ಶ್ರೀ.ಧ.ಮಂ ಪದವಿ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ:“ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಹೊಸ ಶಿಕ್ಷಣ ನೀತಿಯನ್ನು ಕಾಲೇಜಿನಲ್ಲಿ ಸಮರ್ಪಕವಾಗಿ ಅನುಷ್ಠಾನದ ತಯಾರಿ ನಡೆಯುತ್ತಿದೆ. ಎಂದು ಶ್ರೀ.ಧ.ಮಂ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಸತೀಶ್ಚಂದ್ರ ಹೇಳಿದರು.

ಕಾಲೇಜಿನ ನೂತನ ವರ್ಷದ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿ ಕೇವಲ 27% ಯುವಜನತೆ ಮಾತ್ರ ಉನ್ನತ ಶಿಕ್ಷಣವನ್ನು ಪಡೆಯುತ್ತಾರೆ ಉಳಿದವರು ಈ ಅವಕಾಶಗಳಿಂದ ವಂಚಿತರಾಗಿದ್ದಾರೆ. ಕಾಲೇಜಿನಲ್ಲಿ ಅನೇಕ ಅವಕಾಶಗಳನ್ನು ಒದಗಿಸುತ್ತಿದ್ದು ವಿದ್ಯಾರ್ಥಿಗಳು ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು” ಎಂದು ಹೇಳಿದರು.
ಸ್ನಾತಕೋತ್ತರ ವಿಭಾಗದ ಡಿನ್ ಡಾ. ಪಿ. ವಿಶ್ವನಾಥ್ ಅವರು ನೆರೆದಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಹೊಸ ಶಿಕ್ಷಣ ನೀತಿಯ ಕಾರ್ಯವೈಖರಿ, ಕಾಲೇಜಿನ ಸ್ವಾಯತ್ತತೆ, ಪರೀಕ್ಷಾ ವಿಧಾನಗಳ ಕುರಿತಾಗಿ ಮಾಹಿತಿಯನ್ನು ನೀಡಿದರು. “ಹೊಸ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳು ಜಾಗತಿಕಮಟ್ಟದಲ್ಲಿ ಸ್ಪರ್ಧಿಸಲು ಅನುಕೂಲವಾಗುವಂತೆ ರೂಪಿಸಲಾಗಿದೆ.” ಎಂದು ನುಡಿದರು.
ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ್ ಹೆಗ್ಡೆ ಕಾಲೇಜಿನಲ್ಲಿ ನಡೆಯುವ ಚಟುವಟಿಕೆ, ಸೌಲಭ್ಯ, ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. “ಗ್ರಾಮೀಣ ಪ್ರದೇಶದವರೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ಭಾಗವಹಿಸುತ್ತಿದ್ದಾರೆ. ಹೀಗಾಗಿ ಸ್ಪರ್ಧಾತ್ಮಕ ಮನೋಭಾವನೆ ವಿದ್ಯಾರ್ಥಿಗಳಲ್ಲಿ ಬಹುಮುಖ್ಯ” ಎಂದು ಅಭಿಪ್ರಾಯಪಟ್ಟರು. ಪತ್ರಿಕೋದ್ಯಮ ವಿಭಾಗದ ತೃತೀಯ ವರ್ಷದ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ‘ಫೋಟೊ ಜರ್ನಲ್’ ಅನ್ನು ಇದೇ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಮನಃಶಾಸ್ತ್ರ ವಿಭಾಗದ ಅಧ್ಯಾಪಕ ಡಾ. ಸುಧೀರ್ ಹಾಗು ಇತರೆ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಡಾ. ರಾಜಶೇಖರ್ ಸ್ವಾಗತಿಸಿ, ಪ್ರೋ. ಜಿ.ಆರ್ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು.

Swathi MG

Recent Posts

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

4 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

11 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

28 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

55 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago