ತುಮಕೂರು : ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಆಗಸ್ಟ್ 21 ರಂದು ಉದ್ಯೋಗ ಕೋಶ, ವಾಣಿಜ್ಯ ಶಾಸ್ತ್ರ ಹಾಗೂ ಅಧ್ಯಯನ ವಿಭಾಗ ಜಂಟಿಯಾಗಿ ಐ. ಸಿ. ಐ. ಸಿ. ಐ ಬ್ಯಾಂಕ್ ನೇಮಕಾತಿ ಹಮ್ಮಿಕೊಳ್ಳಲಾಗಿದೆ.
ಇದರ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಉದ್ಯೋಗಾಧಿಕಾರಿ ಪ್ರೊ. ಬಿ. ಶೇಖರ್ ರವರು ಹೇಳಿದರು