ಕ್ಯಾಂಪಸ್

ಪರಿಸರ ಸಂರಕ್ಷಣೆ ನಾಗರಿಕರ ಪ್ರಮುಖ ಹೊಣೆ: ಶಾಸಕ ಡಾ. ಭರತ್ ಶೆಟ್ಟಿ

ಮೂಡುಬಿದಿರೆ: ವಿದ್ಯಾರ್ಥಿಗಳ ಯೋಚನೆಗಳು ಪರಿಸರ ಸಂರಕ್ಷಣೆಯತ್ತ ಇರಲಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.
ಕರ್ನಾಟಕ ಅರಣ್ಯ ಇಲಾಖೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್ ಹಾಗೂ ಕುದೆರಮುಖ ವನ್ಯಜೀವಿ ಘಟಕದ ಸಹಯೋಗದಲ್ಲಿ ವಿದ್ಯಾಗಿರಿಯ ವಿ.ಎಸ್ ಆಚಾರ್ಯ ವೇದಿಕೆಯಲ್ಲಿ ನಡೆದ ‘ಗ್ರೀನ್ ಪಾರ್ಲಿಮೆಂಟ್ -2021’ ಅಣಕು ಸಂಸತ್ತಿನ ಉದ್ಘಾಟನಾ ಸಮಾರಂಭದ  ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶೈಕ್ಷಣಿಕ ವಿಚಾರಗಳಿಗೆ ಒತ್ತು ನೀಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಅರಿವು ಕಡಿಮೆಯಾಗಿದೆ. ಜನರ ದುರಾಸೆಯ ಸ್ವಭಾವದಿಂದ ಹೆಕ್ಟೇರ್ ಗಟ್ಟಲೆ ಅರಣ್ಯ ಪ್ರದೇಶ ಶೋಷಣೆಗೊಳಗಾಗಿದೆ. ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ನೀತಿಗಳ ತಿಳುವಳಿಕೆ ವಿದ್ಯಾರ್ಥಿಗಳಲ್ಲಿ ಮೂಡಿಸಲು ಗ್ರೀನ್ ಪಾರ್ಲಿಮೆಂಟ್ ಕಾರ್ಯಕ್ರಮ ಬಹಳ ಅಗತ್ಯ ಎಂದರು.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಪ್ರಕಾಶ್ ನೆತಾಲ್ಕರ್ ಮಾತನಾಡಿ, ಅರಣ್ಯ ನೀತಿ ಹಾಗೂ ಪರಿಸರ ಸೂಕ್ಶ್ಮ ಪ್ರದೇಶಗಳ ಅರಿವು ವಿದ್ಯಾರ್ಥಿಗಳಿಗೆ ಅಗತ್ಯ. ವನ್ಯಜೀವಿ ಸಂರಕ್ಷಣೆಯ ಹೊಣೆಗಾರಿಯೂ ಪ್ರತಿಯೊಬ್ಬರಲ್ಲಿರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಮುಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಸಂಸತ್ತಿನಲ್ಲಿ ವಿರೋಧ ಮಾಡಬೇಕಾದನ್ನು ಸಮರ್ಥವಾಗಿ ವಿರೋಧಿಸಿ, ಉತ್ತಮ ವಿಚಾರಗಳಿಗೆ ಶಕ್ತಿ ತುಂಬಿ ಮಾತನಾಡಬೇಕು. ಆರೋಗ್ಯಪೂರ್ಣ ಚರ್ಚೆಯಿಂದ ಸಮಾಜಕ್ಕೆ ಹಾಗೂ ಪರಿಸರಕ್ಕೆ ಒಳಿತಾಗುತ್ತದೆ. ‘ಡೀಮ್ಡ್ ಫಾರೆಸ್ಟ್ ‘ ಎಂದು ಪರಿಗಣಿಸಲಾಗುವ ಪ್ರದೇಶದಲ್ಲಿ ಎಷ್ಟರ ಮಟ್ಟಿಗೆ ಅರಣ್ಯ ಸಂಪತ್ತಿನ ಸಂರಕ್ಷಣೆಯಾಗಿದೆ ಎಂಬುದರ ಪ್ರಾಯೋಗಿಕ ಅಧ್ಯಯನ ಆಗಬೇಕು ಎಂದರು.
ಉದ್ಘಾಟನಾ ಸಮಾರಂಭದ ಬಳಿಕ ಸ್ಪೀಕರ್ ಸಾತ್ವಿಕ್ ಅವರ ನಿರ್ದೇಶನದಲ್ಲಿ ಅಣಕು ಸಂಸತ್ತು ಅಧಿವೇಶನ ನಡೆಯಿತು. ಸಂಸತ್ತಿನಲ್ಲಿ ಪರಿಸರ ಸಂರಕ್ಷಣೆ ಹಾಗೂ ಅರಣ್ಯ ನೀತಿಯ ಕುರಿತು ಚರ್ಚಿಸಲಾಯಿತು.  ಕಾರ್ಯಕ್ರಮದಲ್ಲಿ ಡೆಪ್ಯುಟಿ ಅರಣ್ಯ ಸಂರಕ್ಷಣಾಧಿಕಾರಿ ಪಿ. ರುತ್ರನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು.
Raksha Deshpande

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago