Showing 20 of 1954 posts • Page 69 of 98
ನೆಲಮಂಗಲದ ಶ್ರೀನಂದಿ ವೈಭವ್ ಹೋಟೆಲ್ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸನ್ನಿಧಿ(24) ಮೃತ ವ್ಯಕ್ತಿ. ಹೋಟೆಲ್ ಪಕ್ಕದ ಜಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಜಿ.ಟಿ. ವರ್ಲ್ಡ್ ಮಾಲ್ಗೆ ಪಂಚೆ ಧರಿಸಿ ಬಂದ ರೈತನಿಗೆ ಪ್ರವೇಶ ನಿರಾಕರಣೆ ಮಾಡಿದ ಬೆನ್ನಲ್ಲಿಯೇ ಎಲ್ಲ ಶಾಪಿಂಗ್ ಮಾಲ್ಗಳಿಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಯನ್ನು ಪ್ರಕಟಣೆ ಮಾಡಿ ಆದೇಶ ಹೊರಡಿಸಿದೆ.
ಆಟವಾಡುತ್ತಿದ್ದ 4 ವರ್ಷದ ಬಾಲಕ ಇದ್ದಕ್ಕಿದ್ದಂತೆ ನಮ್ಮ ಮೆಟ್ರೋ ಹಳಿಗೆ ಜಿಗಿದಿರುವ ಘಟನೆ ನೇರಳೆ ಮಾರ್ಗದಲ್ಲಿರುವ ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಗುರುವಾರ ರಾತ್ರಿ ಸಂಭವಿಸಿದ್ದು, ಭಾರೀ ಅನಾಹುತವೊಂದು ತಪ್ಪಿದೆ.
ಬಿಜೆಪಿ ಹಾಗೂ ಜೆಡಿಎಸ್ ಮುಡಾ ಹಗರಣದ ವಿರುದ್ಧ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದರು.
ಪ್ರವಾಹ ಪೀಡಿತ ವಯನಾಡಿಗೆ ಮೈಸೂರು ರಸ್ತೆಯ ಸ್ಯಾಟಲೈಟ್ ನಿಲ್ದಾಣದಿಂದ ಬಸ್ ಸಂಚಾರ ಗುರುವಾರ ರಾತ್ರಿಯಿಂದ ಆರಂಭವಾಗಿದೆ. ಕೇರಳ ರಾಜ್ಯ ರಸ್ತೆ ಸಾರಿಗೆಯ 5 ಬಸ್ಸುಗಳ ಸಂಚಾರ ಆರಂಭವಾಗಿದೆ.
ಬಿಜೆಪಿ ಹಾಗೂ ಜೆಡಿಎಸ್ ನಿಂದ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ.
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಸುತ್ತಮುತ್ತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸೀಡಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (KIAB/BLR ವಿಮಾನ ನಿಲ್ದಾಣ) ಮಾವು ರಫ್ತಿನಲ್ಲಿ ಗಮನಾರ್ಹ ಸಾಧನೆ ಮಾಡಿದೆ. 2024ನೇ ಸಾಲಿನಲ್ಲಿ 822 ಮೆಟ್ರಿಕ್ ಟನ್ ಮಾವಿನ ಹಣ್ಣಿನ ಸಾಗಾಟಣೆ
ಹಾಡುಹಗಲೇ ನಗರದ ಶೇಷಾದ್ರಿ ಪುರಂನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ನಡೆದಿದ್ದು, ಇದೀಗ ಹಂತಕರಿಗಾಗಿ ಖಾಕಿ ಬಲೆ ಬೀಸಿದ್ದಾರೆ.
ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಇಂದು (ಆಗಸ್ಟ್ 1) ಈ ಕೇಸ್ನ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಹೆಚ್ಚಾಗಿ ಜನ ಬೇಸಿಗೆಯಲ್ಲಿ ಎಳನೀರನ್ನು ಕುಡಿಯಲು ಬಯಸುತ್ತಾರೆ. ಆದರೆ ಈ ವರ್ಷ ಮಳೆಗಾಲದಲ್ಲಿಯೂ ಎಳನೀರಿನ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯಪಾಲರು ನೋಟೀಸ್ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಬಂದಿರುವ ಮನವಿ ಹಿನ್ನೆಲೆಯಲ್ಲಿ ನೋಟೀಸ್ ನೀಡಲಾಗಿದೆ.
ಕರ್ನಾಟಕದ ಎನ್.ಆರ್.ನಾರಾಯಣ ಮೂರ್ತಿ ಸೇರಿ ಹಲವರು ಹುಟ್ಟು ಹಾಕಿರುವ ಐಟಿ ದೈತ್ಯ ಇನ್ಫೋಸಿಸ್ ಕಂಪನಿ ವಿರುದ್ಧ ತೆರಿಗೆ ವಂಚನೆಯ ಆರೋಪ.
ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ ಕೊಡುವ ಕಾರ್ಯಕ್ರಮ ಶುರು ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಭಾರತೀಯ ಜನತಾ ಪಾರ್ಟಿಯ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಯ ನೂತನ ಸದಸ್ಯರನ್ನಾಗಿ ಶ್ರೀ. ಮುರಳಿ ಹೊಸಮಜಲು ಅವರನ್ನು ಆಯ್ಕೆ ಮಾಡಲಾಗಿದೆ
ರಾಜಸ್ಥಾನದಿಂದ ನಾಯಿ ಮಾಂಸ ಮಾರಾಟ ದಂಧೆ ನಡೆಯುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಅಧಿಕೃತ ರಿಪೋರ್ಟ್ ಸರ್ಕಾರದ ಕೈ ಸೇರಿದೆ.
ನಟ ದರ್ಶನ್ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ. ದರ್ಶನ್ಗೆ ಇನ್ನೂ 21 ದಿನ ಜೈಲೂಟವೇ ಗತಿಯಾಗಿದೆ.
ಮೂಡಾ ಮತ್ತು ವಾಲ್ಮೀಕಿ ಹಗರಣ ವಿರುದ್ಧವಾಗಿ ಬಿಜೆಪಿ ಹಮ್ಮಿಕೊಂಡಿದ್ದ ಪಾದಯಾತ್ರೆ ಕುರಿತಂತೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.