Showing 20 of 1954 posts • Page 53 of 98
ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಸಚಿವ ಮುನಿರತ್ನ ವಿರುದ್ಧ ಗುತ್ತಿಗೆದಾರ ಚೆಲುವರಾಜು ಎಂಬುವವರು ಜೀವ ಬೆದರಿಕೆ ಆರೋಪ ಮಾಡಿ ದೂರು ನೀಡಿದ್ದರು.
ಹಾಲಿನ ಬೆಲೆ ಹೆಚ್ಚಳ ಮಾಡಿದ ಕೂಡಲೇ ಬಿಜೆಪಿಯವರು ನಮ್ಮ ವಿರುದ್ಧ ಗಲಾಟೆ ಮಾಡುತ್ತಾರೆ. ಹೈನುಗಾರರು ಬದುಕುವುದು ಬೇಡವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಖಾತೆಯ ಮೂಲಕ ಹೇಳಿದ್ದಾರೆ.
ಬೆಂಗಳೂರಿನ ಮಕ್ಕಳಲ್ಲಿ ಕಳೆದ ಕೆಲವು ದಿನಗಳಿಂದ ವೈರಾಣು ಜ್ವರ ಹೆಚ್ಚಾಗಿದೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಮಕ್ಕಳಲ್ಲಿ ಜ್ವರದ ಪ್ರಕರಣ ಏರಿಕೆ ಕಂಡು ಬಂದಿದೆ.
ಗಣೇಶನ ಮೂರ್ತಿಗಳನ್ನು ಇರಿಸಿಕೊಂಡು ಶುಕ್ರವಾರ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ದೇವರನ್ನೂ ಸಹ ಬಂಧಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಮಯ ನಡೆದ ಅಹಿತಕರ ಘಟನಾ ಸ್ಥಳಕ್ಕೆ ಇಂದು ಬಿಜೆಪಿ ಸತ್ಯಶೋಧನಾ ತಂಡ ಭೇಟಿ ನೀಡಲಿದೆ.
ಕೊನೆ ಕ್ಷಣದಲ್ಲಿ ಕೆಪಿಎಸ್ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಲಾಗಿದೆ. ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಸರ್ಕಾರ ನೀಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪದ ಮೂರನೇ ಪ್ರಕರಣದಲ್ಲಿ ಎಸ್ಐಟಿ ಇಂದು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು ಮತ್ತು ದಲಿತರೇ ಟಾರ್ಗೆಟ್ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದ ನಾಗಮಂಗಲ ಗಲಭೆ ಪ್ರಕರಣದ ಬೆನ್ನಲ್ಲೇ ಗುಪ್ತಚರ ವಿಭಾಗದ ಎಡಿಜಿಪಿ ಶರತ್ ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿಯೇ ನೀಡಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡುತ್ತೇವೆ.
ಆನ್ಲೈನ್ ರಮ್ಮಿ ಆಟದ ಚಟಕ್ಕೆ ಹಣ ಹೊಂದಿಸಲು ಅಣ್ಣನ ಮದುವೆಗಾಗಿ ಮನೆಯಲ್ಲಿ ತಂದಿಟ್ಟಿದ್ದ ಚಿನ್ನಾಭರಣ, ನಗದು ಕದ್ದ ಯುವಕನನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಸೆ.17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಈದ್ಮಿಲಾದ್ ಹಬ್ಬದ ಪ್ರಯುಕ್ತ ಬೆಂಗಳೂರು ನಗರ ಪೊಲೀಸರು ಕೆಲ ಸೂಚನೆಗಳನ್ನು ಹೊರಡಿಸಿದ್ದಾರೆ. ಈದ್ಮಿಲಾದ್ ಹಬ್ಬದ ದಿನ ನಗರದಲ್ಲಿ ಮುಸ್ಲಿಮರು ಮೆರವಣಿಗೆ ನಡೆಸಲಿದ್ದಾರೆ.
ಜೈಲಿನಲ್ಲಿರುವ ದರ್ಶನ್ನನ್ನು ಭೇಟಿ ಮಾಡಲು ಬಂದ ವಕೀಲರನ್ನು ಭೇಟಿಯಾಗಲು ಹೈಸೆಕ್ಯೂರಿಟಿ ಜೈಲಿನಿಂದ ಹೊರಗೆ ಬರುವಾಗ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ಕೈಗಳ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ಗುರುವಾರ ಮುಕ್ತಾಯವಾದ ಈ ಹಿನ್ನೆಲೆಯಲ್ಲಿ ಇಂದು 24ನೇ ಎಸಿಎಂಎಂ ಕೋರ್ಟ್ನಲ್ಲಿ ವಿಚಾರಣೆ ನಡೆಯಿತು.
ಪಿಎಸ್ಐ ಪರೀಕ್ಷೆಯನ್ನು ಸೆ.22ರ ಬದಲು ಸೆ.28ರ ಶನಿವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಹಿಟ್ ಆ್ಯಂಡ್ ರನ್ಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಡರಾತ್ರಿ ಏರ್ಪೋಟ್ ರಸ್ತೆಯ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತನಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು 60 ವರ್ಷ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಎರಡನೇ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರ ಬಗ್ಗೆ ಸ್ಯಾಂಡಲ್ವುಡ್ನ ಎವರ್ಗ್ರೀನ್ ನಟ ರಮೇಶ್ ಅರವಿಂದ್ ಮಾತನಾಡಿದ್ದಾರೆ
ರಾಜ್ಯದಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಾರ್ಡ್ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ.