ನಂಬಿಕೆಗೆ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸಿ: ಪ್ರೊ. ವೈ. ಎಸ್. ಸಿದ್ದೇಗೌಡ

ತುಮಕೂರು: ಜವಾಬ್ದಾರಿ ವಹಿಸಿರುವವರ ನಂಬಿಕೆಗೆ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸುವುದು ಉತ್ತಮ ಆಡಳಿತಗಾರರ ಲಕ್ಷಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ.) ವೈ. ಎಸ್. ಸಿದ್ದೇಗೌಡ ತಿಳಿಸಿದರು.ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ(ಪಿಆರ್‌ಸಿಐ)ದಿOದ ಉತ್ತಮ ಆಡಳಿತಕ್ಕಾಗಿ ‘ಚಾಣಕ್ಯ’ ಪ್ರಶಸ್ತಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ತುಮಕೂರು ವಿವಿ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಆತ್ಮತೃಪ್ತಿಗಾಗಿ ಕೆಲಸ ಮಾಡಬೇಕೇ ಹೊರತು ಬೇರೆಯವರನ್ನು ಮೆಚ್ಚಿಸಲು ಅಲ್ಲ. ಮಾಡುವ ಪ್ರತಿಯೊಂದು ಕಾರ್ಯದಲ್ಲೂ ಮೌಲ್ಯವರ್ಧನೆಯಾಗುವಂತೆ ನೋಡಿಕೊಳ್ಳಬೇಕು. ಸಮಾಜದಲ್ಲಿ ನಮ್ಮ ಗುರುತು ಬಿಟ್ಟು ಹೋಗಬೇಕು ಎಂದರು.
ಸಕಾರಾತ್ಮಕ ಯೋಚನೆಯಿಂದ ಆರೋಗ್ಯ ಮತ್ತು ಆಯುಷ್ಯ ವೃದ್ಧಿಯಾಗುತ್ತದೆ. ಇದರಿಂದ ಕುಟುಂಬ, ಸಮಾಜ ಹಾಗೂ ಇಡೀ ರಾಷ್ಟಕ್ಕೆ ಒಳ್ಳೆಯದಾಗುತ್ತದೆ. ಇದೇ ಚೌಕಟ್ಟನ್ನು ಇಟ್ಟುಕೊಂಡಿರುವ ರಾಷ್ಟಿçÃಯ ಶಿಕ್ಷಣ ನೀತಿ ಜ್ಞಾನ, ಕೌಶಲ್ಯ, ವೃತ್ತಿಪರತೆ, ಪ್ರತಿಭೆಯನ್ನು ವಿದ್ಯಾರ್ಥಿಯಲ್ಲಿ ಬೆಳೆಸುವುದಷ್ಟೇ ಅಲ್ಲದೆ, ಮೌಲ್ಯಗಳನ್ನೂ ಪೋಷಿಸುವ ಗುರಿ ಇಟ್ಟುಕೊಂಡಿದೆ ಎಂದರು.
ಕುಲಪತಿಗಳನ್ನು ಅಭಿನಂದಿಸಿ ಮಾತನಾಡಿದ ಕುಲಸಚಿವ ಪ್ರೊ. ಕೆ. ಶಿವಚಿತ್ತಪ್ಪ, ಕುಲಪತಿಗಳಿಗೆ ಸಂದ ಪ್ರಶಸ್ತಿ ತುಮಕೂರು ವಿವಿಯ ಗೌರವವನ್ನು ಹೆಚ್ಚಿಸಿದೆ. ಅವರ ಕಾರ್ಯವೈಖರಿ, ಬದ್ಧತೆ, ಸಮಯಪ್ರಜ್ಞೆ ಹಾಗೂ ನಾಯಕತ್ವ ಎಲ್ಲರಿಗೂ ಮಾದರಿ ಎಂದರು.
ಪ್ರೊ. ಸಿದ್ದೇಗೌಡ ಅವರು ಜೀವನದಲ್ಲಿ ಕಷ್ಟಪಟ್ಟು ಮುಂದೆ ಬಂದವರು. ತಮ್ಮ ವಿದ್ಯಾರ್ಥಿಗಳು ಮತ್ತು ಸಹೋದ್ಯೋಗಿಗಳು ಉನ್ನತ ಸ್ಥಾನಮಾನ ಪಡೆಯಬೇಕೆಂದು ಬಯಸಿದವರು. ನಡೆನುಡಿಯಲ್ಲಿ ಎಲ್ಲರನ್ನೂ ಪ್ರಭಾವಿಸಿದವರು. ಕೋವಿಡ್ ಸಮಯದಲ್ಲಿ ಅವರು ತೋರಿದ ನಾಯಕತ್ವದಿಂದ ತುಮಕೂರು ವಿವಿಗೆ ರಾಷ್ಟçಮಟ್ಟದಲ್ಲಿ ಒಳ್ಳೆಯ ಹೆಸರು ತಂದಿದೆ ಎಂದರು.
ಪರೀಕ್ಷಾ ಕುಲಸಚಿವ ಪ್ರೊ. ನಿರ್ಮಲ್‌ರಾಜು ಸ್ವಾಗತಿಸಿದರು. ಹಣಕಾಸು ಅಧಿಕಾರಿ ನರಸಿಂಹಮೂರ್ತಿ ವಂದಿಸಿದರು. ಡಾ. ಜಾಯ್ ನೆರೆಲ್ಲಾ, ಡಾ. ಡಿ. ಸುರೇಶ್ ಹಾಗೂ ಡಾ. ಮಂಗಳಾಗೌರಿ ಎಂ. ಉಪಸ್ಥಿತರಿದ್ದರು.

Swathi MG

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

2 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

3 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

3 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

3 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

3 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

3 hours ago