Showing 20 of 1954 posts • Page 7 of 98
ಹಾಡಹಗಲೇ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವೇಳೆ ಅಲ್ಲೇ ಇದ್ದ ಕಾರ್ಮಿಕನ್ನೊಬ್ಬ ಸಮಯಪ್ರಜ್ಞೆಯಿಂದ ತನ್ನ ಗಾಡಿಯ ಮೇಲಿದ್ದ ಮೂಟೆಯನ್ನು ಕಳ್ಳರ ಮೇಲೆ ಎಸೆದು ಕಳ್ಳರನ್ನು ಹೊಡೆದೋಡಿಸಿದ್ದಾನೆ. ಆದರೆ, ಆತಂಕಗೊಂಡು ಓಡುವ ವೇಳೆ ಕಳ್ಳ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಕಬ್ಬಿಣದ ಸೇತುವೆಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಕೊಳ್ಳೇಗಾಲ ನ್ಯಾಯಾಲಯದ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಕೊಳ್ಳೇಗಾಲ ನಗರದ ಮುಡಿಗುಂಡ ಬಳಿ ಜೂ.18ರ ಗುರುವಾರ ತಡರಾತ್ರಿ ಸಂಭವಿಸಿದೆ.
ಸಿಎಂ ಡಿ.ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ತೆರಳಿದ್ದಾರೆ.
ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರಿನ ವಿವಿಧೆಡೆ ಬಾಡಿಗೆ ಮನೆ ಹಾಗೂ ಸ್ಪಾಗಳನ್ನು ಕೇಂದ್ರವಾಗಿಸಿಕೊಂಡು ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹೋಬಳಿಯ ಚಿಕ್ಕಹರಳಗೆರೆ ಮುಖ್ಯ ರಸ್ತೆಯಲ್ಲಿ ಬುಧವಾರ ಶಾಲಾ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಚಿಕ್ಕಹರಳಗೆರೆ ಗ್ರಾಮದ ಕಾಮಾಕ್ಷಮ್ಮ (49) ಮೃತಪಟ್ಟಿದ್ದು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಿವ್-ಇನ್ ರಿಲೇಶನ್ಶಿಪ್ ನಲ್ಲಿದ್ದ ಪ್ರೇಯಸಿಯನ್ನು ಕತ್ತು ಹಿಸುಕಿ ಹತ್ಯೆಗೈದ ಪ್ರಕರಣದಡಿ ಆರೋಪಿಯನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಾಡಿಗೆ ಮನೆಯಲ್ಲಿ ಅನುಷಾ ಎಂಬ 20 ವರ್ಷದ ಮಹಿಳೆಯನ್ನು ಆಕೆಯ ಲಿವ್-ಇನ್ ಪಾರ್ಟ್ನರ್ ಶರತ್ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.
ಕಳೆದ ಡಿಸೆಂಬರ್ 2025 ರಲ್ಲಿ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ 30 ದೇಶಗಳ 43 ಅನಿವಾಸಿ ಸಂಘಟನೆಗಳ ಪ್ರತಿನಿಧಿಗಳ ನಿಯೋಗ ಸಿಎಂ, ಡಿಸಿಎಂ ಭೇಟಿ ನೀಡಿ ಇಟ್ಟ ಬೇಡಿಕೆಗೆಯನ್ನು ಈಡೇರಿಸಿ, ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಘೋಷಣೆ ಮಾಡಿದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ವಿಶ್ವದಾದ್ಯಂತದ ಅರವತ್ತಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಒಕ್ಕೊರಲಿನಿಂದ ಅಭಿನಂದಿಸಿವೆ.
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬ್ಯಾಂಕ್ನ ಸಹೋದ್ಯೋಗಿ ಗೆಳತಿಯರಿಬ್ಬರು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದ ಖಾಸಗಿ ಸ್ವೀಟ್ಸ್ ಅಂಗಡಿ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಬೆಂಗಳೂರು: ಮಗಳನ್ನು ಕಾಲೇಜಿಗೆ ಬಿಡಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ರಸ್ತೆ ಗುಂಡಿಯಿಂದಾಗಿ ವಾಹನ ಸ್ಕಿಡ್ ಆಗಿ ಬಿದ್ದು, ಶಾಲಾ ಬಸ್ ಹರಿದು ಭೀಕರವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕಾಂತಾ ಎಂದು ಗುರುತಿಸಲಾಗಿದೆ. ಕಾಂತಾ ಅವರು ತಮ್ಮ ಮಗಳು ನೇಹಾ ಅವರನ್ನು ಕಾಲೇಜಿಗೆ ಬಿಡಲು ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ರಸ್ತೆಯಲ್ಲಿದ್ದ ಗುಂಡಿ ಸರಿಯಾಗಿ ಕಾಣಿಸದೆ, ಅದಕ್ಕೆ ಸಿಲುಕಿ ಇಬ್ಬರೂ […]
ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ನಿಂದ ಬಂದ ಪ್ರಯಾಣಿಕರೊಬ್ಬರಿಂದ 14.93 ಕೆ.ಜಿ ಹೈಡ್ರೋಫೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಜಪ್ತಿ ಮಾಡಿದ್ದಾರೆ.
ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 40ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಬರೋಬ್ಬರಿ ₹5.30 ಕೋಟಿ ವಂಚಿಸಿದ್ದ ತಂದೆ ಮತ್ತು ಮಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 9 ರಿಂದ ಜೂನ್ 13 ರವರೆಗೆ ವ್ಯಾಪಕ ಮಳೆಯಾಗುವಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿ, ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಮದುವೆ ಆಗುವ ನೆಪದಲ್ಲಿ ಯುವತಿಯೊಬ್ಬಳು ಯುವಕನಿಗೆ ಬರೋಬ್ಬರಿ 35 ಲಕ್ಷ ರೂ ವಂಚಿಸಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ.