ಸರ್ವತೋಮುಖ ಬೆಳವಣಿಗೆಗೆ ಪಠ್ಯ ಪ್ರವಚನಗಳೊಂದಿಗೆ ಕ್ರೀಡೆಯೂ ಅಗತ್ಯ : ಸುರೇಶ ಶೆಟ್ಟಿ

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಪುತ್ತೂರು: ಮಕ್ಕಳಿಗೆ ಪಠ್ಯ ಪ್ರವಚನಗಳೊಂದಿಗೆ ಕ್ರೀಡೆಯ ಅಗತ್ಯವಿದೆ. ಕ್ರೀಡೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡಷ್ಟು ಮಕ್ಕಳ ಬೌದ್ಧಿಕ ಮತ್ತು ಶಾರೀರಿಕ ವಿಕಸನವಾಗಲು ಸಾಧ್ಯ. ವಾಲಿಬಾಲ್, ತ್ರೋಬಾಲ್, ಕಬಡ್ಡಿ ಮುಂತಾದ ಕ್ರೀಡೆಗಳು ನಮ್ಮ ಹಳ್ಳಿಗಳಿಂದ ಬಂದಿರುವAತಹುದು. ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು.

ಮಕ್ಕಳು ಶಾಲಾ ಕಾಲೇಜಿಗಳಲ್ಲಿ ಸ್ಪರ್ಧೆಗಳನ್ನು ಇಟ್ಟಾಗ ಅತೀಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಹೇಳಿದರು.

ಅವರು ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ನಡೆದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.
ಕ್ರೀಡೆಯು ದೇಹಕ್ಕೆ ವ್ಯಾಯಮವನ್ನು ಒದಗಿಸುವುದಲ್ಲದೆ ಮನುಷ್ಯನ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಸದ್ಯದಲ್ಲೇ ಎದುರಾಗಲಿರುವ ಪರೀಕ್ಷೆಯ ತಯಾರಿಯ ಒತ್ತಡದ ಮಧ್ಯೆಯೂ ಕ್ರೀಡಾ ಕೂಟಗಳನ್ನು ಏರ್ಪಡಿಸಿರುವುದು ಸಂಸ್ಥೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಬಗೆಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಮಾತನಾಡಿ ಕೊರೋನಾ ಹಾವಳಿಯಿಂದ ಮಕ್ಕಳು ಎಲ್ಲಾ ರೀತಿಯ ಕ್ರೀಡಾ ಮನೋರಂಜನೆಗಳಿAದ ವಂಚಿತರಾಗಿದ್ದು, ಇದೀಗ ಮಕ್ಕಳು ಹುರುಪು ಹುಮ್ಮಸ್ಸುಗಳಿಂದ ಭಾಗವಹಿಸುವಂತಾಗಿದೆ. ಕ್ರೀಡೆಯು ನಮ್ಮ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಿ ಲವಲವಿಕೆಯಿಂದ ಇರಲು ಸಹಕರಿಸುತ್ತದೆ. ಪಠ್ಯಗಳೊಂದಿಗೆ ಕ್ರೀಡೆಯನ್ನು ಅಳವಡಿಸಿಕೊಂಡಾಗ ಶೈಕ್ಷಣಿಕ ಹಂತದಲ್ಲಿ ಹೆಚ್ಚಿನ ಸಾಧನೆಗೈಯಲು ಸಾಧ್ಯ ಎಂದರು.

ಕ್ರೀಡಕೂಟದಲ್ಲಿ ಸಂಸ್ಥೆಯ ಕ್ಯಾಂಪಸ್ ನಿರ್ದೇಶಕ ಬಾಸ್ಕರ್ ಶೆಟ್ಟಿ ಹಾಗೂ ಅಂಬಿಕಾ ವಿದ್ಯಾಲಯದ ದೈಹಿಕ ಶಿಕ್ಷಕಿ ಸುಚಿತ್ರಾ ಶೆಟ್ಟಿ ಉಪಸ್ಥಿತರಿದ್ದರು, ವಿದ್ಯಾರ್ಥಿ ಅನೀಶ್ ಕೆ ಪ್ರಾರ್ಥಿಸಿ, ಸಂಸ್ಥೆಯ ಪ್ರಾಂಶುಪಾಲ ಶಂಕರನಾರಾಯಣ ಭಟ್ ಸ್ವಾಗತಿಸಿದರು. ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಪ್ರದೀಪ್ ಕೆ ವೈ ವಂದನಾರ್ಪಣೆಗೈದು, ಸಂಸ್ಥೆಯ ಕ್ರೀಡಾ ನಿರ್ದೇಶಕ ನವೀನ್ ಡಿ ಕಾರ್ಯಕ್ರಮ ನಿರೂಪಿಸಿದರು.

Sneha Gowda

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

18 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

34 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

56 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

3 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago