Showing 20 of 1954 posts • Page 66 of 98
ರೆಸ್ಟೋರೆಂಟ್ ಒಂದರ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್ ಪೋನ್ ಇಟ್ಟು ಅಸಭ್ಯ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ವಿಕೃತ ಮನಸ್ಸಿನ ಹೊಟೇಲ್ ಕೆಲಸಗಾರನೊಬ್ಬನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಾಲ್ಕು ದಶಕಗಳಿಂದ ರಾಜಕೀಯದಲ್ಲಿದ್ದರೂ ನನಗೆ ಮೈಸೂರಿನಲ್ಲಿ ಸ್ವಂತ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಟ ಚೇತನ್ ಅಹಿಂಸಾ ಕಿಡಿಕಾರಿದ್ದಾರೆ.
ಸಂಸ್ಥೆಯ ಉದ್ಯೋಗಿಯೇ ಬೆಂಗಳೂರಿನ ಪ್ರತಿಷ್ಠಿತ ಥರ್ಡ್ ವೇವ್ ಕಾಫಿ ಔಟ್ಲೆಟ್ನ ಮಹಿಳೆಯರ ಶೌಚಾಲಯದಲ್ಲಿ ಕಳ್ಳ ಕ್ಯಾಮರಾ ಇರಿಸಿದ್ದು, ಆತನನ್ನು ಬಂಧಿಸಲಾಗಿದೆ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.
ಸೈಬರ್ ಕ್ರೈಂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ವಂಚಕನೊಬ್ಬ ಆನ್ಲೈನ್ ಹೂಡಿಕೆ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿ ಬಳಿಯಿಂದ ಬರೋಬ್ಬರಿ 1.53 ಕೋಟಿ ರೂಪಾಯಿ ಪೀಕಿಸಿದ್ದಾನೆ.
ನೈರುತ್ಯ ಮಾನ್ಸೂನ್ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಆಗಸ್ಟ್ 11ರಂದು ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಬಾಂಗ್ಲಾದೇಶದ ಹಿಂದೂಗಳ ಮತ್ತು ದೇವಸ್ಥಾನಗಳ ರಕ್ಷಣೆಗಾಗಿ ಭಾರತ ಸರ್ಕಾರವು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.
ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು ರೈಲುಗಳು ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದು ಮುಂಜಾನೆ ಬಾಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದ್ದು ಹಳಿ ಮೇಲೆ ಮಣ್ಣುಗಳು ನಿಂತಿವೆ.
ಇಂದು ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
‘ಪಾವತಿಸುವ ಅತಿಥಿ ಗೃಹಗಳು ಗಳಿಗೆ ಉದ್ದಿಮೆ ಪರವಾನಗಿಯನ್ನು ನೀಡುವಾಗ ಮಾರ್ಗಸೂಚಿ ಪಾಲನೆಯ ಆದೇಶ ಜಾರಿ ಮಾಡುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹೆಡ್ ಕಾನ್ಸ್ಟೇಬಲ್ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನಲ್ಲಿ ಡೆಂಗ್ಯೂವಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದೆ.
ವಯನಾಡಿನಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೆರವು ನೀಡಲು ಸುಮಾರು 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರನ್ ಮುಂದಾಗಿದ್ದಾನೆ.
ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡದ ಭಾಗವಾಗಿದ್ದ ತಮ್ಮ ರಾಜ್ಯದ ಎಲ್ಲಾ ಆಟಗಾರರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ 1 ಕೋಟಿ ರೂಪಾಯಿ
ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಮೊಹಮ್ಮದ್ ಹಸನೈನ್ಗೆ ಚಿನ್ನದ ಪದಕ ಲಭಿಸಿದೆ. ಶಿವಮೊಗ್ಗದಲ್ಲಿ ಎ ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ವತಿಯಿಂದ
ಮಂಗಳೂರಿನ ಕಿಮ್ಸ್ನಲ್ಲಿ ಎಂಡಿ ಎಮರ್ಜೆನ್ಸಿ ಮೆಡಿಸಿನ್ ಓದುತ್ತಿರುವ ಡಾ: ಅಫೀಫಾ ಹಕೀಂ ಅವರು ಇತ್ತೀಚೆಗೆ ಮೇಲೆಷಿಯಾದ ಕೌಲಲಾಂಪೂರನಲ್ಲಿ ಜರುಗಿದ ಏಷ್ಯಾ ಯುಥ್ ಮಾಡೆಲ್
ಭಾರೀ ಭೂಕುಸಿತದಿಂದ ಹಾನಿಗೀಡಾಗಿದ್ದ ಕಡಗರವಳ್ಳಿ ಹಾಗೂ ಯೆಡಕುಮೇರಿ ರೈಲು ಹಳಿ ದುರಸ್ಥಿ ಕಾರ್ಯ ಪೂರ್ಣಗೊಂಡ 4 ದಿನದ ಬಳಿಕ ಪ್ರಯಾಣಿಕ ರೈಲಿನ ಓಡಾಟ ಆರಂಭಿಸಲಾಗಿದೆ.
ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬನ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿ, ಕನ್ನಡದಲ್ಲಿ ಮಾತನಾಡುವಂತೆ ಒತ್ತಾಯಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಇಂದು(ಆ.8ರಂದು) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಗೂಂಡಾಗಿರಿ ತೋರಿಸಿದ್ದಾನೆ. ಕಾರು ಚಾಲಕನ ಮುಖಕ್ಕೆ ಉಗಿದು ಬಳಿಕ ಕಾರಿನ ಮಿರರ್ ಹೊಡೆದು ಹಾಕಿದ್ದಾನೆ. ಬೆಂಗಳೂರಿನ ಮಾರತಹಳ್ಳಿಯ