Showing 20 of 1952 posts • Page 6 of 98
ಐದು ಮಹಿಳೆಯರ ಮೇಲೆ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ಕ್ಯಾಪ್ಜೆಮಿನಿ ತನ್ನ ಡೇಕೇರ್ ಸೌಲಭ್ಯವನ್ನು ತಾತ್ಕಾಲಿಕವಾಗಿ ಮುಚ್ಚಿದೆ.
ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಮಂದಿ ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿ ಕಾವೇರಿ ಜಲ್ಲಿ ಕ್ರಷರ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಂತರರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ, ಪ್ರಗತಿಪರ ಚಿಂತಕ ಕೆ.ಟಿ.ಶಿವಪ್ರಸಾದ್ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಚಿನ್ನದ ಜೊತೆಗೆ ಬೆಳ್ಳಿ ದರದಲ್ಲೂ ಭಾರಿ ಇಳಿಕೆಯಾಗಿದ್ದು, ದೇಶದಲ್ಲಿ ಇಂದು 100 ಗ್ರಾಂ 24 ಕ್ಯಾರಟ್ ಚಿನ್ನದ ದರದಲ್ಲಿ ಬರೋಬ್ಬರಿ 18,000 ರೂಪಾಯಿಗಳಷ್ಟು ದರ ಇಳಿಕೆಯಾಗಿದೆ.
ರಾಜ್ಯಾದ್ಯಂತ ಎಸ್ಐಆರ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾರೊಬ್ಬರೂ ಮತದಾನದ ಹಕ್ಕು ಕಳೆದುಕೊಳ್ಳಬೇಡಿ. ಮತದ ಹಕ್ಕು ಕಳೆದುಕೊಂಡರೆ ಸರ್ಕಾರದ ಸವಲತ್ತುಗಳನ್ನೂ ಕಳೆದುಕೊಳ್ಳುತ್ತೀರಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಜೀವನಾಂಶ ನೀಡಬೇಕಿಲ್ಲ ಎಂದು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.
ನಮ್ಮ ಮೆಟ್ರೋ ಪಿಲ್ಲರ್ಗಳಿಗೆ ಬೆಳಕಿನ ವ್ಯವಸ್ಥೆಗಾಗಿ ನಡೆಯುತ್ತಿದ್ದ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಸಮೀಪ ಶುಕ್ರವಾರ ನಡೆದಿದೆ.
ರಾಜಾಜಿನಗರದಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಒಣಗಿದ ಮರದ ಕೊಂಬೆಯೊಂದು ಮೋಟಾರ್ ಸೈಕಲ್ ಸವಾರನ ತಲೆಯ ಮೇಲೆ ಬಿದ್ದ ಪರಿಣಾಮ, 52 ವರ್ಷದ ವ್ಯಕ್ತಿಯೊಬ್ಬರು ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ.
ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಶನಿವಾರ ಶಾಲೆಗಳು ಹೊಸ ಸಮಯದಂತೆ ನಡೆಯಲಿದ್ದು, ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಸಮಯ ಜಾರಿಯಾಗಿದೆ.
ಕ್ಯಾಬ್ ಚಾಲಕ ಸಿಎನ್ಜಿ ತುಂಬಿಸಿಕೊಳ್ಳಲು ಕೋರಮಂಗಲಕ್ಕೆ ಬಂದಿದ್ದ ವೇಳೆ ಸಿಎನ್ಜಿ ಬಂಕ್ನಲ್ಲಿ ಅನಿರೀಕ್ಷಿತ ಅವಘಡ ಸಂಭವಿಸಿದೆ. ಗ್ಯಾಸ್ ತುಂಬುವ ವೇಳೆ ಪೈಪ್ ಸಿಡಿದು ಚಾಲಕನ ಕಣ್ಣಿಗೆ ತೀವ್ರ ಗಾಯವಾಗಿದೆ.
ಬೆಂಗಳೂರಿನಲ್ಲಿ ಭಾನುವಾರ 75 ವರ್ಷದ ಮಹಿಳೆಯನ್ನು ಅವರ ಮಗಳು ಮತ್ತು ಮೊಮ್ಮಗ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ನಗರದ ಕುರುಬರಹಳ್ಳಿ ವೃತ್ತದ ಬಳಿ ಎಟಿಎಂ ಗ್ರಾಹಕರನ್ನು ಗುರಿಯಾಗಿಸಿಕೊಂಡು ವಂಚನೆಗೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಐವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿದ್ದ ಕಾರಿನ ಚಕ್ರ ತಾಲ್ಲೂಕಿನ ಮುದುಗೆರೆ ಸಮೀಪ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಫೋಟಗೊಂಡು ಪಲ್ಟಿಯಾಗಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರು ಚಾಲಕ ಆನಂದ ಎಂಬುವರು ಮೃತಪಟ್ಟಿದ್ದಾರೆ.
ವಾಹನಕ್ಕೆ ಅಡ್ಡಲಾಗಿ ಬಂದ ನಾಯಿಯನ್ನು ತಪ್ಪಿಸಲು ಯತ್ನಿಸಿದ ಸರಕು ಸಾಗಣೆ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿರುವ ಘಟನೆ ನಗರದ ಸಂಗಮ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಕಾಂಗ್ರೆಸ್ ಸಮಾವೇಶದಿಂದ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ನಿಮಿಷ ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದ ನಾಲ್ವರು ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
: ‘ಸಂಕಲ್ಪ ಸಮಾವೇಶ’ದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರ ವರ್ತನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕೇರಳದ ಕಣ್ಣೂರು ಕಡಲಲ್ಲಿ ನೆಲಮಂಗಲದ ಯುವಕ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಾದಾವರ – ರೇಷ್ಮೆ ಸಂಸ್ಥೆ ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಹಾಡಹಗಲೇ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವೇಳೆ ಅಲ್ಲೇ ಇದ್ದ ಕಾರ್ಮಿಕನ್ನೊಬ್ಬ ಸಮಯಪ್ರಜ್ಞೆಯಿಂದ ತನ್ನ ಗಾಡಿಯ ಮೇಲಿದ್ದ ಮೂಟೆಯನ್ನು ಕಳ್ಳರ ಮೇಲೆ ಎಸೆದು ಕಳ್ಳರನ್ನು ಹೊಡೆದೋಡಿಸಿದ್ದಾನೆ. ಆದರೆ, ಆತಂಕಗೊಂಡು ಓಡುವ ವೇಳೆ ಕಳ್ಳ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಕಬ್ಬಿಣದ ಸೇತುವೆಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಕೊಳ್ಳೇಗಾಲ ನ್ಯಾಯಾಲಯದ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಕೊಳ್ಳೇಗಾಲ ನಗರದ ಮುಡಿಗುಂಡ ಬಳಿ ಜೂ.18ರ ಗುರುವಾರ ತಡರಾತ್ರಿ ಸಂಭವಿಸಿದೆ.