News Karnataka Kannada
Monday, May 06 2024
ಕ್ಯಾಂಪಸ್

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ಪೆಕ್ಟ್ರಾ ಅಸೋಸಿಯೇಷನ್ ಉದ್ಘಾಟನಾ ಸಮಾರಂಭ

May 1: SDM Annual friendship meet of senior students in college
Photo Credit :

ಉಜಿರೆ : “ಜಗತ್ತಿಗೆ ಶಕ್ತಿ ಏಕೆ ಅವಶ್ಯಕ, ಶಕ್ತಿ ಏಕೆ ಸರ್ವವ್ಯಾಪಿಯಾಗಿದೆ”, ಎಂದು ಎಸ್.ಡಿ. ಎಂ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರವಿಭಾಗದ ಮುಖ್ಯಸ್ಥ ಡಾ|| ರಾಘವೇಂದ್ರ ಅಭಿಪ್ರಾಯಪಟ್ಟರು.

ಉಜಿರೆಯ ಎಸ್.ಡಿ. ಎಂ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಸ್ಪೆಕ್ಟ್ರಾ ಅಸೋಸಿಯೇಷನ್ ಉದ್ಘಾಟನಾ ಸಮಾರಂಭದಲ್ಲಿ ವಿನೂತನ ವಿಜ್ಞಾನ ಮಾದರಿ ಸೌರಮಂಡಲಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ ನ್ಯಾಷನಲ್ ಎನರ್ಜಿ ಕನ್ಸರ್ವೇಶನ್ ದಿನ’ದ ಮಹತ್ವದ ಬಗೆಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸ್ಪೆಕ್ಟ್ರಾ ಅಸೋಸಿಯೇಷನ್ ಉದ್ದೇಶಗಳೇನು ಮತ್ತು ಭೌತಶಾಸ್ತ್ರ ವಿಭಾಗದ ಚಟುವಟಿಕೆಗಳ ಬಗೆಗೆ ವಿಭಾಗದ ಮುಖ್ಯಸ್ಥ ಪ್ರೊ.ಎಸ್. ಎನ್ ಕಾಕತ್ಕರ್ ತಿಳಿಸಿಕೊಟ್ಟರು.

ಈ ವೇಳೆ ವಿದ್ಯಾರ್ಥಿಗಳು ತಯಾರಿಸಿದ ಇ -ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ನಿರಂಜನ್ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಕಾರ್ಯಕ್ರಮವನ್ನು ಅಸೋಸಿಯೇಷನ್ ಅಧ್ಯಕ್ಷ ವೈಷ್ಣವಿ ಸ್ವಾಗತಿಸಿ, ಅಸೋಸಿಯೇಶನ್ ಕಾರ್ಯದರ್ಶಿ ಕು. ಸ್ನೇಹ ವಂದಿಸಿ, ಭಾರತ್ ಕುಮಾರ್ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು