Showing 20 of 178 posts • Page 8 of 9
ಗುರುನಾನಕ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಗೆ ಸ್ಥಳೀಯ ಶಾಸಕರೂ ಆದ ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಅವರ ಮಗ ಕಾರಣನಾಗಿದ್ದು, ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಜೆಜೆಎಮ್ ಕಾಮಗಾರಿ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಸಿದ್ದು ಪಾಟೀಲರ ಇಬ್ಬರು ಸಹೋದರರು ಸೇರಿದಂತೆ ಇತರೆ ವ್ಯಕ್ತಿಗಳು ಸೇರಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಗುರುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.
ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಅವರ ಮಗನ ಕುಮ್ಮಕ್ಕಿನಿಂದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನ ಹಿಂದೂ ವಿದ್ಯಾರ್ಥಿಗಳ ವಿರುದ್ಧ ಸುಳ್ಳು ಕೇಸ್ ಹಾಕಲಾಗಿದೆ’ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದ ಏಳು ತಿಂಗಳ ಮಗು ಗರ್ಭದಲ್ಲೇ ಸಾವನ್ನಪ್ಪಿದ್ದು, ತಾಯಿಯ ಪರಿಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೀದರ್ ನ ಬ್ರಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
ಜೂನ್ ೪ ರಂದು ನಡೆಯುವ ಬೀದರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವನ್ನು ಶಾಂತಿಯುತವಾಗಿ ನಡೆಸೋಣ ಮತದಾನ ಈಗಾಗಲೇ ಶಾಂತಿಯುತವಾಗಿ ನಡೆದಿದ್ದು
ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಎರಡು ದಿನದೊಳಗೆ ಬಂಧಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಜೈ ಶ್ರೀರಾಮ್ ಹಾಡಿನ ವಿಷಯವಾಗಿ ನಗರದ ಮೈಲೂರಿನ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ನಡೆದ ಜಗಳ ಸಂಬಂಧ ರಾತ್ರಿಯಿಂದಲೇ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ಧರ್ಮವೊಂದಕ್ಕೆ ಸಂಬಂಧಿಸಿದ ಗೀತೆಗೆ ನೃತ್ಯ ಮಾಡುತ್ತಿರುವಾಗ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಬೀದರ್ ನಗರದ ಮೈಲೂರ ಮಾರ್ಗದಲ್ಲಿರುವ ಗುರುನಾನಕ ದೇವ
ಜಿಎನ್.ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಜೈ ಶ್ರೀರಾಮ್ ಹಾಡು ಹಾಕಿ ಡ್ಯಾನ್ಸ್ ಮಾಡಿದ್ದಾರೆ.
‘ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ಕೊಡಬೇಕು’ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಆಗ್ರಹಿಸಿದರು.
‘ಹೇಡಿ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡುವುದು ಅವರಿಗೆ ಶೋಭೆ ತರುವುದಿಲ್ಲ’ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ಜಿಲ್ಲೆಯ ಲೇವಾದೇವಿದಾರರು ಗಿರಿವಿದಾರರು, ಕರ್ನಾಟಕ ಲೇವಾದೇವಿದಾರರ ಅಧಿನಿಯಮ 1961 ರ ಪ್ರಕರಣ ಸರ್ಕಾರವು ನಿಗದಿಪಡಿಸಿರುವ ಭದ್ರತೆ ಸಾಲಗಳಿಗೆ 14% ಭದ್ರತಾ ರಹಿತ ಸಾಲಗಳಿಗೆ 16% ಗರಿಷ್ಠ ಬಡ್ಡಿದರ ಸರ್ಕಾರದಿಂದ ನಿಗದಿಪಡಿಸಲಾಗಿರುತ್ತದೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚೆನ್ನಬಸಮ್ಮ ಕಾಲೇಜಿನಲ್ಲಿ 2024-25ನೇ ಸಾಲಿನಲ್ಲಿ ಬಿಸಿಎ ಪದವಿ ಕೋರ್ಸ್ ಆರಂಭಿಸಲು ಅನುಮೋದನೆ ನೀಡಿದೆ.
ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಕಲಿಕೆಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸರ್ಕಾರದ ನಿರ್ಧಾರ ಖಂಡಿಸಿ ಅಂಗನವಾಡಿ ಸಂಘಟನೆಯವರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇಷ್ಟು ದಿನ ಬೇಸಿಗೆ ಬಿಸಿಲಿನ ತಾಪದಿಂದ ಬಸವಳಿದ ಪಟ್ಟಣದ ಜನರಿಗೆ ಈಗ ಮಳೆಯಾದರೆ ಚರಂಡಿ ನೀರು ಮನೆ ಹಾಗೂ ರಸ್ತೆ ಮೇಲೆ ಹರಿಯುವ ಆತಂಕ ಎದುರಾಗಿದೆ.
ಬೀದರ್ ಜಿಲ್ಲೆ ಐತಿಹಾಸಿಕವಾಗಿ ಇಲ್ಲಿನ ಭವ್ಯ ಸ್ಮಾರಕಗಳಿಂದ ರಾಷ್ಟ್ರಮಟ್ಟದಲ್ಲಿ ತನ್ನ ಗಮನ ಸೆಳೆಯುತ್ತಿದೆ. ಜೊತೆಗೆ ಬಹುಮನಿ ಕಾಲದ ಶ್ರೀಮಂತ ವಾಸ್ತುಶಿಲ್ಪದ ಸ್ಮರಣಾರ್ಥವಾಗಿದೆ.
ಮಳೆಗಾಲ ಸಮೀಪಿಸಿದರೂ ಪಟ್ಟಣದ ಬಸ್ ನಿಲ್ದಾಣ, ಬೀದರ್ ಬೇಸ್ ಬಡಾವಣೆ ಪಕ್ಕದಲ್ಲಿರುವ ರಾಜ ಕಾಲುವೆ ಸ್ವಚ್ಛಗೊಳಿಸಿಲ್ಲ. ಇದಿಂದ ಸಾರ್ವಜನಿಕರು ವಿಪರೀತ ಸೊಳ್ಳೆ ಕಾಟ ಸೇರಿದಂತೆ ಸಾಂಕ್ರಾಮಿಕ ರೋಗಗಳ ಭೀತಿ
ತಾಲೂಕಿನ ಹಮಲಾಪೂರ ಬಳಿ ಬ್ರೇಕ್ ಫೇಲ್ ಆದ ಹಿನ್ನಲೆಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಆಲದ ಮರಕ್ಕೆ ಢಿಕ್ಕಿಯಾಗಿ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯ
ಸಹೋದ್ಯೋಗಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಗ್ರಾಮ ಪಂಚಾಯತ್ ಪಿಡಿಓ ಹಾಗೂ ಕರ ವಸೂಲಿಗಾರನಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ
ಹಾಸನ ಪೆನ್ಡ್ರೈವ್ ಪ್ರಕರಣದ ವಿರುದ್ಧ ಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟದ ಕಾರ್ಯಕರ್ತೆಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.