Showing 20 of 1954 posts • Page 92 of 98
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ವಿಸ್ತರಿಸಲಾಗಿದೆ. ಜೂನ್ 10ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಕಿಡ್ನ್ಯಾಪ್ ಕೇಸ್ನಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ಕೋರ್ಟ್ ವಾರಂಟ್ ಜಾರಿ ಮಾಡಿದೆ. ವಿಚಾರಣೆಗೆ ಆಗಮಿಸುವಂತೆ ಎಸ್ಐಟಿ ನೋಟಿಸ್ ನೀಡಿತ್ತು.
ರಾಜ್ಯದಲ್ಲಿ ತೀವ್ರ ರಾಜಕೀಯ ಕೆಸರೆರಚಾಟಕ್ಕೆ ದಾರಿ ಮಾಡಿಕೊಟ್ಟರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಹಗರಣ ನೈತಿಕ ಹೊಣೆ ಹೊತ್ತು ಸಚಿವ
ಮಾನನಷ್ಟ ಮೊಕದ್ದಮೆ ಪ್ರಕರಣವಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನಾಳೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗಲಿದ್ದಾರೆ.
ನೀವು ಉಪಯೋಗಿಸುವ ಮಸಾಲೆ ಪದಾರ್ಥಗಳಲ್ಲಿ ಈ ಕೆಳಗಿನ ಪದಾರ್ಥಗಳು ಇದ್ದರೆ ಅವರುಗಳಿಂದ ದೂರವಿರಿ ಕಾರಣ ಅವುಗಳು ಗುಣಮಟ್ಟ ಹೊಂದಿಲ್ಲ ಎಂಬುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹೇಳಿದೆ. ಅವು ಯಾವುವು ಎಂಬ ವಿವರ ಇಲ್ಲಿದೆ.
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ದಳ ಪುರುಷತ್ವ ಪರೀಕ್ಷೆಗೊಳಪಡಿಸಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಸ್ವಯಂ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ಚಹಾ ಸೇವಿಸುವ ಮೂಲಕವೇ ನಮ್ಮೆಲ್ಲರ ದಿನಚರಿ ಆರಂಭವಾಗುತ್ತದೆ. ಹೀಗಿರುವಾಗ ನಾವು ನಿತ್ಯ ಸೇವಿಸುವ ಚಹಾದ ಪುಡಿಯೂ ಗುಣಮಟ್ಟದಾಗಿರಬೇಕಲ್ಲವೆ?
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 6ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸುಮಲತಾ ಅಂಬರೀಶ್ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕುಮಾರಸ್ವಾಮಿಗೆ ಬಿಟ್ಟು ಕೊಟ್ಟಿದ್ದು, ಇದೀಗ ಎಚ್ಡಿಕೆ ಗೆಲುವು ಸಾಧಿಸಿದ್ದಾರೆ.
ಹೆಚ್ಚಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಕಡಿಮೆಗೊಂಡಿವೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 20 ರೂ ಇಳಿಕೆ ಆಗಿದೆ. ಬೆಳ್ಳಿ ಬೆಲೆ 2.30 ಪೈಸೆಯಷ್ಟು ಕಡಿಮೆ ಆಗಿದೆ.
ಉತ್ತರಾಖಂಡದ ಶಾಸ್ತ್ರತಾಳ್ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ಗೆ ಕಾಂಗ್ರೆಸ್ಗಿಂತ 1 ಮತ ಹೆಚ್ಚು ಬಂದರೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ನೀಡಿದ್ದರು.
ಸಿಲಿಕಾನ್ ಸಿಟಿ ಮಂದಿ ಕಾವೇರಿ ನೀರಿಗೆ ಅವಲಂಬಿತರಾಗಿದ್ದು, ನಾಳೆ ಹಾಗೂ ನಾಡಿದ್ದು ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್ ಒಪ್ಪಿಗೆ ನೀಡಿದೆ.
ಮಹರ್ಷಿ ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ಐಟಿ ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಿದ್ದಾರೆ.
ದೂರಿನಲ್ಲಿ ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಉಲ್ಲೇಖ ಮಾಡಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮಾರಾಟ ದಂಧೆ ಶುರುವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ರೇವಣ್ಣ ಫೋಟೋದೊಂದಿಗೆ ವಿಡಿಯೋ ಬೇಕೇ? ಎಂಬ ಪೋಸ್ಟರ್ ಹರಿದಾಡುತ್ತಿದೆ.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ತಲುಪಿಲ್ಲ. ಗ್ಯಾರಂಟಿ ಯೋಜನೆಗಳ ಜನಪ್ರಿಯತೆಯ ಮಧ್ಯೆಯೂ ನಿರೀಕ್ಷಿತ ಗುರಿ ಮುಟ್ಟುವುದು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯ ನಾಯಕತ್ವದಲ್ಲಿ ಬದಲಾವಣೆ ಕೂಗು ಕೇಳಿಬರುತ್ತಿದೆ.
ಇಂದು ಕರಾವಳಿಯ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಜೂನ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.