ಸಂವಿಧಾನದ ಆಶಯಗಳಿಗೆ ತಕ್ಕಂತೆ ನಡೆಯೋಣ- ಪ್ರೊ .ವೈ ಎಸ್ ಸಿದ್ದೇಗೌಡ

ತುಮಕೂರು: ಸಂವಿಧಾನದ ಆಶಯಗಳಿಗೆ ತಕ್ಕಂತೆ ನಡೆಯೋಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ)ವೈ ಎಸ್ ಸಿದ್ದೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ತುಮಕೂರು ವಿ.ವಿ. ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಕಲಾ ಕಾಲೇಜಿನ  ರಾಜ್ಯಶಾಸ್ತ್ರ ವಿಭಾಗ ಶುಕ್ರವಾರ ಏರ್ಪಡಿಸಿದ್ದ‘ಸಂವಿಧಾನ ದಿನ’ದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆಪುಷ್ಪನಮನ ಸಲ್ಲಿಸಿ ಮಾತನಾಡಿ, ಸಂವಿಧಾನದ ತತ್ವ ಆರ್ದಶಗಳನ್ನುಪಾಲಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಬಾಳು ಮತ್ತು ಸಮಪಾಲು ಎಂದು ಉಲ್ಲೇಖಿಸಿದ್ದಾರೆ. ಅದರಂತೆ ಸಮಾಜದ ಎಲ್ಲಾ ವರ್ಗದ ಜನರಿಗೂ ಕೂಡ ನ್ಯಾಯ ದೊರಕಿಸಿಲು ಶ್ರಮಿಸಿದ್ದಾರೆ. ನಾವು ಸಂವಿಧಾನ ಮಂತ್ರವನ್ನು ಪ್ರತಿನಿತ್ಯ ಜಪಿಸಬೇಕು ಎಂದರು.

ಡಾ. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಜಿ.ಬಸವರಾಜ ಮಾತನಾಡಿ, ಭಾರತದ ಸಂವಿಧಾನದ ಪ್ರಸ್ತಾವನೆಯು ಜಾತ್ಯಾತೀತ,ಪ್ರಜಾಸತಾತ್ಮಕ ಗಣರಾಜ್ಯದ ಅಂಶಗಳನ್ನೊಳಗೊಂಡಿದೆ. ಎಲ್ಲರಿಗೂರಾಜಕೀಯ, ಆರ್ಥಿಕ ಮತ್ತು ಧಾರ್ಮಿಕ ಸ್ಥಾನಮಾನಗಳನ್ನು ಹಂಚಿಕೆಮಾಡಲಾಗಿದೆ. ಮಿಶ್ರ ಆರ್ಥಿಕ ವ್ಯವಸ್ಥೆಯಲ್ಲಿ ದೇಶವನ್ನು ಮುನ್ನಡೆಸುತ್ತಿದ್ದು, ಸಮಾಜವಾದಿ ಮತ್ತು  ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ ಎಂದರು.  ಪರೀಕ್ಷಾಂಗ ಕುಲಸಚಿವ ಪ್ರೊ. ನಿರ್ಮಲ್‌ರಾಜು ಮಾತನಾಡಿ, ಭಾರತದ ಸಂವಿಧಾನವು ಎಲ್ಲರಿಗೂ ಸಮಾನವಾದ ಹಕ್ಕುಗಳನ್ನು ನೀಡುವುದರ ಮೂಲಕ ಸದೃಢ ಸಮಾಜಕ್ಕೆ ಭಧ್ರ ಬುನಾದಿಯನ್ನು ಹಾಕಿದೆ. ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕವಾದ ಕಾನೂನುಗಳನ್ನು ರೂಪಿಸಲಾಗಿದೆ ಎಂದರು.
ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ರಾಮಚಂದ್ರಪ್ಪ,ನುಡಿದಂತೆ ನಡೆಯುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಗೌರವ ಎಂದರು. ರಾಜ್ಯ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ
ಉಪಕುಲಸಚಿವರಾದ ಡಾ. ಗುಂಡೇಗೌಡ ಸ್ವಾಗತಿಸಿದರು.

Swathi MG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

4 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago