ಬೆಳ್ತಂಗಡಿ: ನ. 28ರಂದು ನೂತನ ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳಿಗೆ ಚಾಲನೆ

ಬೆಳ್ತಂಗಡಿ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ನೂತನ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳು ನ. 28ರಂದು ಎಸ್‍ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿತವಾದ ಓರಿಯೆಂಟೇಶನ್ ಕಾರ್ಯಕ್ರಮದ ಮೂಲಕ ವಿದ್ಯುಕ್ತವಾಗಿ ಚಾಲನೆ ಕಾಣಲಿವೆ.

ಈ ಕಾರ್ಯಕ್ರಮಕ್ಕೆ ಕೇಂದ್ರದ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಸಾಕ್ಷಿಯಾಗಲಿದ್ದಾರೆ.

ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಎಸ್.ಡಿ.ಎಂ.ನ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕಾರ್ಯನಿರ್ವಹಣೆಯ ಸಮಗ್ರ ಸ್ವರೂಪವನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಈ ಸಾಂಸ್ಥಿಕ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಈ ಸಲದ ಕಾರ್ಯಕ್ರಮವನ್ನು ಮೂಲತಃ ಅಳದಂಗಡಿಯವರಾಗಿರುವ, ಪ್ರಸ್ತುತ ಲಂಡನ್ ಸ್ಕೂಲ್ ಆಫ್ ಮೆಡಿಸಿನ್‍ನ ಪ್ರಾಧ್ಯಾಪಕ, ನವಜಾತಶಿಶು ತಜ್ಞ ಪ್ರೊ. ನರೇಂದ್ರ ಅವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಈ ಕಾರ್ಯಕ್ರಮ ಆರಂಭಗೊಳ್ಳಲಿದೆ.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಉದಯಚಂದ್ರ ಪಿ.ಎನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

Ashika S

Recent Posts

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

12 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

16 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

40 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

48 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

54 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

1 hour ago