ಪತ್ರಕರ್ತರೆಲ್ಲರೂ ಅಂಕಣಕಾರರಾಗಬೇಕೆಂದಿಲ್ಲ-ರಂಜಿತ್ ಎಚ್ ಅಶ್ವತ್

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ “ವರದಿಗಾರಿಕೆಯ ಸವಾಲುಗಳು ಮತ್ತು ಸುದ್ದಿ ಮನೆಯ ವೈವಿಧ್ಯತೆ” ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಡೆಪ್ಯುಟಿ ಚೀಫ್ ರಿಪೋರ್ಟರ್ ಹಾಗೂ ಅಂಕಣಕಾರ ರಂಜಿತ್ ಎಚ್ ಅಶ್ವತ್ ಮಾತನಾಡಿ, “ವರದಿಗಾರಿಕೆ ಮಾಡುವಾಗ ಮುಂದಾಗುವ ಸವಾಲುಗಳನ್ನು ಎದುರಿಸಲು ವರದಿಗೆ ಹೋಗುವ ಮೊದಲೇ ವರದಿಗಾರರು ಮಾನಸಿಕವಾಗಿ ದೈಹಿಕವಾಗಿ ಸಿದ್ಧರಿರಬೇಕು. ವರದಿಗೆ ಬಳಸುವ ಮೂಲಗಳ ಬಗ್ಗೆ ಸ್ಪಷ್ಟ ಜ್ಞಾನ ಮತ್ತು ನಿಖರತೆಯನ್ನು ಹೊಂದಿರಬೇಕು. ಯಾವುದು ಸುದ್ದಿ, ಯಾವುದು ಸುದ್ದಿಯಲ್ಲ ಎಂಬುದನ್ನು ಗ್ರಹಿಸುವ ದೃಷ್ಟಿಕೋನ ವರದಿಗಾರರಿಗೆ ಮುಖ್ಯವಾಗಿರಬೇಕು” ಎಂದರು.
“ಪತ್ರಕರ್ತನಾದವನಿಗೆ ಸಾಹಿತ್ಯ ಜ್ಞಾನ, ಓದುಗಾರಿಕೆ, ಬರಹ, ವಿಷಯ ಜ್ಞಾನ, ಪದಗಳ ಮಿತಿ, ಅಕ್ಷರ ಜ್ಞಾನ ಅಗತ್ಯವಾಗಿರಬೇಕು. ಇವೆಲ್ಲ ಇಲ್ಲದಿದ್ದಲ್ಲಿ ಅಂತಹ ವರದಿ ತನ್ನ ಜೀವಂತಿಕೆಯನ್ನು ಕಳೆದುಕೊಳ್ಳುತ್ತದೆ. ಅಲ್ಲದೆ ಉತ್ತಮ ವರದಿಗಾರನಾಗಲು ವರದಿ ಕೌಶಲ್ಯ ಮಾತ್ರವಲ್ಲದೆ ಇದರ ಜೊತೆಗೆ ವಿನಯತೆ, ನೈತಿಕತೆ, ಉತ್ತಮ ಮಾತುಗಾರಿಕೆ ಹಾಗು ಉಡುಗೆ ತೊಡುಗೆಯ ಜ್ಞಾನವು ಇರಬೇಕು” ಎಂದರು.
ಕಾರ್ಯಕ್ರಮದಲ್ಲಿ ವಿಭಾಗದ ಸಂಯೋಜಕರಾದ ಪ್ರಸಾದ್ ಶೆಟ್ಟಿ, ಉಪನ್ಯಾಸಕರು ಹಾಗೂ ಪತ್ರಿಕೋದ್ಯಮದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪೂಜಶ್ರೀ ಕಾರ್ಯಕ್ರಮ ನಿರೂಪಿಸಿದರು.

“ಅಂಕಣಕಾರಾಗುವುದು ಸುಲಭ. ಆದರೆ ಅದನ್ನು ಮುಂದುವರಿಸಿಕೊಂಡು ಹೋಗುವುದು ಮುಖ್ಯವಾಗಿರುತ್ತದೆ. ಪತ್ರಕರ್ತರೆಲ್ಲರೂ ಅಂಕಣಕಾರರಾಗಬೇಕೆಂದಿಲ್ಲ. ಹಾಗೆಯೇ ಅಂಕಣಕಾರೆಲ್ಲರೂ ಪತ್ರಕರ್ತರೇ ಆಗಿರಬೇಕೆಂದಿಲ್ಲ. ಆದರೆ ಅಂಕಣಕಾರರಿಗೆ ವಿಷಯದ ಕುರಿತು ಆಳವಾದ ಜ್ಞಾನ ಮತ್ತು ಅದನ್ನು ಜನರಿಗೆ ಹೇಗೆ ತಿಳಿಸಬೇಕೆಂಬ ಅರಿವು ಇರಬೇಕು” ಎಂದು ಹೇಳಿದರು

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago