ಕ್ಯಾಂಪಸ್

ಉಜಿರೆ ಎಸ್. ಡಿ ಎಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

ಉಜಿರೆ: ನಾಯಕತ್ವ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಪೂರಕವಾದ ಅಂಶವಾಗಿದ್ದು, ಅದು ಸಹಜವಾಗಿಯೇ ಅಭಿವ್ಯಕ್ತಿಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕಿನ ನ್ಯಾಯವಾದಿ ಬಿ. ಕೆ ಧನಂಜಯ ರಾವ್ ಹೇಳಿದರು.

ಉಜಿರೆಯ ಎಸ್. ಡಿ. ಎಂ ಪದವಿ ಕಾಲೇಜಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ನಾಯಕತ್ವವನ್ನು ಸ್ವೀಕರಿಸಿದಾಗ ತಮ್ಮದೆ ಆದ ಜವಾಬ್ದಾರಿಯನ್ನು ಹೊಂದಿರುತ್ತಾರೆ. ತಾವು ಅಭಿವೃದ್ಧಿ ಹೊಂದುವುದರ ಜೊತೆ ತನ್ನ ಸ್ನೇಹಿತ, ವಿಭಾಗ, ಕಾಲೇಜಿನ ಅಭಿವೃದ್ಧಿಗೆ ಕಾರಣರಾಗುತ್ತಾರೆ. ನಾಯಕರು ಒಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಾಗ ಎಲ್ಲರ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಜೀವನವನ್ನು ನೆಡೆಸುವಾಗ ಅಲ್ಲಿ ಬರುವ ಎಲ್ಲಾ ರಂಗದ ಎಲ್ಲಾ ಸ್ಥಾನಗಳಲ್ಲಿಯೂ ನಾಯಕತ್ವ ಎನ್ನುವುದು ಇದ್ದೆ ಇರುತ್ತದೆ. ಆ ನಾಯಕತ್ವ ಗುಣವನ್ನು ನಾವು ಹೇಗೆ ನಿಭಾಯಿಸುತ್ತೇವೆ ಎಂಬುದು ಇಲ್ಲಿ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

ಒಬ್ಬ ನಾಯಕ ಎಲ್ಲಾ ವಿಷಯಗಳ ಬಗ್ಗೆ ಜ್ಞಾನ ಹೊಂದುವುದು ಮುಖ್ಯ, ಹಾಗೆಯೇ ಪಡೆದುಕೊಂಡ ಜ್ಞಾನದ ಬಗ್ಗೆ ಆತ್ಮವಿಶ್ವಾಸ ಹೊಂದಿರುವುದು ನಿಜವಾದ ನಾಯಕನ ಲಕ್ಷಣ ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳಿಗೆ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವ ರೀತಿ ಹಾಗೂ ದೃಢಸಂಕಲ್ಪದ ಬಗ್ಗೆ ಅರಿವು ಮೂಡಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ವಿದ್ಯಾರ್ಥಿ ಸಂಯೋಜಕರು ಹಾಗೂ ವಿದ್ಯಾರ್ಥಿಗಳು ಪರಸ್ಪರ ಹೊಂದಾಣಿಕೆಯಿAದ ಸಾಗಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಸತೀಶ್ಚಂದ್ರ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಉದ್ಘಾಟಕರಾದ ಬಿ. ಕೆ ಧನಂಜಯ ರಾವ್ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿ ಸಂಯೋಜಕರಿಗೆ ಬೋಧಿಸಿದರು. ಕಾಲೇಜಿನ ವಿನೂತನ ಯೋಜನೆಯಾದ ‘ಹಸಿರು ಸೈನಿಕರು’ ಇದರ ಬಗ್ಗೆ ಎನ್. ಸಿ. ಸಿ ಪ್ರಾಧ್ಯಾಪಕ ಪ್ರಸನ್ನ ಕುಮಾರ್ ಪರಿಚಯ ಮಾಡಿಕೊಟ್ಟರು. ವಿವಿಧ ವಿದ್ಯಾರ್ಥಿ ಸಂಘದ ಚಟುವಟಿಕೆಯ ಬಗ್ಗೆ ವಿದ್ಯಾರ್ಥಿ ಸಂಯೋಜಕರಿಗೆ ಈ ಸಂದರ್ಭದಲ್ಲಿ ಅವರ ಜವಾಬ್ದಾರಿ ಕುರಿತು ಅರಿವು ಮೂಡಿಸಿದರು.

ಈ ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಪ್ರಾಧ್ಯಾಪಕರು, ಉಪನ್ಯಾಸಕರು, ವಿದ್ಯಾರ್ಥಿ ಸಂಘದ ಸಂಯೋಜಕರು, ಪ್ರತಿನಿಧಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಜಿ. ಆರ್. ಭಟ್ ಸ್ವಾಗತಿಸಿ, ವಿದ್ಯಾರ್ಥಿ ಸಂಯೋಜಕ ಗೀತೇಶ್ ವಂದಿಸಿ, ಇಂಚರ ನಿರೂಪಿಸಿದರು.

Sneha Gowda

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

46 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

1 hour ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago