Showing 20 of 2044 posts • Page 99 of 103
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಸಚಿವ ಸಿ.ಟಿ. ರವಿಗೆ ಪರಿಷತ್ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿದೆ.
ವಿಧಾನಪರಿಷತ್ ಚುನಾವಣೆಗೆ ಕೆಲವೇ ದಿನಗಳಿದ್ದು, ಬಿಜೆಪಿ ಹೈಕಮಾಂಡ್ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ.
ಪಲ್ಲಕ್ಕಿ ಟ್ರಾಕ್ಟರ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿಯಲ್ಲಿ ನಡೆದಿದೆ.
ಟೀಮ್ ಇಂಡಿಯಾದ ಕ್ರಿಕೆಟಿಗ, ಕೆಕೆಆರ್ ತಂಡದ ಸೂಪರ್ ಸ್ಟಾರ್ ವೆಂಕಟೇಶ್ ಅಯ್ಯರ್ ಅವರು ತಮ್ಮ ಬಹುಕಾಲದ ಗೆಳತಿ ಶೃತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಬದುಕಿಗೆ ಅಡಿಯಿರಿಸಿದರು.
ಜೂನ್ 3ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದೆ.
ಬಿಜೆಪಿಯ ಜತೆ ಸೈದ್ಧಾಂತಿಕ ವಿರೋಧ ಇಟ್ಟುಕೊಂಡಿರುವ ಭಾರತದ ಮುಸ್ಲಿಮರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಕ್ಕಾಗಿ ಒಟ್ಟಾಗಿ ‘ಕೈ’ ಜೋಡಿಸಿದ್ದಾರೆ.
ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆ ಗೊಂಡಿದ್ದಾರೆ.
ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವು ಮತ್ತು ಕೋಟ್ಯಂತರ ರೂ. ವಂಚನೆ ಪ್ರಕರಣದ ತನಿಖೆ ಸಂಬಂಧಿಸಿದಂತೆ, ನಿನ್ನೆ ರಾಜ್ಯ ಸರ್ಕಾರ ಪ್ರಕರಣವನ್ನು ಎಸ್ಐಟಿಗೆ ನೀಡಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋಟ್ಯಂತರ ರೂ. ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಸಿಲಿಕಾನ್ ಸಿಟಿ ಹಲವು ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನ ಜೋರು ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸಿದರು. ರಾಜ್ಯಕ್ಕೆ ಮುಂಗಾರು ಆಗಮಿಸುತ್ತಿದೆ.
ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಅಕೌಂಟ್ಗಳನ್ನು ಫ್ರೀಜ್ ಮಾಡುವಂತೆ ಪರಿಶಿಷ್ಟ ಪಂಗಡಗಳ
ಬಿಜೆಪಿ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಡಿಕೆ ಶಿವಕುಮಾರ್, ಬಿಜೆಪಿ ವಿರುದ್ಧ ಬೆಂಕಿಯುಗುಳಿದರು.
ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ.
ವಾಲ್ಮೀಕಿ ನಿಗಮ (ಎಸ್ಟಿ) ದ ಹಗರಣ ಪ್ರಕರಣದ ತನಿಖೆಯಲ್ಲಿ ಎಸ್ಐಟಿ ಅಧಿಕಾರಿಗಳು ನಿಗಮದ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಬಂಧಿಸಿದೆ.
ಆತಿಥ್ಯ ಕ್ಷೇತ್ರದಲ್ಲಿ ಮತ್ತು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹೆಸರಾಗಿರುವ ಎಂ.ಆರ್.ಜಿ.ಗ್ರೂಪ್ ಮತ್ತು ಮ್ಯಾರಿಯೆಟ್ ಹೊಟೇಲ್ಸ್ ಗಳು ನವ ಮುಂಬಯಿಯಲ್ಲಿ ಜಂಟಿಯಾಗಿ ಆತಿಥ್ಯೋದ್ಯಮಕ್ಕೆ ಶುಭಾರಂಭ ಮಾಡಿವೆ.
ಇಂದು ಮಧ್ಯರಾತ್ರಿ 12 ರವರೆಗೆ ಗಡುವು ನೀಡಲಾಗಿತ್ತು, ಆದರೆ ಹಲವು ಬಾರಿ ಗಡುವು ವಿಸ್ತರಣೆ ಮಾಡಿದರೂ ಸಹ ನಂಬರ್ ಪ್ಲೇಟ್ ಅಳವಡಿಕೆ ಕಡಿಮೆ ಪ್ರಮಾಣದಲ್ಲಿ ಆಗಿರುವುದರಿಂದ ಹೈಕೋರ್ಟ್ ಜೂನ್ 12 ರ ವರೆಗೆ ವಿಸ್ತರಿಸಿದೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯರನ್ನ ಅನರ್ಹಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಹಿಳೆ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ನನ್ನು ಎಸ್ಐಟಿಯವರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.
ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತ್ತು ಮಾಡಿದ್ದು ಅವರ ಬಂಧನ ಪಕ್ಷದ ಮೇಲೆ ಹಾಗೂ ಚುನಾವಣೆಯ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದರು.