Showing 20 of 1952 posts • Page 81 of 98
ಈಗಾಗಲೇ ರಾಜ್ಯದೆಲ್ಲೆಡೆ ಮುಂಗಾರು ಮಳೆಯಾಗುತ್ತಿದ್ದು, ಇದರ ಬೆನ್ನಲ್ಲೇ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗಣಾ ರಣಾವತ್ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪೋಷಕರು ತಮ್ಮ ಪ್ರೀತಿಗೆ ನಿರಾಕರಿಸಿದರೆಂದು ಯುವ ಪ್ರೇಮಿಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೈಸ್ ರಸ್ತೆ ಸಮೀಪದ ಕೆರೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ -ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂದು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ್ದಾರೆ.
ಬೆಂಗಳೂರು ನಗರದ ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲದೆ, ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುಳ್ಳು ಸುದ್ದಿಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದೇಶದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಿವೆ. ಬ್ರಿಟಿಷರ ಕಾಲದಲ್ಲಿದ್ದ ಐಪಿಸಿ, ಸಿಆರ್ಪಿಸಿ ಮತ್ತು ಎವಿಡೆನ್ಸ್ ಆ್ಯಕ್ಟ್ ಗಳು ಬದಲಾವಣೆ ಆಗಿವೆ.
ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಮತ್ತು ಅಸಹಜ ಲೈಂಗಿಕ ದೌರ್ಜ್ಯನ ಕೇಸ್ನಡಿ ಹೆಚ್.ಡಿ ರೇವಣ್ಣನವರ ಇಬ್ಬರು ಮಕ್ಕಳು ಜೈಲು ಸೇರಿದ್ದಾರೆ.
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರಿನ ಐಇಇಇ ವಿದ್ಯಾರ್ಥಿ ಪರಿಷತ್ತಿನ ಒಂದು ಪ್ರಮುಖ ಅಂಗವಾದ ಕಂಪ್ಯೂಟರ್ ವಿಜ್ಞಾನ ಸಂಘವು ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಜೂನ್ 29 ರಂದು ಜರುಗಿತು.
ಇದೀಗ ಪ್ರಯಾಣಿಕರಿಗೆ ಇಂಡಿಗೋ ಸಿಹಿ ಸುದ್ದಿ ನೀಡಿದೆ.ಬೆಂಗಳೂರು ಹಾಗೂ ಅಬುಧಾಬಿ ಮಧ್ಯೆ ಆಗಸ್ಟ್ 1ರಿಂದ ನೇರ ವಿಮಾನ ಸೇವೆ ಆರಂಭಿಸುವುದಾಗಿ ಇಂಡಿಗೋ ಏರ್ಲೈನ್ಸ್ ತಿಳಿಸಿದೆ.
ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆಯ ವಿಚಾರ ತೀವ್ರಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಮಹತ್ವದ ಚರ್ಚೆ ನಡೆಸಿದೆ
ರೇಣುಕಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರನ್ನು ದಿನಕೊಬ್ಬರು ಬಂದು ನೋಡಿ ಹೋಗುತ್ತಿದ್ದಾರೆ. ಅಭಿಮಾನಿಗಳು, ಸ್ನೇಹಿತರು ಸಂಬಂಧಿಕರು ಬಂದು ವಿಚಾರಿಸಿ ಹೋಗುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಅವರನ್ನು ನಿರ್ದೇಶಕ ಜೋಗಿ ಪ್ರೇಮ್ ಮತ್ತು ನಟಿ ರಕ್ಷಿತಾ ಭೇಟಿಯಾಗಿದ್ದಾರೆ.
ಕರ್ನಾಟಕದಲ್ಲಿ ಫಿಲಂ ಸಿಟಿ ಇಲ್ಲ. ಕರ್ನಾಟಕ ರಾಜ್ಯದಲ್ಲಿ ಫಿಲಂ ಸಿಟಿ ಒಂದನ್ನು ನಿರ್ಮಾಣ ಮಾಡಬೇಕು ಎಂಬುದು ಡಾ ರಾಜ್ಕುಮಾರ್ ಅವರ ಕನಸಾಗಿತ್ತು. ಆ ಕನಸನ್ನು ನನಸು ಮಾಡಿಯೇ ಮಾಡುತ್ತೀವಿ
ಸ್ವಾಮೀಜಿಗಳ ಹೇಳಿಕೆ ತಪ್ಪು ಅಂತ ಹೇಳಕ್ಕಾಗಲ್ಲ, ಅವರಿಗೂ ಕಾಳಜಿ ಇರಬಹುದು. ಅವರು ಅವರ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೈಕ್ ಸ್ಕಿಡ್ ಆಗಿ ಬಿದ್ದು ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ಕಾಲೇಜು ಮುಂಭಾಗ ಮಧ್ಯರಾತ್ರಿ ನಡೆದಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 2 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಆರೋಗ್ಯ ಸಚಿವರು ಸೂಚಿಸಿದ್ದಾರೆ. ಜೊತೆಗೆ ಡೆತ್ ಆಡಿಟ್ ಮಾಡಲು ಮುಂದಾಗಿದ್ದಾರೆ.
ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಡಿಜಿಯಾಗಿ ಹೆಚ್ಚುವರಿ ಹುದ್ದೆ