್ಲಿ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಎಂ.ಆರ್.ಪಿ.ಎಲ್ ಸಂಸ್ಥೆ ಸಾಕಷ್ಠು ಕೊಡುಗೆ ನೀಡಿದೆ, ಕೊರೋನಾ ಸಂದರ್ಭ ಆಕ್ಸಿಜನ್ ಕೊರತೆ ಇದ್ದಾಗ ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಸಂಸ್ಥೆ ಮಾಡಿದೆ
ಪಾರ್ಕಿಂಗ್ ಪ್ರದೇಶಗಳಿಂದ ಬೈಕ್ಗಳನ್ನು ಕದ್ದಿದ್ದ ಆಂಧ್ರಪ್ರದೇಶದ 42 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನಿಂದ 30 ಲಕ್ಷ ರೂ. ಮೌಲ್ಯದ 40 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಹಿದ ಆರೋಪದ ಮೇರೆಗೆ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಹಠಾತ್ ಮರಣಗಳಿಗೆ ಕಾರಣವಾಗುವ ಕೆಲವು ಕಾಯಿಲೆಗಳನ್ನು ‘ಅಧಿಸೂಚಿತ ಕಾಯಿಲೆಗಳು’ ಎಂದು ಘೋಷಿಸುವ ಜತೆಗೆ 15 ವರ್ಷದೊಳಗಿನ ಮಕ್ಕಳಿಗೆ ಶಾಲಾ ಹಂತದಲ್ಲಿಯೇ ಹೃದಯ ಸಂಬಂಧಿ ತಪಾಸಣೆಗಳನ್ನು ಕಡ್ಡಾಯಗೊಳಿಸಲಾಗುವುದು
ಏರ್ ಇಂಡಿಯಾ ವಿಮಾನದ ಪೈಲಟ್ ಓರ್ವ ಕುಸಿದು ಬಿದ್ದು ವಿಮಾನ ಹಾರಾಟ ವಿಳಂಬವಾದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ನಾಳೆ (ಭಾನುವಾರ, ಜೂನ್ 6) ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯವಾಗಲಿದೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಕಾರಣ ನೀಡಿ ಅಮಾನತು ಮಾಡಿದ್ದ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿಯಿಂದ ರದ್ದು ಮಾಡಿದೆ.
ಆರ್.ಎಸ್.ಎಸ್. ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣ
ಇದೇ ಮೊದಲ ಬಾರಿಗೆ ಕರ್ನಾಟಕ ನೇರಳೆ ಹಣ್ಣನ್ನು ಲಂಡನ್ಗೆ ರಫ್ತು ಮಾಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯದ ಅಂಗಸಂಸ್ಥೆ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಲಾರಿಗೆ ಡಿಕ್ಕಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.
ತಿರುಮಲ ತಿರುಪತಿ ದೇವಸ್ಥಾನದಿಂದ ಬರೋಬ್ಬರಿ 10 ಲಕ್ಷ ಕೆ.ಜಿ ನಂದಿನಿ ತುಪ್ಪಕ್ಕೆ ಟಿಟಿಡಿ ಬೇಡಿಕೆ ಇಟ್ಟಿದೆ ಎನ್ನಲಾಗಿದೆ.
ನಗರದಲ್ಲಿ ಹೈಟೆನ್ಷನ್ ವಿದ್ಯುತ್ ಪ್ರವಹಿಸಿ ನೇಪಾಳ ಮೂಲದ 10 ವರ್ಷದ ಬಾಲಕ ಅನಂತ್ ಸಾವನ್ನಪ್ಪಿದ್ದ ಘಟನೆಯ ಕುರಿತು ಈಗ ಎಫ್.ಐ.ಆರ್ ದಾಖಲಾಗಿದೆ.
ಇಸ್ರೇಲ್-ಇರಾನ್ ಯುದ್ಧದಲ್ಲಿ ಭಾರತ ಇರಾನ್ ಪರವಾಗಿ ನಿಲ್ಲುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆರ್ಸಿಬಿ ಕಪ್ ಗೆಲ್ಲಬೇಕು ಎನ್ನುವುದು ಅಭಿಮಾನಿಗಳ 18 ವರ್ಷದ ಕನಸು. ಈ ವರ್ಷ ಆ ಕನಸು ನನಸಾಗಿತ್ತು. ಆದರೆ ಎಲ್ಲವೂ ಅಂದುಕೊಂಡಂತೆ ಇರಲಿಲ್ಲ. ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸುವ ವೇಳೆ ಕಾಲ್ತುಳಿತ ಉಂಟಾಗಿ ತೊಂದರೆ ಆಗಿತ್ತು.