ಕ್ಯಾಂಪಸ್

ಎಸ್‌ ಡಿ ಎಂ ಕಾಲೇಜಿನಲ್ಲಿ ಲ್ಯಾಬ್‌ ನಿರ್ವಾಹಕರಿಗಾಗಿ ತರಬೇತಿ ಕಾರ್ಯಾಗಾರ

ಉಜಿರೆ : ಭೌತಶಾಸ್ತ್ರಕ್ಕೆ ಸಂಬಂಧಿಸಿದ ಪ್ರಾಯೋಗಿಕ ಜ್ಞಾನ ವಿದ್ಯಾರ್ಥಿಗಳಿಗೆ ಒದಗಿಸುವಲ್ಲಿ ಲ್ಯಾಬ್‌ ನಿರ್ವಾಹಕರ ಪಾತ್ರ ಮಹತ್ವದ್ದು ಎಂದು ಎಸ್‌.ಡಿ.ಎಮ್‌ ಅಧ್ಯಯನ ಕೇಂದ್ರದ ಡೀನ್‌ ಡಾ.ವಿಶ್ವನಾಥ್‌ ಪಿ ಹೇಳಿದರು.

ಉಜಿರೆಯ ಎಸ್‌.ಡಿ ಎಂ ಪದವಿ ಕಾಲೇಜಿನ ಸಮ್ಯಕ್‌ ದರ್ಶನದ ವೇದಿಕೆಯಲ್ಲಿ ಭೌತಶಾಸ್ತ್ರ ವಿಭಾಗ ಮತ್ತು ಐಕ್ಯುಎಸಿ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯ ಮಟ್ಟದ ಲ್ಯಾಬ್‌ ನಿ‍ರ್ವಹಣಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಒಳ್ಳೆಯ ಪರಿಸರ ನಿರ್ಮಾಣ ಮಾಡಿಕೊಡುವುದು ಲ್ಯಾಬ್‌ ನಿರ್ವಾಹಕರ ಮತ್ತು ಸಹಾಯಕ ಉಪನ್ಯಾಸಕರ ಕಾರ್ಯವಾಗಿದ್ದು, ಅನುಭವವಿರುವ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಿದರೆ ಲ್ಯಾಬ್‌ ನಿರ್ವಹಣೆಯಲ್ಲಿ ಉತ್ತಮ ಫಲಿತಾಂಶ ಕಾಣಬಹುದು ಎಂದು ಅಭಿಪ್ರಾಯಪಟ್ಟರು, ಎಸ್‌ ಡಿ ಎಂ ಕಾಲೇಜಿನ ಖಾತೆ ಸಹಾಯಕ ದಿವಾಕರ್‌ ಪಟವರ್ಧನ್‌ ಮಾತನಾಡಿ ಪ್ರತಿಯೊಬ್ಬರಲ್ಲೂ ಇರುವ ಜ್ಞಾನವನ್ನು
ಅನ್ವಯಿಸಿದಾಗ ಮಾತ್ರ ಅದಕ್ಕೆ ಮೌಲ್ಯವರ್ಧನೆ ಪ್ರಾಪ್ತವಾಗುತ್ತದೆ ಎಂದು ಹೇಳಿದರು

ಪ್ರಾಶುಂಪಾಲ ಡಾ. ಉದಯಚಂದ್ರ ಪಿ ಎನ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲ್ಯಾಬ್‌ ನಿರ್ವಾಹಕರಿಗೆ ಉಪಕರಣಗಳ ಬಳಕೆಯ ಅರಿವಿರಬೇಕು, ನಿರ್ವಹಣೆಯ ಜ್ಞಾನ ಮತ್ತು ಕೌಶಲ್ಯವಿದ್ದರೆ ಮಾತ್ರ ಪರಿಪೂರ್ಣತೆ ಹೊಂದಲು ಸಹಾಕಾರಿಯಾಗುತ್ತದೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಒಟ್ಟು 42 ಲ್ಯಾಬ್‌ ನಿರ್ವಾಹಕರಿಗೆ ಪ್ರಮಾಣಪತ್ರ ನೀಡಲಾಯಿತು ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಲ್ಯಾಬ್‌ ನಿರ್ವಾಹಕ ಜಯಂತ್‌ ಹಾಗೂ ಎಸ್‌ ಡಿ ಎಂ ಕಾಲೇಜಿನ ರಾಸಯನಿಕ ವಿಭಾಗದ ಪರಮೇಶ್ವರ ಮತ್ತು ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಾಧ್ಯಾಪಕ ಎಸ್‌ ಎನ್‌ ಕಾಕತ್ಕರ್‌ ಸ್ವಾಗತಿಸಿ, ಸಂಯೋಜಕಿ ರೇವತಿ ಎಸ್‌ ವಂದಿಸಿ ವಿದ್ಯಾರ್ಥಿನಿ ಅನಘ ನಿರೂಪಿಸಿದರು.

Gayathri SG

Recent Posts

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

5 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

6 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

15 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

30 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

44 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

46 mins ago