News Karnataka Kannada
Saturday, May 04 2024
ಕ್ಯಾಂಪಸ್

ಡಾ. ಭಾರತಿ ಪಿಲಾರ್ ರವರಿಗೆ ಎನ್ ಎಸ್ ಎಸ್ ರಾಜ್ಯ ಪ್ರಶಸ್ತಿ

University
Photo Credit :

ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ ಡಾ. ಭಾರತಿ ಪಿಲಾರ್ ಅವರಿಗೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ರಾಜ್ಯ ಎನ್ಎಸ್ಎಸ್ ಕೋಶ ೨೦೧೮-೧೯ ನೇ ಸಾಲಿನ “ಅತ್ಯುತ್ತಮ ಎನ್ಎಸ್ಎಸ್   ಕಾರ್ಯಕ್ರಮ ಅಧಿಕಾರಿ” ಪ್ರಶಸ್ತಿ ನೀಡಿ ಗೌರವಿಸಿದೆ.
ಇದೇ ವೇಳೆ ಕಾಲೇಜಿನ ಎನ್ಎಸ್ಎಸ್ ಘಟಕಕ್ಕೆ ೨೦೧೮-೧೯ ನೇ ಸಾಲಿನ ರಾಜ್ಯ ಮಟ್ಟದ “ಅತ್ಯುತ್ತಮ ಎನ್ಎಸ್ಎಸ್ ಘಟಕ” ಪ್ರಶಸ್ತಿ ಲಭಿಸಿದೆ. ಪ್ರಾಂಶುಪಾಲೆ ಡಾ. ಅನಸೂಯ ರೈ ಇತ್ತೀಚೆಗೆ ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ನಡೆದ    ಕಾರ್ಯಕ್ರಮದಲ್ಲಿ ಯುವ  ಕಾರ್ಯಕ್ರಮದಲ್ಲಿ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ಕೆ.ಸಿ. ನಾರಾಯಣ ಗೌಡ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್ ಅಶ್ವಥ್ ನಾರಾಯಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ  ಕಾರ್ಯದರ್ಶಿ ಶಾಲಿನಿ ರಜನೀಶ್, ಇಲಾಖೆ ಆಯುಕ್ತ ವೆಂಕಟೇಶ್ ಕುಮಾರ್ ಆರ್, ರಾಜ್ಯ ಎನ್ಎಸ್ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು