ಉಜಿರೆಯ ಎಸ್.ಡಿ‌.ಎಂ. ಕಾಲೇಜಿನಲ್ಲಿ ‘ಚಂಪಾ’ಗೆ ನುಡಿನಮನ

ಉಜಿರೆ ಜ.11 : “ ಹೊಸಗನ್ನಡ ಸಾಹಿತ್ಯದ ಪ್ರಮುಖ ಸಾಹಿತಿಯಾಗಿ ಮತ್ತು ಕನ್ನಡ ಹೋರಾಟಗಾರರಾಗಿ ಪ್ರಮುಖವಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲರು ಚಂಪಾ ಎಂದೇ ಜನಮನ್ನಣೆ ಗಳಿಸಿದ್ದವರು, ಅವರ ಅಕಾಲಿಕ ಮರಣವು ಕನ್ನಡ ಸಾಹಿತ್ಯ ಲೋಕಕ್ಕೆ, ಕನ್ನಡ ನೆಲ ನುಡಿಯ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್ ನುಡಿನಮನ ಸಲ್ಲಿಸಿದರು.

ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ‘ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು‌’ ಮತ್ತು ಕಾಲೇಜಿನ ಕನ್ನಡ ಸಂಘದ ವತಿಯಿಂದ ಇತ್ತೀಚೆಗೆ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಪಾಟೀಲರ ನುಡಿನಮನ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಸಲ್ಲಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಿದ್ದರು.  “ಚಂಪಾ ಎಂದೇ ಕನ್ನಡ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡ ಚಂದ್ರಶೇಖರ ಪಾಟೀಲರು ನುಡಿತಂತೆ ನಡೆಯುವ ವ್ಯಕ್ತಿತ್ವದವರಾಗಿದ್ದರು, ಅವರು ಸಾಹಿತ್ಯ ಮಾತ್ರವಲ್ಲದೇ ನಾಡು ನುಡಿಯ ಅಭಿವೃದ್ಧಿಗಾಗಿ ಕೂಡ ಜೀವನವಿಡೀ  ಹಲವಾರು ಹೋರಾಟಗಳನ್ನು ಮಾಡಿದ್ದಾರೆ.  ಬಂಡಾಯ ಸಾಹಿತ್ಯದ ಪ್ರಮುಖರಾಗಿ ಗುರುತಿಸಿಕೊಂಡಿದ್ದ ಚಂಪಾ ನಿಧನವು ಸಾಹಿತ್ಯ ವಲಯಕ್ಕೆ ದೊಡ್ಡ ಆಘಾತವಾಗಿದೆ” ಎಂದು ಡಾ.ಎಂ.ಪಿ.ಶ್ರೀ ನಾಥ್ ವಿಷಾದಿಸಿದರು.

“ಚಂಪಾರವರು ಕವಿ, ನಾಟಕಕಾರರಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ದೊಡ್ಡ ಹೆಸರು ಮಾಡಿದ್ದರು, ಅಷ್ಟೇ ಅಲ್ಲ ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಭಾಷಾ ಚಳುವಳಿಯಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರು, ಅವರ ಹೋರಾಟ ಮತ್ತು ಬಂಡಾಯ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ” ಎಂದು ಕಾಲೇಜಿನ ಹಿರಿಯ ಆಂಗ್ಲಭಾಷಾ ಪ್ರಾಧ್ಯಾಪಕ ಜಿ.ಆರ್. ಭಟ್ ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸಂಪತ್ ಕುಮಾರ್ ‘ಬಂಡಾಯ ಸಾಹಿತ್ಯದ ಬೇರಾಗಿ ಚಂಪಾರವರು ಬದುಕಿದ್ದರು, ಈಗ ಅವರ ಮರಣದ ನಂತರ ಆ ಮರವು ತನ್ನ ಆಸರೆಯನ್ನು ಕಳೆದುಕೊಂಡಿದೆ, ಚಂಪಾನ ಸಾವಿನ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ಮತ್ತು ಸಾಹಿತ್ಯ ಪ್ರೇಮಿಗಳಿಗೆ ದೇವರು ನೀಡಲಿ’ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ  ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರು‌, ಸಾಹಿತ್ಯ ಅಭಿಮಾನಿಗಳು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Gayathri SG

Recent Posts

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

10 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

12 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

27 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

29 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

54 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

1 hour ago