Showing 20 of 1952 posts • Page 61 of 98
ಕೆಎಸ್ಆರ್ಟಿಸಿ ಬಸ್ ದರ ಏರಿಕೆಯಾಗುವುದು ಬಹುತೇಕ ಖಚಿತ. ಬಸ್ ದರ ಏರಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ.
ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರಿಗೆ ವಿಶ್ವಾಸದ ಕೊರತೆ ಇದೆ. ಆದ್ದರಿಂದಲೇ 11 ಮಸೂದೆಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು.
ಲಾರಿ ಚಾಲಕನ ನಿರ್ಲಕ್ಷ್ಯದಿಂದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಇಂದು ನಸುಕಿನ ಜಾವ 1:30ರ ವೇಳೆಗೆ ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾದರೆ, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಈಗ ದೊಡ್ಡ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ಕೋರ್ಟ್ಗೆ ಎಸ್ಐಟಿಯಿಂದ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ.
ಶಾಲಾ ಪ್ರಾಂಶುಪಾಲರು ಬೈದರೆಂದು ವಿದ್ಯಾರ್ಥಿನಿಯೋರ್ವಳು ಶಾಲೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಬಾಪೂಜಿನಗರದ Al ಫಹಾದ್ ಶಾಲೆಯಲ್ಲಿ ನಡೆದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
ನೆರೆಯ ರಾಜ್ಯಗಳ ಮದ್ಯ ಮಾರಾಟ ದರವನ್ನು ಪರಿಗಣಿಸಿ ರಾಜ್ಯದಲ್ಲೂ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಜನರು, ವಿರೋಧ ಪಕ್ಷದವರು, ಮೀಡಿಯಾದವರು ಸೇರಿದಂತೆ ಯಾರೇ ಬೈದರು, ವಿರೋಧಿಸಿದರು ನೀರಿನ ದರ ಏರಿಸುತ್ತೇವೆ. ಚರ್ಚೆ, ಧರಣಿ ಮಾಡಿದರೂ ಬಿಡಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಚಂದ್ರಯಾನ -3 ಯಶಸ್ಸು ಹಾಗೂ ಪಗ್ನಾನ್ ರೋವರ್ ಚಂದ್ರನಗಂಳಕ್ಕೆ ಮುತ್ತಿಟ್ಟ ಐತಿಹಾಸಿಕ ದಿನವನ್ನ ಭಾರತದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನವೆಂದು ಆಚರಿಸಲಾಗುತ್ತದೆ.
2017ರಲ್ಲಿ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಅವರನ್ನು ಕೊ*ಲೆಗೈದ ಪ್ರಕರಣದ ಆರೋಪಿ ಮೋಹನ್ ಎನ್ ನಾಯಕ್ ಗೆ ನೀಡಿರುವ ಜಾಮೀನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.
ಸಿಎಂ ಸಿದ್ದರಾಮಯ್ಯನವರು ಸಂಜೆ ಶಾಸಕಾಂಗ ಸಭೆ ಮುಗಿದ ಬಳಿಕ ಇಂದೇ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ನಾಳೆ ಸಿಎಂ ಸಿದ್ದರಾಮಯ್ಯನವರು ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ.
ಕಾರಿಗೆ ಬೈಕ್ ತಾಗಿದ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಮಹೇಶ್ (21) ಹತ್ಯೆಯಾದ ಯುವಕ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸಿಲಿಕಾನ್ ಸಿಟಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಬೆಂಗಳೂರು ಪೊಲೀಸರು ದಿಟ್ಟ ಕ್ರಮ ಕೈಗೊಂಡಿದ್ದಾರೆ. ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ಆದೇಶ ಹೊರಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಬರೋಬ್ಬರಿ 2 ತಿಂಗಳು ಕಳೆದಿವೆ. ದರ್ಶನ್ ಅಭಿಮಾನಿ ಪರಪ್ಪನ ಅಗ್ರಹಾರದ ಮುಂದೆಯೇ ಉರುಳು ಸೇವೆ ಮಾಡಲು ಮುಂದಾಗಿದ್ದಾರೆ.
ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಕುಮಾರಸ್ವಾಮಿ ಸವಾಲ್ ಹಾಕಿದರು.
ಬೀಡಿ. ಸಿಗರೇಟ್. ಬೀಡಾ , ಗುಟ್ಕಾ ಶಾಪ್ಗಳು, ಬೇಕರಿ, ಚಿಲ್ಲರೆ ಅಂಗಡಿಗಳು, ಫುಟ್ಪಾತ್ ಅಂಗಡಿಗಳು ಇನ್ನು ಮುಂದೆ ಬಿಬಿಎಂಪಿಯಿಂದ ಕಡ್ಡಾಯವಾಗಿ ಲೈಸನ್ಸ್ ಪಡೆದಿರಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಹೊಸ ನಿಯಮ ಜಾರಿಗೊಳಿಸಿದೆ.