Showing 20 of 1954 posts • Page 54 of 98
ಈ ಬಾರಿ ಗಾಂಧಿ ಜಯಂತಿ ಮತ್ತು ಮಹಾಲಯ ಅಮಾವಾಸ್ಯೆ ಒಂದೇ ದಿನ ಬಂದಿದೆ. ಗಾಂಧಿಜಯಂತಿ ದಿನ ಮಾಂಸ ಮಾರಾಟ ನಿಷೇಧ ಇರಲಿದೆ. ಹೀಗಾಗಿ ಮಹಾಲಯ ಅಮಾವಾಸ್ಯೆ ಇರುವುದರಿಂದ ಪಿತೃಪಕ್ಷ ಮಾಡೋರಿಗೆ ಮಾಂಸದ ಕೊರತೆ ಎದುರಾಗಲಿದೆ.
ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಗೂ ಇಂದಿರಾನಗರದ 80 ಅಡಿ ರಸ್ತೆ ಮತ್ತು ಇಂದಿರಾನಗರ 100 ಅಡಿ ರಸ್ತೆ ಕಡೆಯಿಂದ ಹಳೆ ಮದ್ರಾಸ್ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ಇಂದು ನಡೆಯಲಿದೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಸಿದ್ದು ಈ ಬೆನ್ನಲ್ಲೇ ಇ.ಡಿ. ಕೂಡ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಮಾಜಿ ಸಚಿವ ಬಿ.ನಾಗೇಂದ್ರರೇ ಹಗರಣದ ಕಿಂಗ್ಪಿನ್ ಅಂತ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಇಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿ ವಂಚನೆ ಮಾಡಿದ್ದ ಆರೋಪಿಯನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ರೇಣುಕಾಸ್ವಾಮಿ ಕೇಸ್ ನಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದಾರೆ. ಇತ್ತೀಚೆಗಷ್ಟೇ ಕೋರ್ಟ್ಗೆ ರೇಣುಕಾಸ್ವಾಮಿ ಕೇಸ್ ಸಂಬಂಧ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು.
ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಂದ್ರ ಸರ್ಕಾರದ ವೈಫಲ್ಯ ಅಲ್ವಾ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ದು, ಅವರ ವಿರುದ್ಧ ನೂರಾರು ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ. ಚಾರ್ಜ್ಶೀಟ್ನಲ್ಲಿನ ವಿವರಗಳು ನಿಜಕ್ಕೂ ಶಾಕಿಂಗ್ ಆಗಿವೆ.
ವಾಹನಗಳಿಗೆ ಸೆಪ್ಟೆಂಬರ್ 15ರೊಳಗೆ ಹೆಚ್ಎಸ್ಆರ್ಪಿ ನಂಬರ್ ಅಳವಡಿಸಿಕೊಂಡಿಲ್ಲ ಅಂದರೆ ಭಾರೀ ದಂಡ ಕಟ್ಟಬೇಕಾಗುತ್ತದೆ ಎಂದು ಸಾರಿಗೆ ಇಲಾಖೆ ಹೇಳಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಘಟನೆ ನಡೆದು ಮೂರು ತಿಂಗಳು ಕಳೆದಿದ್ದು ನಿತ್ಯ ಸಾಕಷ್ಟು ಮಾಹಿತಿಗಳು ಹೊರ ಭೀಳುತ್ತಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿದ ಪೊಲೀಸರು ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ವಿರುದ್ಧ 3991 ಪುಟಗಳ ವಿವರವಾದ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಚಾರ್ಜ್ಶೀಟ್ನಲ್ಲಿ ಉಲ್ಲೇಖವಾದ ವಿಚಾರಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು ಎಂದು ದರ್ಶನ್ ಅವರು ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಗೆ ಸಂಬಂಧಿಸಿದಂತ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಪವಿತ್ರಾ ಗೌಡ ಹೆಸರಿನಲ್ಲಿ ರೇಣುಕಾಸ್ವಾಮಿ ಜೊತೆ ಚ್ಯಾಟಿಂಗ್ ಆರಂಭಿಸಿ, ರೇಣುಕಾಸ್ವಾಮಿ ಪತ್ತೆ ಮಾಡಿ ಕೊಲೆ ಮಾಡುವವರೆಗೂ ಪವನ್ ಪಾತ್ರ ಪ್ರಮುಖದಾಗಿದ್ದೆ. ಪ್ರಕರಣದಲ್ಲಿ ಆತ ಎ3 ಆಗಿದ್ದಾನೆ.
ಜಿಮ್ ಟ್ರೇನರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನ ಆಗಿದೆ ಎನ್ನಲಾಗಿದೆ. ಬನಶಂಕರಿ ಪೊಲೀಸರು ಆರೋಪಿ ಅಶ್ವಿನ್ನ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ತನ್ನ ತಾಯಿಗೆ ಆಟೋ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಅಲ್ಲೇ ಇದ್ದ ಮಗಳು ತಕ್ಷಣವೇ ಆಟೋ ಮೇಲೆತ್ತಿ ತಾಯಿಯ ಪ್ರಾಣ ಉಳಿಸಿದ್ದಳು. ಆ ಬಾಲಕಿಯ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
ಪವಿತ್ರಾ ಗೌಡ ಜತೆ 10 ವರ್ಷಗಳಿಂದ ಲಿವ್-ಇನ್ ರಿಲೇಷನ್ಶಿಪ್ನಲ್ಲಿ ಇರೋದಾಗಿ ನಟ ದರ್ಶನ್ ಒಪ್ಪಿಕೊಂಡಿದ್ದಾರೆ. ಕೋರ್ಟ್ಗೆ ಸಲ್ಲಿಕೆಯಾದ ಚಾರ್ಜ್ಶೀಟ್ ಪ್ರತಿಯಲ್ಲಿ ದರ್ಶನ್ ಪವಿತ್ರಾ ಗೌಡ ಜೊತೆಗಿನ ಸಂಬಂಧದ ಹೀಗೆ ಹೇಳಿಕೆ ನೀಡಿದ್ದಾರೆ.
ಅತ್ಯಾಚಾರ ಕೇಸ್ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳಿಂದ ಮತ್ತೊಂದು ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟಿಗೆ ಸಲ್ಲಿಸಲಾದ ಚಾರ್ಜ್ಶೀಟ್ನಲ್ಲಿ ಸ್ಫೋಟಕ ವಿಷಯಗಳು ಬಯಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳಿಂದ ನಾಲ್ವರು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳಿಸಿದ್ದನು. ಈ ಕಾರಣಕ್ಕಾಗಿ ಆತನನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಹೊಡೆಯಲಾಯಿತು. ಈ ವಿಚಾರವನ್ನು ಸ್ವತಃ ದರ್ಶನ್ ಒಪ್ಪಿಕೊಂಡಿದ್ದಾರೆ.