Showing 20 of 1952 posts • Page 39 of 98
ದೇಶದ ಇತರೆ ಐಐಟಿ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗಿಂತಲೂ ಅತ್ಯಂತ ವಿನೂತನ ಹಾಗೂ ಆಕರ್ಷಕ ವಿನ್ಯಾಸದಲ್ಲಿ ಯುವಿಸಿಇ ಅಭಿವೃದ್ದಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳನ್ನು ನಿಗದಿ ಪಡಿಸಲಾಗಿದ್ದು, ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ವಿಚಾರದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್ ಗೆ ಸಿಎಂ ಸಿದ್ದರಾಮಯ್ಯ ಮೊದಲ ಹೆಜ್ಜೆ ಇಟ್ಟಿದ್ದಾರೆ.
ಕಾನೂನು ಸೇವೆಗಳ ಪ್ರಾಧಿಕಾರದಿಂದ, ಜೈಲಿನಲ್ಲಿರುವ ಅಪರಾಧಿಗಳಿಗೆ ಕಾನೂನು ಸೇವೆ ಒದಗಿಸಲು ಹೊಸ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಮುಡಾ ಹಗರಣ ನಡೆದೇ ಇಲ್ಲ, ಸಿಎಂರನ್ನು ಸಿಲುಕಿಸಲು ಹೀಗೆ ಮಾಡಲಾಗಿದೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.
ರಾಜ್ಯದಲ್ಲಿ ಕಳೆದ 15 ದಿನಗಳಿಂದ ಬ್ರೇಕ್ ನೀಡಿದ್ದ ಮಳೆರಾಯ ಮತ್ತೆ ರಗಳೆ ನೀಡುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಇಡೀ ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ “Online Live NEET/JEE/CET” ತರಗತಿಗಳ ತರಬೇತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.
ಕರ್ನಾಟಕದಲ್ಲಿ ಹಿಂಗಾರು ಅವಧಿ ಮುಕ್ತಾಯವಾಗಿ ಚಳಿಗಾಲ ಪ್ರಾರಂಭವಾದರೂ, ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಕಳೆದ 3 ದಿನಗಳಿಂದ ರಾಜ್ಯದ ಅನೇಕ ಕಡೆ ಅಕಾಲಿಕ ಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇವತ್ತು ಮತ್ತು ನಾಳೆ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.
ಶ್ರೀನಗರಕ್ಕೆ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ಬಸ್ಸು. ಸಾರ್ವಜನಿಕರು ಹಾಗೂ ಕನ್ನಡ ಪ್ರೇಮಿಗಳು ಅಪಾರವಾದ ಸಂತೋಷ ವ್ಯಕ್ತಪಡಿಸಿದ್ದಾರೆ.
ಜುಮ್ಮಾ ಮಸೀದಿಯೊಳಗೆ ಕಾರ್ಯನಿರ್ವಹಿಸುತ್ತಿರುವ ಮದರಸಾವನ್ನು ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ ಅನ್ನು ಒತ್ತಾಯಿಸಿದೆ.
“ಹೆಲ್ತ್’ಕೇರ್’ನಲ್ಲಿ ಕೃತಕ ಬುದ್ಧಿಮತ್ತೆ ಪರಿಹಾರಗಳು” ವಿಷಯದ ಫ್ಯಾಕಲ್ಟಿ ಡೆವಲಪ್’ಮೆಂಟ್ ಪ್ರೋಗ್ರಾಮ್ (ಎಫ್ಡಿಪಿ) 2024, ನವೆಂಬರ್ 4 ರಿಂದ 9 ರವರೆಗೆ ಬೆಂಗಳೂರಿನ ಸೈಂಟ್ ವಿಶ್ವವಿದ್ಯಾಲಯದಲ್ಲಿ ನಡೆಯಿತು.
ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕೆಎಸ್ಆರ್ಟಿಸಿಯಿಂದ ಸಿಹಿ ಸುದ್ದಿ.
ಭ್ರಮರಾಂಬ-ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಮತ್ತು ಕಾಡು ಮಲ್ಲೇಶ್ವರ ಗೆಳೆಯರ ಸಂಘವು ನವೆಂಬರ್ 15 ರಿಂದ 18 ರವರೆಗೆ ನಡೆಯಲಿರುವ ರೈತ ಸ್ನೇಹಿ ಮಲ್ಲೇಶ್ವರಂ ಕಡಲೆಕಾಯಿ ಪರಿಷೆಯ 8 ನೇ ಆವೃತ್ತಿಯನ್ನು ಘೋಷಿಸಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿರುವ ಅಲ್ಲಮಪ್ರಭು ಸ್ವಾಮಿ ದೇವಾಲಯ ಮತ್ತು ಸಂಬಂಧಿತ ಶಾಸನಗಳು ಮತ್ತು ಅವಶೇಷಗಳು ಕರ್ನಾಟಕ ಪ್ರಾಚೀನ ಸ್ಮಾರಕಗಳ ಕಾಯ್ದೆಯ ಪ್ರಕಾರ ಪ್ರಾಚೀನ ಸ್ಮಾರಕಗಳ ವರ್ಗಕ್ಕೆ ಸೇರುತ್ತವೆಯೇ ಎಂದು ನಿರ್ಧರಿಸಲು ಮೂವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ರಾಜ್ಯದ ಜೇನುತುಪ್ಪವನ್ನು ಜನಪ್ರಿಯಗೊಳಿಸಲು, ಗ್ರಾಹಕರಿಗೆ ಗುಣಮಟ್ಟದ ಜೇನುತ್ತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು “ಝೇಂಕಾರ್” ಬ್ರ್ಯಾಂಡ್ ಹೆಸರನ್ನು ಸೂಚಿಸಿ “ಜೀವನೋಲ್ಲಾಸಕ್ಕೆ ಜೇನು’’ ಎಂಬ ಟ್ಯಾಗ್ಲೈನ್ ನೀಡಿ ಲೋಗೋ ಮತ್ತು ಪ್ಯಾಕಿಂಗ್ ವಿನ್ಯಾಸಗಳನ್ನು ಅಭಿವೃದ್ಧಿ ಪಡಿಸಿ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಅಧಿಕೃತ ಅನುಮೋದನೆ ಪಡದಿರುತ್ತದೆ.
ತೋಟಗಾರಿಕೆ ಕ್ಷೇತ್ರವನ್ನು ಉತ್ತೇಜಿಸುವ ನವೀನ ಕ್ರಮದಲ್ಲಿ, ಕರ್ನಾಟಕದ ತೋಟಗಾರಿಕೆ ಇಲಾಖೆ ಪ್ರಾಯೋಗಿಕ ಆಧಾರದ ಮೇಲೆ ಮೈಸೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ‘ಕಿಸಾನ್ ಮಾಲ್’ ಗಳನ್ನು ಪ್ರಾರಂಭಿಸಲು ಸಜ್ಜಾಗಿದೆ.
ಒಂದು ವಿಭಾಗದಲ್ಲಿ ಬಿರುಕುಗಳು ಕಾಣಿಸಿಕೊಂಡ ನಂತರ ಈಜಿಪುರ ಮೇಲ್ಸೇತುವೆಯ ನಿರ್ಮಾಣ ಸ್ಥಗಿತಗೊಂಡಿದೆ.
ಹೊಸ ಉಪಕ್ರಮದಲ್ಲಿ, ಬೆಂಗಳೂರು ನಿವಾಸಿಗಳು ಶೀಘ್ರದಲ್ಲೇ ವಿದ್ಯುತ್ ಪಡೆಯಲು ಮೊಬೈಲ್ ಫೋನ್ ರೀಚಾರ್ಜ್ಗಳಂತೆಯೇ ತಮ್ಮ ವಿದ್ಯುತ್ ಖಾತೆಗಳನ್ನು ಮುಂಚಿತವಾಗಿ ರೀಚಾರ್ಜ್ ಮಾಡಬೇಕಾಗುತ್ತದೆ.