ಕ್ಯಾಂಪಸ್

ಸರ್ವರ ಏಳಿಗೆಗಾಗಿ ಕನ್ನಡದ ಜಾಗೃತಿ ಇಂದಿನ ಅಗತ್ಯವಾಗಿದೆ-ಡಾ. ಬಿ.ಪಿ.ಸಂಪತ್ ಕುಮಾರ

ಬೆಳ್ತಂಗಡಿ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯಲ್ಲಿ ನಡೆದ ಗೀತ ಗಾಯನ ಕಾರ್ಯಕ್ರಮದಲ್ಲಿ
ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಪಿ.ಸಂಪತ್ ಕುಮಾರ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ’ ಸರ್ವರ ಏಳಿಗೆಗಾಗಿ ಕನ್ನಡದ ಜಾಗೃತಿ ಇಂದಿನ ಅಗತ್ಯವಾಗಿದೆ. ಇಂತಹ ಜಾಗೃತಿಯನ್ನು ಸರಕಾರ ಜನರಲ್ಲಿ ಮೂಡಿಸುತ್ತಿರುವುದು ಶ್ಲಾಘನೀಯ ವಾದುದು. ಎಂದೆಂದಿಗೂ ಕನ್ನಡತನ ನಮ್ಮ ಉಸಿರಾಗಿರಬೇಕು’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಸತೀಶ್ಚಂದ್ರ ಎಸ್. ಸಂಕಲ್ಪ ವಿಧಿಯನ್ನು ಭೋದಿಸಿದರು. ನಾವು ಯಾವುದೇ ಭಾಷೆಯನ್ನು ಕಲಿತರು ಕನ್ನಡ ನಾಡು ನುಡಿಯ ಮೇಲೆ ಅಭಿಮಾನ ಹೊಂದಿರಬೇಕು. ಅದರ ರಕ್ಷಣೆಗಾಗಿ ಸದಾ ಕಂಕಣಬದ್ದರಾಗಿರಬೇಕು. ಸರಕಾರದ ಇಂತಹ ಕಾರ್ಯಕ್ರಮಗಳಿಗೆ ನಾವೆಲ್ಲಾ ಒಮ್ಮನಸ್ಸಿನಿಂದ ಕೈ ಜೋಡಿಸಬೇಕು’ ಎಂದರು
೩೦ ವಿದ್ಯಾರ್ಥಿಗಳು ಸೇರಿ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಡುಗಳನ್ನು ಹಾಡಿದರು.
ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಸೇರಿ ೧೫೦ ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾಲೇಜಿನ ಕನ್ನಡ ಸಂಘ ಹಾಗೂ ಸಾಂಸ್ಕೃತಿಕ ಸಂಘ ಸೇರಿ ಕಾರ್ಯಕ್ರಮ ಸಂಯೋಜಿಸಿದ್ದರು.
ಡಾ. ಸುಧೀರ ಕೆ.ವಿ. ವಂದನೆಗಳನ್ನು ಸಲ್ಲಿಸಿದರು. ಡಾ. ರವಿಶಂಕರ್ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು.‌
ಅದೇ ರೀತಿ ಬೆಳ್ತಂಗಡಿ ತಾಲೂಕು‌ ಕಚೇರಿಯಲ್ಲಿ ತಹಸೀಲ್ದಾರ್ ಮಹೇಶ್ ಜೆ. ಅವರ ನೇತ್ರತ್ವದಲ್ಲಿ ಗೀತ ಗಾಯನ ನಡೆಯಿತು.
ತಾಲೂಕು ಕಚೇರಿಯ ಎಲ್ಲಾ ಸಿಬ್ಬಂದಿಗಳು ಗೀತಾ ಗಾಯನದಲ್ಲಿ ಪಾಲ್ಗೊಂಡಿದ್ದರು.

Swathi MG

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

8 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

26 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

46 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago