ಕ್ಯಾಂಪಸ್

ಆಳ್ವಾಸ್‌ನಲ್ಲಿ ಮಹಿಳಾ ಸುರಕ್ಷತಾ ಅಭಿಯಾನ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ : ಮಂಗಳೂರು ಪೋಲಿಸ್ ಕಮಿಷನರೇಟ್ ವ್ಯಾಪ್ತಿಯಡಿಯಲ್ಲಿ ಮಹಿಳಾ ಸುರಕ್ಷತಾ ಅಭಿಯಾನದ ಅಂಗವಾಗಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ತುರ್ತು ಸ್ಪಂದನಾ ವ್ಯವಸ್ಥೆಯ ಕುರಿತು ಜಾಗೃತಿ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಪಣಂಬೂರು ಎಸಿಪಿ ಮಹೇಶ್ ಪ್ರಸಾದ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ, ಇಂತಹ ಸಂದರ್ಭಗಳಲ್ಲಿ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷತೆ ಒದಗಿಸಲು ಪೋಲಿಸ್ ಇಲಾಖೆಯ ಸದಾ ಸಿದ್ಧವಾಗಿರುತ್ತದೆ. ಮಹಿಳೆಯರಿಗೆ ಯಾವುದೇ ರೀತಿಯ ಅಭದ್ರತೆಯ ಪರಿಸ್ಥಿತಿ ಬಂದೊದಗಿದರೆ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡುವ ಮೂಲಕ ಪೋಲಿಸ್ ಸಹಾಯವನ್ನು ಪಡೆಯಬಹುದು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಮೂಡುಬಿದಿರೆ ಪೋಲಿಸ್ ಇನ್ಸ್ಪೆಕ್ಟರ್ ದಿನೇಶ್ ಕುಮಾರ್, ಎಸ್‌ಐಗಳಾದ ಸುದೀಪ್ ಹಾಗೂ ದಿವಾಕರ್ ರೈ, ಎಎಸ್‌ಐ ಕಾಂತಪ್ಪ ಹಾಗೂ ಪೋಲಿಸ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿವಿಧ ವಿಭಾಗದ ಉಪನ್ಯಾಸಕರು ಹಾಗೂ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

 

Raksha Deshpande

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago