Showing 20 of 1952 posts • Page 78 of 98
‘ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್ ಆಗಿದ್ದ ನಿರೂಪಕಿ ದಿವ್ಯ ವಸಂತ ಅವರು ಇತ್ತೀಚೆಗೆ ಬ್ಲ್ಯಾಕ್ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದಲ್ಲಿ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದರು
ರಾಜ್ಯದಲ್ಲಿ ಡೆಂಘೀ ಅಬ್ಬರ ಮುಂದುವರೆದಿದ್ದು ಬುಧವಾರ 293 ಮಂದಿಗೆ ಡೆಂಘಿ ಸೋಂಕು ದೃಢಪಟ್ಟಿದೆ. ಒಟ್ಟು ವರದಿಯಾದ ಪ್ರಕರಣಗಳ ಸಂಖ್ಯೆ 7,840ಕ್ಕೆ ಏರಿಕೆಯಾಗಿದೆ.
ಅಕ್ರಮವಾಗಿ ವಿದೇಶದಿಂದ ಚಾಕೋಲೆಟ್ ಹಾಗೂ ಬಿಸ್ಕತ್ ಸೇರಿದಂತೆ ಇತರೆ ಆಹಾರ ಉತ್ಪನ್ನಗಳನ್ನು ಆಮದು ಮಾಡಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಂಬೆಳಗ್ಗೆ ರಾಜ್ಯದ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ ನಡೆಸಿ, ಭ್ರಷ್ಟಾಚಾರ ಆರೋಪಿತ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳಲ್ಲಿ ಪರಿಶೀಲನೆ ಆರಂಭಿಸಿವೆ.
ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರಬಂಧನ ಸನ್ನಿಹಿತವಾಗಿದೆ. ನಿನ್ನೆ ನಾಗೇಂದ್ರ ಬೆಂಗಳೂರು , ಬಳ್ಳಾರಿ ನಿವಾಸ, ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಾಲಾಡಿದ್ದಾರೆ.
ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಎಂ.ಎನ್. ಅಹೋಬಲಪತಿ, ಕೆ.ನಿಂಗಪ್ಪ, ಛಾಯಾಗ್ರಾಹಕ ಕೆ.ವೆಂಕಟೇಶ್ ಅವರು ನೇಮಕವಾಗಿದ್ದಾರೆ.
ಮುಡಾದ ಅಕ್ರಮವನ್ನು ಖಂಡಿಸಿ ಬಿಜೆಪಿ ವತಿಯಿಂದ ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್ನನ್ನು ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಜುಲೈ 18ಕ್ಕೆ ಮುಂದೂಡಿದೆ.
ಬೆಂಗಳೂರಿನ ಚೆಲ್ಲಘಟ್ಟ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ಹಿನ್ನೆಲೆ ಯಲ್ಲಿ ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲು ಗಳನ್ನು ಮಂಗಳವಾರ ರಾತ್ರಿ 10 ಗಂಟೆಯಿಂದ ಇಂದು ಬೆಳಗ್ಗೆ 9 ಗಂಟೆಯ ವರೆಗೆ ಸ್ಥಗಿತ ಮಾಡಲಾಗಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಕೂಡ ಇಂದು ಬುಧವಾರ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ.
ಮುಡಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದೂರು ದಾಖಲಾಗಿದೆ.
ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೇ, ಇತ್ತ ನಟ ದರ್ಶನ್ ಅಭಿಮಾನಿಗಳ ಹುಚ್ಚಾಟ ಮಾತ್ರ ಹೆಚ್ಚಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಮಹತ್ವಾಕಾಂಕ್ಷೆಯ ‘ಭಾರತ್ ಅಕ್ಕಿ’ ಯೋಜನೆಗೆ ಹೊಸ ಪಾಲಿಸಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕೆ ಸಂಬಂಧಪಟ್ಟ ಪ್ರಕ್ರಿಯೆಗಳು ಶುರುವಾಗಿದೆ.
ಇಂದು ಬೆಳಗ್ಗೆ 8:50ರ ಸಮಾರಿಗೆ ನಗರದ ಎಂ.ಜಿ ರೋಡ್ನ ಅನಿಲ್ ಕುಂಬ್ಳೆ ಸರ್ಕಲ್ ಬಳಿ 144ಈ ಮಾರ್ಗದ ಬಿಎಂಟಿಸಿ ಬಸ್ವೊಂದು ದಿಢೀರ್ ಅಗ್ನಿಗೆ ಆಹುತಿಯಾಗಿದೆ.
ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಕಬ್ಬನ್ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಜ್ಯದಲ್ಲಿ ಡೆಂಗ್ಯೂ ರೌದ್ರವತಾರವಾಡುತ್ತಿದೆ. ಸೋಮವಾರ ಒಂದೇ ದಿನ 197 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು ಮೈಸೂರಿನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಆ ಮೂಲಕ ಡೆಂಗ್ಯೂವಿನಿಂದ
ರಾಜ್ಯದಲ್ಲಿ ಇಂದು 197 ಡೆಂಗ್ಯೂ ಕೇಸ್ಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 303ಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೇ 95 ಮಂದಿಗೆ ಸೋಮವಾರ ಸೋಂಕು ತಗುಲಿದೆ.