Showing 20 of 1952 posts • Page 60 of 98
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಜೈಲಿನಲ್ಲಿರುವ ನಟ ದರ್ಶನ್ಗೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಆರ್ಎಸ್ಎಸ್ ಇರದ ಕಡೆ ಗಲಭೆಗಳು ನಡೆಯುವುದಿಲ್ಲ ಎಂದು ಹಿರಿಯ ನಟ ಪ್ರಕಾಶ್ ರಾಜ್ ಅವರು ಹಿಂದೂ ಧರ್ಮ, ಬಿಜೆಪಿ, ಕುರಿತು ಹೇಳಿಕೆ ನೀಡಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ ಇದೇ ತಿಂಗಳು 27ರಂದು ನಡೆಸುತ್ತಿರುವ ಪರೀಕ್ಷೆಯನ್ನು ಮುಂದೂಡುವಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಓವಿ ಟ್ರ್ಯಾಪ್ ಅಳವಡಿಕೆಗೆ ಮುಂದಾಗಿದೆ.
ನಾಡಿನೆಲ್ಲೆಡೆ ಇಂದು ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲೂ ಜನ್ಮಾಷ್ಟಮಿ ವಿಜೃಂಭಣೆಯಿಂದ ನಡೆಯುತ್ತಿದೆ.
ಶಾಸಕರ ಹೆಸರಿನಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿ ಮಾಡಿ ಕೆಲಸ ಕೊಡಿಸಿದ ಆರೋಪದ ಮೇಲೆ ಇಬ್ಬರನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಟ ದರ್ಶನ್ ಅವರು ಸಿಗರೇಟ್ ಸೇದುತ್ತ ಕುಳಿತಿದ್ದ ಫೋಟೋ ಹಾಗೂ ವಿಡಿಯೋ ಕಾಲ್ ಸಂಬಂಧಿಸಿದಂತೆ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ
ದರ್ಶನ್ ಅವರು ಜೈಲಲ್ಲಿ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬೆನ್ನಲ್ಲೇ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.
ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜೈಲಿನಿಂದಲೇ ವಿಡಿಯೋ ಕಾಲ್ ಮಾಡಿದ ಸುದ್ದಿ ತೀವ್ರ ಸಂಚಲನ ಸೃಷ್ಟಿಸಿದೆ. ಜೈಲಿಂದಲೇ ವಿಡಿಯೋ ಕಾಲ್ನಲ್ಲಿ ದರ್ಶನ್ ಕಾಣಿಸಿಕೊಂಡ ವಿಡಿಯೋ ಲೀಕ್ ಆಗಿದ್ದು ಹೊಸ ಚರ್ಚೆಗೆ ಗುರಿಯಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ.
ಣುಕಾ ಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಆರೋಪಿ ನಟ ದರ್ಶನ್ ಅವರ ಫೋಟೊವೊಂದು ವೈರಲ್ ಆಗ್ತಿದೆ. 65 ದಿನಗಳಿಂದ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋವೊಂದು ವೈರಲ್ ಆಗಿದೆ.
ಕೆಎಎಸ್ ಪೂರ್ವಭಾವಿ ಪರೀಕ್ಷೆ ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಮತ್ತು ತರಾತುರಿಯಲ್ಲಿ ಪರೀಕ್ಷೆಯನ್ನು ನಡೆಸುತ್ತಿಲ್ಲ. ಅಭ್ಯರ್ಥಿಗಳು ತಯಾರಿಯಾಗಲು ಸಾಕಷ್ಟು ಸಮಯ ನೀಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 26ರಂದು ಬೆಂಗಳೂರು ನಗರದಾದ್ಯಂತ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಸಿಲಿಕಾನ್ ಸಿಟಿಯ ಸಂಚಾರ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೋಷಪೂರಿತ ನೋಂದಣಿ ಫಲಕ ಹೊಂದಿರುವ 9,684 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಾರು ಚಾಲಕನೋರ್ವ ಪಾಸ್ ದುರುಪಯೋಗಪಡಿಸಿಕೊಂಡಿರುವ ಘಟನೆ ನಡೆದಿದ್ದು, ಘಟನೆ ಬಳಿಕ ಕಾರು ಚಾಲಕ ನಾಪತ್ತೆಯಾಗಿದ್ದಾನೆ.
ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ನಗರದ ʼ220/66/11 ಕೆವಿ ಎಸ್ಆರ್ಎಸ್ ಪೀಣ್ಯʼ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಆ.25 ರಂದು ಭಾನುವಾರ
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸುಳಿವು ನೀಡಿದ್ದಾರೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್ ಸಿ) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ
ಆಗಸ್ಟ್ 25 ಮತ್ತು 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಬೆಂಗಳೂರು ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಸಲಹೆ ನೀಡಿದ್ದಾರೆ. ಈ ಸಂದರ್ಭದಲ್ಲಿ