News Karnataka Kannada
Monday, April 29 2024
ಕ್ಯಾಂಪಸ್

ಕುವೆಂಪು ವಿವಿ: ೨೦೨೧-೨೨ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ

Kuvempu Vv
Photo Credit :

ಶಂಕರಘಟ್ಟ, ಡಿ. 27: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶಕೌನ್ಸೆಲಿಂಗ್‌ ನಡೆಯಿತು.  ಸುಮಾರು ೩೦ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡರು.

ವಿಶ್ವವಿದ್ಯಾಲಯದ ಮುಖ್ಯ ಆವರಣ, ಕಡೂರು ಪಿ.ಜಿ.ಕೇಂದ್ರ,  ಚಿಕ್ಕಮಗಳೂರು ಪಿಜಿ ಕೇಂದ್ರ ಮತ್ತು ೨೦ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ ವಿಭಾಗಗಳಿಗೆ ಡಿಸೆಂಬರ್ ೨೭, ೨೮, ಮತ್ತು ೨೯ರಂದು ಪ್ರವೇಶಾತಿ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ. ಮೊದಲ ದಿನವಾದ ಸೋಮವಾರದಂದು ಮೆರಿಟ್ ಸೀಟುಗಳಿಗೆ ಪ್ರವೇಶಾತಿ ಪ್ರಕ್ರಿಯೆಯಾವುದೇ ತೊಡಕುಗಳಿಲ್ಲದೆ ನಡೆಯಿತು. ೨೮ ಹಾಗೂ ೨೯ರಂದು ಪೇಮೆಂಟ್ ಮತ್ತು ಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದ ಪ್ರಕಾರ ಶುಕ್ರವಾರ ಸಂಜೆ ೪ ಗಂಟೆಯ ಹೊತ್ತಿಗೆಎಲ್ಲ ಸ್ನಾತಕೋತ್ತರ ವಿಭಾಗಗಳ ಶೇ.೬೫ರಷ್ಟು ಸೀಟುಗಳು ಭರ್ತಿಯಾಗಿದ್ದವು ಹಾಗೂ ಕೋವಿಡ್೧೯ ಕಾರಣದಿಂದಾಗಿ ಇನ್ನುಳಿದ ಆಕಾಂಕ್ಷಿಗಳು ಮಂಗಳವಾರ ಮತ್ತು ಬುಧವಾರ ವಿವಿಗೆ ಆಗಮಿಸಿ ಪ್ರವೇಶ ಪಡೆಯಲಿದ್ದಾರೆ.

ಪ್ರವೇಶಾತಿ ಪಡೆದ ಕೋರ್ಸುಗಳ ದಾಖಲಾತಿ ನಿರ್ವಹಣೆ ಹಾಗೂ ಶುಲ್ಕವನ್ನು ಭರಿಸಲು ವಿದ್ಯಾರ್ಥಿಗಳಿಗೆ ಸುಲಭ ಮಾದರಿಗಳಲ್ಲಿ ಅವಕಾಶಗಳನ್ನು ನೀಡಲಾಗಿತ್ತು. ಆಫ್‌ಲೈನ್‌ನಲ್ಲಿ ಶುಲ್ಕ ಭರಿಸುವವರ ಸಂಖ್ಯೆ ಹೆಚ್ಚಾದಂತೆ ಬ್ಯಾಂಕಿನಲ್ಲಿ ಮೂರು ಕೌಂಟರ್‌ಗಳನ್ನು ತೆರೆಯಲಾಗಿತ್ತು. ಹೆಚ್ಚುವರಿಯಾಗಿ ವಿವಿಯ ಆಡಳಿತ ಭವನದ ಹಣಕಾಸು ವಿಭಾಗದಲ್ಲಿ ಮತ್ತೆ ಮೂರು ಕೌಂಟರ್‌ಗಳನ್ನು ತೆರೆದು ಶುಲ್ಕ ಭರಿಸುವ ಪ್ರಕ್ರಿಯೆಯನ್ನು
ಸುಲಲಿತಗೊಳಿಸಲಾಯಿತು. ಕೋವಿಡ್-೧೯ ಮಾರ್ಗದರ್ಶಿ ಸೂತ್ರಗಳೊಂದಿಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಸುರಕ್ಷಿತವಾಗಿ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ವಿಶ್ವವಿದ್ಯಾಲಯವು ಪ್ರವೇಶ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದು, ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿತ್ತು. ದೇಹದ ಉಷ್ಣಾಂಶ ಪರೀಕ್ಷಿಸಿ ವಿವಿ ಕ್ಯಾಂಪಸ್ ಒಳಬಿಡುವ ಜೊತೆಗೆ ವಿಭಾಗಗಳಲ್ಲಿ ಕೂರಲು ೬ಅಡಿ ಅಂತರ ನೀಡಿ ಕುರ್ಚಿಗಳನ್ನು ಹಾಕಲಾಗಿತ್ತು. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚು ಸೀಟು ಆಕಾಂಕ್ಷಿಗಳು ಮತ್ತು ಅವರ ಪೋಷಕರು ಉತ್ಸುಕತೆಯಿಂದ ಪ್ರವೇಶ ಚಟುವಟಿಕೆಗಳಲ್ಲಿ
ಭಾಗವಹಿಸಿದ್ದರು. ವಿವಿಯ ವಿಭಾಗಗಳನ್ನು ಕಲೆ ಮತ್ತು ಸಮಾಜವಿಜ್ಞಾನ ವಿಷಯಗಳು, ವಾಣಿಜ್ಯ ಮತ್ತು ನಿರ್ವಹಣಾ ವಿಷಯಗಳು, ಅನ್ವಯಿಕ ವಿಜ್ಞಾನಗಳು ಮತ್ತು ಮೂಲ ವಿಜ್ಞಾನಗಳೆಂದು ವಿಂಗಡಿಸಿ ಅನುಕ್ರಮವಾಗಿ ಸಮಾಜವಿಜ್ಞಾನ, ವಾಣಿಜ್ಯ ಶಾಸ್ತ್ರ ಮತ್ತು ಬಸವ ಭವನ, ಗಣಿತ ವಿಜ್ಞಾನ ಮತ್ತು ಜೀವ ವಿಜ್ಞಾನ ವಿಷಯಗಳ ಸಮುಚ್ಚಯಗಳಲ್ಲಿ ಪ್ರವೇಶಾತಿ ಹಮ್ಮಿಕೊಳ್ಳಲಾಗಿತ್ತು. ಮುಂದಿನ ಎರಡು ದಿನವೂ ಇದೇ
ಕಟ್ಟಡಗಳಲ್ಲಿ ಕೌನ್ಸೆಲಿಂಗ್ ನಡೆಯಲಿದೆ.

ವಿಶ್ವವಿದ್ಯಾಲಯಕ್ಕೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿವಿಯದ್ವಾರದ ಬಳಿಯೇ ವಿಭಾಗವಾರು ಕೌನ್ಸೆಲಿಂಗ್ ಕಟ್ಟಡದ ವಿವರ, ಮಾರ್ಗತೋರುವ ಸೂಚನಾ ಫಲಕಗಳು, ಅಗತ್ಯ ದಾಖಲೆಗಳ ವಿವರ ಸೇರಿದಂತೆ ಸ್ವಾಗತಕೋರುವ ಫಲಕಗಳನ್ನು ಹಾಕಲಾಗಿತ್ತು. ಜೊತೆಗೆ ಪ್ರತಿಕಟ್ಟಡದ ಬಳಿಯೂ ಪೂರಕ ಮಾಹಿತಿ ನೀಡಲಾಗಿತ್ತು. ಸೀಟುಗಳ ವಿವಿರ, ವಿದ್ಯಾರ್ಥಿ ಮಾಹಿತಿ, ಕಾಲೇಜು ಆಯ್ಕೆ ಕುರಿತ ಮಾಹಿತಿಗಳನ್ನು ಯಾವುದೇ ಗೊಂದಲಗಳಿಗೆ ದಾರಿಯಾಗದಂತೆ ಡಿಜಿಟಲ್‌ ಬೋರ್ಡ್ಗಳಲ್ಲಿ ಪ್ರದರ್ಶಿಸಲಾಗುತ್ತಿತ್ತು ಹಾಗೂ ಮೈಕ್ ಮೂಲಕ ಆಯ್ಕೆಗೊಂಡವರ ಹೆಸರುಗಳನ್ನು ಘೋಷಿಸಲಾಗುತ್ತಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು