ಕ್ಯಾಂಪಸ್

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಯಕ್ಷತಂಡಕ್ಕೆ ಪ್ರಶಸ್ತಿ

ಉಜಿರೆ : ಶ್ರೀ ಧ. ಮಂ. ಕಾಲೇಜ್ ನ ಯಕ್ಷಗಾನ ತಂಡವು  ಇತ್ತೀಚೆಗೆ  ಮಂಗಳೂರಿನ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ  ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆಯಲ್ಲಿ  ದ್ವಿತೀಯ ಬಹುಮಾನದ ಗರಿಮೆಗೆ ಪಾತ್ರವಾಗಿದೆ.

ಶ್ರೀ ಧ. ಮಂ. ಕಾನೂನು ಮಹಾವಿದ್ಯಾಲಯ  ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ತನ್ನ  ತ್ರಿಂಶತಿ  ಯಕ್ಷ ಸಂಭ್ರಮದ ಅಂಗವಾಗಿ ‘ಯಕ್ಷೋತ್ಸವ- ೨೦೨೨’ನ್ನು ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ವಿವಿಧ ಕಾಲೇಜಿನ ಒಟ್ಟು ೧೨  ತಂಡಗಳು ಭಾಗವಹಿಸಿದ್ದು ಎಸ್.ಡಿ.ಎಂ ಕಾಲೇಜು  ‘ಸುದರ್ಶನ ವಿಜಯ’ ಪ್ರಸಂಗವನ್ನು ಪ್ರದರ್ಶಿಸಿತ್ತು.

ಈ  ಪ್ರಸಂಗದಲ್ಲಿ  ಹಿಮ್ಮೇಳ ಭಾಗವತರಾಗಿ ಜಯರಾಮ ಅಡೂರು,  ಚೆಂಡೆಯಲ್ಲಿ  ಆನಂದ ಗುಡಿಗಾರ್, ಮದ್ದಳೆ ಶ್ರೇಯಸ್ ಪಾಳಂದೆ ಹಾಗೂ ಚಕ್ರ ತಾಳದಲ್ಲಿ  ಆದಿತ್ಯ ಹೊಳ್ಳ ಸಹಕರಿಸಿದ್ದರು. ಮುಮ್ಮೆಳದಲ್ಲಿ  ದೇವೇಂದ್ರನಾಗಿ ಪರೀಕ್ಷಿತ್ ಗೋಖಲೆ, ದೇವೇಂದ್ರರಾಗಿ ಮೋನಿಷಾ ಕೆ. ಎಲ್. , ಮತ್ತು ಸೌಜನ್ಯ, ಸುದರ್ಶನನಾಗಿ ಶ್ರೀಶಾ ನಾರಾಯಣ ಜಿ ಹೆಗ್ಡೆ, ಶತ್ರುಪ್ರಸೂದನನಾಗಿ ಸುದಿತ್ ಆಚರ‍್ಯ, ವಿಷ್ಣುವಾಗಿ ರೂಪೇಶ್ ಆಚರ‍್ಯ, ಲಕ್ಷ್ಮಿಯಾಗಿ ರಕ್ಷಿತಾ ಆರ್. ಎಸ್. ಹಾಸ್ಯಗಾರನಾಗಿ ಸುಬ್ರಮಣ್ಯ ಅಭಿನಯಿಸಿದ್ದರು.

ಯಕ್ಷಗಾನ ಕಲಾವಿದರಾದ ಸರ್ಪಂಗಳ ಈಶ್ವರ ಭಟ್, ಚಂದ್ರಶೇಖರ್ ಕೊಂಕಣಾಜೆ, ಖ್ಯಾತ ಭಾಗವತರಾದ ಹರಿಪ್ರಸಾದ್ ಕಾರಂತ ತೀರ್ಪುಗಾರರಾಗಿ ಭಾಗವಹಿಸಿದ್ದರು. ಈ ಬಗ್ಗೆ ಪ್ರಾಂಶುಪಾಲರು ಹಾಗೂ ಕಾಲೇಜಿನ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago