ಕ್ಯಾಂಪಸ್

‘ಸ್ವಾತಂತ್ರ್ಯ ಹೋರಾಟಗಾರರಿಂದ ಸ್ಫೂರ್ತಿ ಪಡೆಯೋಣ’

ತುಮಕೂರು: ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಶ್ರಮಿಸಿದವರ ಹೋರಾಟದಿಂದ ಯುವ ಜನತೆಯು ಸ್ಫೂರ್ತಿ ಪಡೆದು ದೇಶಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯ ಸರ್ವೋದಯ ಮಹಾಮಂಡಲದ ಕಾರ್ಯಾಧ್ಯಕ್ಷ, ಹಿರಿಯ ಗಾಂಧೀ ಚಿಂತಕ ತೊಂಡೋಟಿ ಎಲ್. ನರಸಿಂಹಯ್ಯನವರು ತಿಳಿಸಿದರು.
ತುಮಕೂರು ವಿಶ್ವವಿದ್ಯಾನಿಲಯವು ಮಂಗಳವಾರ ಹಮ್ಮಿಕೊಂಡಿದ್ದ ‘ಆಜಾದಿ ಕಾ ಅಮೃತ ಮಹೋತ್ಸವ್’ ಆನ್ಲೈನ್ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.1857ರಿಂದ 1947ರವರೆಗೆ ನಡೆದ ರಾಷ್ಟ್ರೀಯ ಆಂದೋಲನದ ವಿವಿಧ ಘಟ್ಟಗಳನ್ನು ಸ್ಮರಿಸಿಕೊಂಡ ಅವರು, ಗಾಂಧೀಜಿಯವರ ನೇತೃತ್ವದಲ್ಲಿ ರೂಪುಗೊಂಡ ಶಾಂತಿ, ಅಹಿಂಸೆ, ಸ್ವದೇಶಿ, ಸತ್ಯಾಗ್ರಹ ಮೊದಲಾದ ಶ್ರೇಷ್ಠ ಆದರ್ಶಗಳು ನಮಗಿಂದು ಮಾದರಿಯಾಗಬೇಕು ಎಂದರು.
ಮಂದಗಾಮಿಗಳು, ಕ್ರಾಂತಿಕಾರಿಗಳು ಎಲ್ಲರ ಕೊಡುಗೆಗಳಿಗೆ ನಾವಿಂದು ಕೃತಜ್ಞರಾಗಿರಬೇಕು ಎಂದ ಅವರು, ಉಧಮ್‍ಸಿಂಗ್, ಸುಖದೇವ್, ರಾಜ್‍ಗುರು, ಭಗತ್‍ಸಿಂಗ್, ಸುಭಾಷ್ ಚಂದ್ರ ಬೋಸ್ ಮೊದಲಾದ ಹೋರಾಟಗಾರರ ಸಾಹಸಗಳನ್ನು ಸ್ಮರಿಸಿಕೊಂಡರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಕರ್ನಲ್ (ಪ್ರೊ.) ವೈ.ಎಸ್. ಸಿದ್ದೇಗೌಡ, ತೊಂಡೋಟಿಯಂಥ ಹಿರಿಯರ ಚುರುಕು ಚಟುವಟಿಕೆ ಹಾಗೂ ಉತ್ಸಾಹದಿಂದ ವಿದ್ಯಾರ್ಥಿಗಳು ಪ್ರೇರಣೆ ಪಡೆಯಬೇಕು ಎಂದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿವಿಯ ವಿವಿಧ ಸ್ನಾತಕೋತ್ತರ ವಿಭಾಗಗಳು, ಘಟಕ ಕಾಲೇಜುಗಳು ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ಬೀದಿನಾಟಕ, ವಿಚಾರ ಸಂಕಿರಣ, ವಿಶೇಷ ಉಪನ್ಯಾಸ, ವಸ್ತು ಪ್ರದರ್ಶನ, ಪ್ರಬಂಧ ಸ್ಪರ್ಧೆ, ಕಾಲ್ನಡಿಗೆ, ಸೈಕಲ್ ರ್ಯಾಲಿ, ಚಿತ್ರ ಬರೆಯುವ ಸ್ಪರ್ಧೆ, ಚರ್ಚಾ ಸ್ಪರ್ಧೆ ಮೊದಲಾದ ಕಾರ್ಯಕ್ರಮಗಳನ್ನು ಏರ್ಪಡಿಸಿ ವಿದ್ಯಾಥಿಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
ಕುಲಸಚಿವ ಪ್ರೊ. ಕೆ. ಶಿವಚಿತ್ತಪ್ಪ, ಕುಲಸಚಿವ (ಪರೀಕ್ಷಾಂಗ) ಪ್ರೊ. ನಿರ್ಮಲ್ ರಾಜು, ಪ್ರಾಧ್ಯಾಪಕ ಎಲ್. ಪಿ. ರಾಜು, ಕಾರ್ಯಕ್ರಮದ ಸಂಯೋಜಕ ಡಾ. ಚಿಕ್ಕಣ್ಣ ಮತ್ತಿತರರು ಉಪಸ್ಥಿತರಿದ್ದರು.

Indresh KC

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago