ಸ್ವಾತಂತ್ರ್ಯ ಹೋರಾಟಗಾರರಿಂದ ಸ್ಫೂರ್ತಿ ಪಡೆಯೋಣ: ಚಿಂತಕ ತೊಂಡೋಟಿ ಎಲ್

ತುಮಕೂರು: ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಶ್ರಮಿಸಿದವರ ಹೋರಾಟದಿಂದ ಯುವ ಜನತೆಯು ಸ್ಫೂರ್ತಿ ಪಡೆದು ದೇಶಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯ ಸರ್ವೋದಯ ಮಹಾಮಂಡಲದ ಕಾರ್ಯಾಧ್ಯಕ್ಷ, ಹಿರಿಯ ಗಾಂಧೀ ಚಿಂತಕ ತೊಂಡೋಟಿ ಎಲ್. ನರಸಿಂಹಯ್ಯನವರು ತಿಳಿಸಿದರು.

ತುಮಕೂರು ವಿಶ್ವವಿದ್ಯಾನಿಲಯವು ಮಂಗಳವಾರ ಹಮ್ಮಿಕೊಂಡಿದ್ದ ‘ಆಜಾದಿ ಕಾ ಅಮೃತ ಮಹೋತ್ಸವ್’ ಆನ್ಲೈನ್ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

1857ರಿಂದ 1947ರವರೆಗೆ ನಡೆದ ರಾಷ್ಟ್ರೀಯ ಆಂದೋಲನದ ವಿವಿಧ ಘಟ್ಟಗಳನ್ನು ಸ್ಮರಿಸಿಕೊಂಡ ಅವರು, ಗಾಂಧೀಜಿಯವರ ನೇತೃತ್ವದಲ್ಲಿ ರೂಪುಗೊಂಡ ಶಾಂತಿ, ಅಹಿಂಸೆ, ಸ್ವದೇಶಿ, ಸತ್ಯಾಗ್ರಹ ಮೊದಲಾದ ಶ್ರೇಷ್ಠ ಆದರ್ಶಗಳು ನಮಗಿಂದು ಮಾದರಿಯಾಗಬೇಕು ಎಂದರು.

ಮಂದಗಾಮಿಗಳು, ಕ್ರಾಂತಿಕಾರಿಗಳು ಎಲ್ಲರ ಕೊಡುಗೆಗಳಿಗೆ ನಾವಿಂದು ಕೃತಜ್ಞರಾಗಿರಬೇಕು ಎಂದ ಅವರು, ಉಧಮ್‍ಸಿಂಗ್, ಸುಖದೇವ್, ರಾಜ್‍ಗುರು, ಭಗತ್‍ಸಿಂಗ್, ಸುಭಾಷ್ ಚಂದ್ರ ಬೋಸ್ ಮೊದಲಾದ ಹೋರಾಟಗಾರರ ಸಾಹಸಗಳನ್ನು ಸ್ಮರಿಸಿಕೊಂಡರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಕರ್ನಲ್ (ಪ್ರೊ.) ವೈ.ಎಸ್. ಸಿದ್ದೇಗೌಡ, ತೊಂಡೋಟಿಯಂಥ ಹಿರಿಯರ ಚುರುಕು ಚಟುವಟಿಕೆ ಹಾಗೂ ಉತ್ಸಾಹದಿಂದ ವಿದ್ಯಾರ್ಥಿಗಳು ಪ್ರೇರಣೆ ಪಡೆಯಬೇಕು ಎಂದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿವಿಯ ವಿವಿಧ ಸ್ನಾತಕೋತ್ತರ ವಿಭಾಗಗಳು, ಘಟಕ ಕಾಲೇಜುಗಳು ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ಬೀದಿನಾಟಕ, ವಿಚಾರ ಸಂಕಿರಣ, ವಿಶೇಷ ಉಪನ್ಯಾಸ, ವಸ್ತು ಪ್ರದರ್ಶನ, ಪ್ರಬಂಧ ಸ್ಪರ್ಧೆ, ಕಾಲ್ನಡಿಗೆ, ಸೈಕಲ್ ರ್ಯಾಲಿ, ಚಿತ್ರ ಬರೆಯುವ ಸ್ಪರ್ಧೆ, ಚರ್ಚಾ ಸ್ಪರ್ಧೆ ಮೊದಲಾದ ಕಾರ್ಯಕ್ರಮಗಳನ್ನು ಏರ್ಪಡಿಸಿ ವಿದ್ಯಾಥಿಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ಕುಲಸಚಿವ ಪ್ರೊ. ಕೆ. ಶಿವಚಿತ್ತಪ್ಪ, ಕುಲಸಚಿವ (ಪರೀಕ್ಷಾಂಗ) ಪ್ರೊ. ನಿರ್ಮಲ್ ರಾಜು, ಪ್ರಾಧ್ಯಾಪಕ ಎಲ್. ಪಿ. ರಾಜು, ಕಾರ್ಯಕ್ರಮದ ಸಂಯೋಜಕ ಡಾ. ಚಿಕ್ಕಣ್ಣ ಮತ್ತಿತರರು ಉಪಸ್ಥಿತರಿದ್ದರು.

Sampriya YK

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

5 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

15 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

47 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

55 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

57 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago