Showing 20 of 1954 posts • Page 83 of 98
ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದರು.
ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಬೆಂಗಳೂರು ವಿಶ್ವ ವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ.
ರಾಜಧಾನಿಯಲ್ಲಿ ಸರ್ಕಾರಿ ಡೆಂಟಲ್ ಕ್ಲಿನಿಕ್ ಶುರು ಮಾಡುವಂತೆ ಆರೋಗ್ಯ ಇಲಾಖೆ ಹಾಗೂ ಸರ್ಕಾರಕ್ಕೆ ಪತ್ರ ಬರೆದು ಜನರು ಮನವಿ ಮಾಡಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಆದ್ರೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಜೂನ್ 26) ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.
ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಮತ್ತು ದರ್ಶನ್ ಸೇರಿದಂತೆ 17 ಮಂದಿ ಜೈಲು ಪಾಲಾಗಿದ್ದಾರೆ. ಇದೀಗ ಮನೆ ಮಹಜರು ಮಾಡಲು ಆರ್.ಆರ್ ನಗರದ ಮನೆಗೆ ಕರೆದುಕೊಂಡು ಹೋಗಿದ್ದಾಗ
ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.
ಮಾಲಿನ್ಯ ಮುಕ್ತ ಪರಿಸರ ನಿರ್ಮಾಣಕ್ಕೆ ಮತ್ತು ವನ್ಯಜೀವಿ, ಸಸ್ಯ ಸಂಕುಲದ ಉಳಿವಿಗೆಗೆ ಜಾಗೃತಿಯೊಂದೇ ಮಾರ್ಗವಾಗಿದ್ದು, ಚಿಣ್ಣರ ವನದರ್ಶನ ಅತ್ಯಂತ ಸಹಕಾರಿಯಾಗಿದೆ.
ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿವಿ ಕನ್ನಡ ಸುದ್ದಿ ವಾಹಿನಿ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್ ಮಂಗಳವಾರ ಆದೇಶಿಸಿದೆ.
ಇಂದಿನಿಂದ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗ ಪೊಲೀಸ್ ವಶದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಗ್ಗೆ ಸಂತ್ರಸ್ತ ಯುವಕ ಕುತೂಹಲಕಾರಿ ಹೇಳಿಕೆ ನೀಡಿದ್ದಾನೆ.
ಬೆಂಗಳೂರು ಆಟೋ ಮೀಟರ್ ದರ ಹೆಚ್ಚಿಸುವಂತೆ ಬೆಂಗಳೂರು ಆಟೋ ಚಾಲಕರ ಸಂಘ ಒತ್ತಾಯ ಮಾಡಿದೆ. ಆಟೋ ಚಾಲಕರ ಸಂಘ ನಗರ ಜಿಲ್ಲಾ ಉಪ ಆಯುಕ್ತರಿಗೆ ಪತ್ರ ಬರೆದು, ದರವನ್ನು ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಪರಿಷ್ಕರಿಸಲು ಕೋರಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಜೂನ್ 26ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಯ ಕೊಡುಗೆಯನ್ನು ವರ್ಷದುದ್ದಕ್ಕೂ ಜನರಿಗೆ ನೀಡಿದೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ.
ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಅಳಲು ತೋಡಿಕೊಂಡರು.
ಕೇರಳದ ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೋಗಬೇಕಾಗಿದ್ದ ಏರ್ ಇಂಡಿಯಾ ಸಂಸ್ಥೆಯ ವಿಮಾನಕ್ಕೆ ಜೂನ್ 25 ರಂದು ಬಾಂಬ್ ಬೆದರಿಕೆ ಬಂದಿತ್ತು.
ನಿಟ್ಟೂರು-ಸಂಪಿಗೆ ರಸ್ತೆ ರೈಲ್ವೆ ನಿಲ್ದಾಣ ನಡುವಿನ ಲೇವಲ್ ಕ್ರಾಸಿಂಗ್ನಲ್ಲಿ ಗರ್ಡರ್ ಅಳವಡಿಕೆ ಸಂಬಂಧಿತ ಕಾಮಗಾರಿ ಹಿನ್ನೆಲೆಯಲ್ಲಿ ಜೂ.27ರಿಂದ ಜು.4ರವರೆಗೆ ಈ ಮಾರ್ಗದ 8 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ
ಚುನಾವಣೆ ಮುಗಿದ ಬೆನ್ನಲ್ಲಿಯೇ ಒಂದೊಂದಾಗಿ ಎಲ್ಲರದ ದರದಲ್ಲೂ ಏರಿಕೆ ಆಗುತ್ತಿದೆ. ಒಂದೆಡೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೊಂಡರೆ. ಮತ್ತೊಂದು ಅಗತ್ಯವಸ್ತುವಾದ ಹಾಲಿನ ದರದಲ್ಲೂ ಏರಿಕೆ ಮಾಡಿದೆ.