Showing 20 of 178 posts • Page 7 of 9
ಬಿತ್ತನೆ ಸಮಯದಲ್ಲಿ ರೈತರಿಗೆ ಸಲಹೆ ಸಹಕಾರ ನೀಡಬೇಕಾದ ತಾಲ್ಲೂಕಿನ ಸಂತಪುರ ಹೋಬಳಿ ಕೇಂದ್ರದ ರೈತ ಸಂಪರ್ಕ ಕೇಂದ್ರಕ್ಕೆ ಅಧಿಕಾರಿಗಳೇ ಬೀಗ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ಇದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಆಸಕ್ತ ರೈತರು ನೋಂದಣಿ ಮಾಡಿಸಿಕೊಳ್ಳಬಹುದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರತೇಂದ್ರನಾಥ ಸುಗೂರ ತಿಳಿಸಿದ್ದಾರೆ.
ಮತ ಎಣಿಕೆ ಕೇಂದ್ರದಲ್ಲಿ ಕರ್ತವ್ಯಲೋಪ ಎಸಗಿದ ಇಬ್ಬರು ಇನ್ಸ್ಪೆಕ್ಟರ್ಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರು ಕಲಬುರಗಿ ವಲಯದ ಡಿ.ಐ.ಜಿ ಅವರಿಗೆ ಪತ್ರ ಬರೆದಿದ್ದಾರೆ.
ಬೀದರ್ ಜಿಲ್ಲೆಯ ಅಭಿವೃದ್ಧಿ ಮತ್ತು ಜನರ ನಿರೀಕ್ಷೆಯಂತೆ ನೂತನ, ಯುವ ಸಂಸದ ಸಾಗರ ಖಂಡ್ರೆ ಅವರು ಕೆಲಸ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತ ಪಡಿಸಿದರು.
ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಫಲಿತಾಂಶ 2024 ಪ್ರಕಟವಾಗಿದ್ದು, ಫಲಿತಾಂಶ ಅನೇಕರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ.
ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ತಾಲ್ಲೂಕಿನ ವಿವಿಧೆಡೆ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಗಿನ ಜಾವ ಮಳೆಯಾಗಿ ಬಿಸಿಲಿನಿಂದ ಬಸವಳಿದ ಜನರಲ್ಲಿ ಕೊಂಚ ನೆಮ್ಮದಿ ತಂದಿದೆ.
: ಕಲ್ಯಾಣ ಕರ್ನಾಟಕದ ಎಲ್ಲಾ ಐದು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ
ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ (ಜೆಡಿಎಸ್, ಬಿಜೆಪಿ) ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದ ಮತದಾರರಿಗೆ, ಜೆಡಿಎಸ್, ಬಿಜೆಪಿ ಮುಖಂಡರಿಗೆ, ಕಾರ್ಯಕರ್ತರಿಗೆ ಮಾಜಿ ಸಚಿವರು
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲುವು ಕಂಡಿದ್ದು, ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.
ಸಾಗರ್ ಖಂಡ್ರೆ ಸಿಎಂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿರುವ ಈಶ್ವರ್ ಖಂಡ್ರೆ ಅವರ ಪುತ್ರ. ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಸತತ ಮುನ್ನಡೆ ಸಾಧಿಸುತ್ತಿದ್ದಾರೆ.
ಲೋಕಸಭಾ ಚುನಾವಣೆ 2024ರ ಫಲಿತಾಂಶ ಇಂದು ಪ್ರಕಟವಾಗಲಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಫಲಿತಾಂಶ ಈಗ ಗಮನ ಸೆಳೆದಿದೆ. ಮಧ್ಯಾಹ್ನದ ವೇಳೆದ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ.
ಸಮೀಪದ ಭಾಲ್ಕಿ ತಾಲ್ಲೂಕಿನ ಹಲಸಿ ತುಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀಮಾಳಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಸುರಿದ ಅರ್ಧ ಗಂಟೆ ಮಳೆಗೆ ಗ್ರಾಮದ ತುಳಿಸಿರಾಮ ಅರ್ಜುನೆ,
ಈಶಾನ್ಯ ಪದವೀಧರ ಮತಕ್ಷೇತ್ರಕ್ಕೆ ಸೋಮವಾರ ಜಿಲ್ಲೆಯಲ್ಲಿ ನಡೆದ ಚುನಾವಣೆ ಅವ್ಯವಸ್ಥೆಯಿಂದ ಕೂಡಿತ್ತು. ನಗರದ ಅಂಚೆ ಕಚೇರಿ, ಡಿಡಿಪಿಐ ಸೇರಿದಂತೆ ಹಲವು ಮತಗಟ್ಟೆಗಳ ಎದುರು ಮತದಾರರಿಗೆ ರಾಜಾರೋಷವಾಗಿ ಹಣ ಹಂಚಲಾಯಿತು.
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಮತದಾನ ಆರಂಭವಾಗಿದೆ.
ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರಣಾ ಗ್ರಾಮದಲ್ಲಿ ಸರ್ಕಾರಿ ಪಿಯು ಕಾಲೇಜ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಲಾ ವಿಭಾಗದಲ್ಲಿ ಪಿಯುಸಿ ಆರಂಭವಾಗಿ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ
ಸಹಾಯಕ ಕೃಷಿ ನಿರ್ದೇಶಕ ಧುಳಪ್ಪ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕಮಲನಗರ ರೈತ ಸಂಪರ್ಕ ಕೇಂದ್ರಕ್ಕೆ ತಮಗೆ ಬೇಕಾದವರಿಗೆ ಪ್ರಭಾರ ವಹಿಸಿಕೊಟ್ಟಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ಯುನಿಟಿ ಮ್ಯೂವಮೆಂಟ್ ಆರೋಪಿಸಿದೆ.
ಜೂನ್ 1ರಿಂದ ಪಿಯು ತರಗತಿಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳ ಕಲಿಕೆಯ ಲವಲವಿಕೆ ಹೆಚ್ಚಿಸಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ ಸಲಹೆ ನೀಡಿದರು.
‘ದೇಶದ ಸರ್ವಾಂಗೀಣ ಪ್ರಗತಿಗೆ ಮತದಾರರು ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿ, ಅಧಿಕಾರಕ್ಕೆ ತರಬೇಕು’ ಎಂದು ಬಿಜೆಪಿ ಪಟ್ಟಣ ಘಟಕದ ಮುಖಂಡ ರಾಜಗೋಪಾಲ ಐನಾಪುರ ಹೇಳಿದರು.
‘ಈಶಾನ್ಯ ಕ್ಷೇತ್ರದ ಪದವೀಧರರು ಪ್ರಬುದ್ಧ ಮತದಾರರಾಗಿದ್ದು, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಗೆಲುವು ಖಚಿತವಾಗಿದೆ’ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದರು.