ಕ್ಯಾಂಪಸ್

ನವೆಂಬರ್ 22 ರಂದು ಸಿರಾದಲ್ಲಿ ಸ್ನಾತಕೋತ್ತರ ಕೇಂದ್ರ `ಶ್ರೇಷ್ಠತಾ ಕೇಂದ್ರ’ದ ಉದ್ಘಾಟನೆ

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸಿರಾ ಸ್ನಾತಕೋತ್ತರ ಕೇಂದ್ರ ಶ್ರೇಷ್ಠತಾ ಕೇಂದ್ರವನ್ನು ನವೆಂಬರ್ 22ರ ಸೋಮವಾರ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಗುರುಪೀಠದ ಸ್ವಾಮೀಜಿಗಳಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು ಹಾಗೂ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಮಹಾಸಂಸ್ಥಾನ ಮಠದ ಸ್ವಾಮೀಜಿಗಳಾದ ಶ್ರೀ ನಂಜಾವಧೂತ ಸ್ವಾಮಿಗಳು ನೂತನ ಸ್ನಾತಕೋತ್ತರ ಕೇಂದ್ರವನ್ನು ಉಧ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ.) ವೈ.ಎಸ್. ಸಿದ್ದೇಗೌಡ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ತುಮಕೂರು ಸಿಂಡಿಕೇಟ್ ಸದಸ್ಯರುಗಳಾದ ಶ್ರೀನಿವಾಸ್ ಆರ್. ಕೆ., ಸುನೀಲ್ ಪ್ರಸಾದ್ ಟಿ.ಎಸ್., ರಾಜು, ಟಿ.ಡಿ. ವಿನಯ್, ಶ್ರೀಮತಿ ಐಶ್ವರ್ಯ ಸುರೇಶ್, ಪ್ರಸನ್ನಕುಮಾರ್ ಎಚ್., ಡಾ. ಭಾಗ್ಯ ಲಕ್ಷ್ಮೀ ಹಿರೇಂದ್ರ ಷಾ, ಶ್ರೀಮತಿ ಎಂ.ಎಸ್. ಭವ್ಯ, ಪ್ರೊ. ಡಿ.ವಿ. ಪರಶಿವಮೂರ್ತಿ, ಪ್ರೊ. ಎಲ್.ಪಿ. ರಾಜು, ಪ್ರೊ. ಎಚ್.ಎಸ್. ಶಿವಯೋಗಿ, ಶ್ರೀಮತಿ ಲತಾ ಬಿ.ಎಸ್., ಡಾ. ಟಿ. ವೆಂಕಟಾಚಲಯ್ಯ, ಡಾ. ಕೆ.ಸಿ. ಜಯಸ್ವಾಮಿ, ಪರೀಕ್ಷಾಂಗ ಕುಲಸಚಿವರಾದ ಪ್ರೊ. ನಿರ್ಮಲ್ ರಾಜು, ಹಣಕಾಸು ಅಧಿಕಾರಿಗಳಾದ ನರಸಿಂಹಮೂರ್ತಿ, ಇಂಜಿನಿಯರ್ ಬಲರಾಮು ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತರಿರಲಿದ್ದಾರೆ.

ನೂತನ ಕ್ಯಾಂಪಸ್‌ನಲ್ಲಿ ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಅರ್ಥಶಾಸ್ತ್ರಗಳು ಆರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕೋರ್ಸುಗಳು ತೆರೆಯುವ ಯೋಜನೆ ಇದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಶಿವಚಿತ್ತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Swathi MG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

11 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

20 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

32 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

50 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

56 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago