ಕ್ಯಾಂಪಸ್

ಉಜಿರೆ ಎಸ್. ಡಿ. ಎಂ ಕ್ಯಾಂಪಸ್ ನಲ್ಲಿ ನಂದಿನಿ ಮಳಿಗೆ ಆರಂಭ

ಉಜಿರೆ : ಉಜಿರೆಯ ಶ್ರೀ ಧ.ಮ ಕಾಲೇಜಿನ ಕ್ಯಾಂಪಸ್ ಆವರಣದಲ್ಲಿ ನಂದಿನಿ ಉತ್ಪನ್ನಗಳ ವಿಶೇಷ ಮಾರಾಟ ಮಳಿಗೆ ಆರಂಭಗೊಂಡಿದ್ದು, ಶ್ರೀ ಧ.ಮ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಮಳಿಗೆಯನ್ನು  ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಹರ್ಷೇಂದ್ರ ಕುಮಾರ್ ಅವರು ವಿದ್ಯಾರ್ಥಿಗಳ, ಸಿಬ್ಬಂದಿಗಳ, ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು
ನಂದಿನಿ ಹಾಲಿನ ಉತ್ಪನ್ನಗಳ ಅಗತ್ಯತೆಗಳನ್ನು ಮನಗಂಡು ಕಾಲೇಜಿನ ಕ್ಯಾಂಟೀನ್ ಪಕ್ಕದಲ್ಲಿ ಈ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ನುಡಿದರು.
ಈ ಕೇಂದ್ರದಿಂದ ಬಂದಂತಹ ಲಾಭಾಂಶವನ್ನು ವಿದ್ಯಾರ್ಥಿಗಳಿಗೆ ಶಿಷ್ಯ ವೇತನವಾಗಿ ನೀಡಲಾಗುತ್ತದೆ ಎಂದರು.

ಬರೋಡ ಬ್ಯಾಂಕ್ ಹಾಗೂ ಕ್ಯಾಂಟೀನ್ ನಡುವೆ ವಿಸ್ತೃತ ಸ್ಥಳವಕಾಶದಲ್ಲಿ ಶುಭಾರಂಭ ಗೊಂಡಿತ್ತು. ಕಾಲೇಜಿನ ಪ್ರಾಂಶುಪಾಲ ಡಾ. ಎಸ್. ಸತೀಶ್ ಚಂದ್ರ, ಪಿ. ಯು. ಕಾಲೇಜಿನ ಪ್ರಾಂಶುಪಾಲ ದಿನೇಶ್ ಚೌಟ ,ಇಂಜಿನಿಯರ್ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ, ಶ್ರೀ. ಧ.ಮ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಶಶಿಧರ್ ಶೆಟ್ಟಿ ಹಾಗೂ ಉಜಿರೆಯ ವಿವಿಧ ಶ್ರೀ. ಧ. ಮ.ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳು, ಶ್ರೀ. ಧ. ಮ. ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರುಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಸಂಪತ್ ಕುಮಾರ ಪ್ರಸ್ತಾವಿಕ ನುಡಿಗಳೊಂದಿಗೆ ಕಾರ್ಯಕ್ರಮವನ್ನು ನಿರ್ವಹಿಸಿದರು.

Swathi MG

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

44 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

51 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago