News Karnataka Kannada
Thursday, May 02 2024
ಕ್ಯಾಂಪಸ್

ಎಸ್.ಡಿ.ಎಂ : ಸ್ವಾತಂತ್ರ‍್ಯದ ಮಹತ್ವ ಪ್ರವಹಿಸುವ ವಿದ್ಯಾರ್ಥಿ ಉಪನ್ಯಾಸ ಸರಣಿ

May 1: SDM Annual friendship meet of senior students in college
Photo Credit :

ಉಜಿರೆ : ಉಜಿರೆಯ ಎಸ್.ಡಿ.ಎಂ. ಸಂಸ್ಥೆಯಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ‍್ಯದ ಮಹತ್ವವನ್ನು ಮನದಟ್ಟುಗೊಳಿಸುವುದರೊಂದಿಗೆ ಭವಿಷ್ಯದ ಭಾರತವನ್ನು ಕಟ್ಟುವ ಚಿಂತನೆಗಳನ್ನು ಪ್ರವಹಿಸುವ ವಿದ್ಯಾರ್ಥಿ ಉಪನ್ಯಾಸ ಸರಣಿ ಗಮನ ಸೆಳೆಯುತ್ತಿದೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಿದ್ಯಾರ್ಥಿ ಉಪನ್ಯಾಸ ಸರಣಿ ಕಾರ್ಯಕ್ರಮವನ್ನು ಅಯೋಜಿಸುತ್ತಿದೆ. ಪ್ರತೀ ಸೋಮವಾರ ಮತ್ತು ಶುಕ್ರವಾರ ಆನ್ಲೈನ್ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಯಂ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ 75 ಸ್ವಾತಂತ್ರ‍್ಯ ಸೇನಾನಿಗಳು ಹಾಗೂ ಸಾಧಕರ ಜೀವನಗಾಥೆ ಮತ್ತು ಜೀವನ ಸಂದೇಶಗಳನ್ನು ಪ್ರವಹಿಸುವ ಉಪನ್ಯಾಸಗಳನ್ನು ನೀಡುತ್ತಾರೆ.

ಈ ಕುರಿತು ರಾಷ್ಟ್ರೀಯ ಸೇವಾ ಘಟಕದ ಯೋಜನಾಧಿಕಾರಿಗಳಾದ ಪ್ರಾಧ್ಯಾಪಕ ಲಕ್ಷ್ಮೀನಾರಾಯಣ ಮಾಹಿತಿ ಹಂಚಿಕೊಂಡರು. “ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಸೇನಾನಿಗಳನ್ನು ನೆನೆಯುವ ಮತ್ತು ದೇಶಕ್ಕೆ ಅವರ ಕೊಡುಗೆಯನ್ನು ಸ್ಮರಿಸುವ ಅಪೂರ್ವ ಅವಕಾಶವಿದು. ಭವಿಷ್ಯದ ಸದೃಢ ಭಾರತವನ್ನು ಕಟ್ಟುವಲ್ಲಿ ವಿದ್ಯಾರ್ಥಿಗಳಿಗೆ ಸಾಧಕರ ಜೀವನಸಂದೇಶ ನಿಜಕ್ಕೂ ಪ್ರೇರಣೆಯಾಗಬಲ್ಲದು” ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಸಂಯೋಜನೆಯನ್ನು ಕಾಲೇಜಿನ ರಾಷ್ಟ್ರೀಯಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಅಧ್ಯಾಪಕರು ಲಕ್ಷ್ಮೀನಾರಾಯಣ ಮತ್ತು ಅಧ್ಯಾಪಕಿ ದೀಪ ಆರತಿ ನಿರ್ವಹಿಸುತ್ತಿದ್ದಾರೆ. ಘಟಕದ ವಿದ್ಯಾರ್ಥಿ ನಾಯಕರು ಮತ್ತು ಸ್ವಯಂ ಸೇವಕರು ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ. ಪ್ರಾಂಶುಪಾಲರು, ಅಧ್ಯಾಪಕ ವೃಂದದ ಸಹಕಾರ ಮತ್ತು ವಿದ್ಯಾರ್ಥಿ ಸಮೂಹದ ಸಾಮುಹಿಕ ಪ್ರಯತ್ನದೊಂದಿಗೆ ಯಶಸ್ವಿ ಸಂಚಿಕೆಗಳನ್ನು ಕಾಣುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು