News Karnataka Kannada
Sunday, May 05 2024
ಕ್ಯಾಂಪಸ್

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ

God
Photo Credit : News Kannada

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಬುಧವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ದೇವರನ್ನು ಬರಮಾಡಿಕೊಂಡರು. ನಂತರ ದೇವರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ರಾಮಚಂದ್ರ ಭಟ್, ಉಪಪ್ರಾಚಾರ್ಯ ಗಣೇಶ್ ಪ್ರಸಾದ್, ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯ ಪ್ರಾಚಾರ್ಯೆ ಮಾಲತಿ ಡಿ, ವಿದ್ಯಾಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿ ಸಮೂಹ, ಹೆತ್ತವರು, ಸಾರ್ವಜನಿಕರು ಹಾಗೂ ಭಕ್ತಾದಿಗಳು ಹಾಜರಿದ್ದರು.

‘ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ನಮ್ಮ ಕ್ಯಾಂಪಸ್‌ಗೆ ಆಗಮಿಸಿರುವುದರಿಂದ ನಾವೆಲ್ಲರೂ ಧನ್ಯರಾಗಿದ್ದೇವೆ. ನಮ್ಮ ಕ್ಯಾಂಪಸ್‌ನ ಕಣ ಕಣಗಳೂ ಪವಿತ್ರವೆನಿಸಿವೆ. ದೇವರ ಪೂಜೆಯ ಅವಕಾಶ ನಮ್ಮ ಆವರಣದೊಳಗೆ ದೊರಕುವಂತಾದದ್ದು ನಮ್ಮೆಲ್ಲರ ಪುಣ್ಯವೇ ಸರಿ’ ಎಂಬುದು ಸಂಸ್ಥೆಯ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ನಟ್ಟೋಜ ಅವರ ಮಾತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು