ಬೆಳ್ತಂಗಡಿ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

ಬೆಳ್ತಂಗಡಿ: ಶಿಕ್ಷಣ ಮತ್ತು ಶಿಸ್ತು ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸುತ್ತದೆ. ಕಠಿಣ ಪರಿಶ್ರಮ, ಗುರಿ ಮತ್ತು ಪ್ರಯೋಗಶೀಲತೆಯಿಂದ ಜೀವನದಲ್ಲಿ ಉನ್ನತ ಸಾಧನೆ ತೋರಲು ಸಾಧ್ಯ ಎಂದು ಮೂಡಬಿದ್ರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ನಾರಾವಿ ಹೇಳಿದರು.

ಉಜಿರೆಯಲ್ಲಿ ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪಿ.ಯು.ಸಿ. ವಿದ್ಯಾರ್ಥಿಗಳಿಗಾಗಿ ಆಯೋಜಿಸಿಸಿದ ರಾಜ್ಯಮಟ್ಟದ ವಿಜ್ಞಾನ ಮೇಳ 2ಕೆ22 ಎಕ್ಸ್ ಪೀರಿಯಾವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ನಾವು ನೋಡುವ ದೃಷ್ಟಿಯಂತೆ ಸೃಷ್ಠಿ ಇರುತ್ತದೆ. ಕೇವಲ ಜ್ಞಾನವೊಂದಿದ್ದರೆ ಸಾಲದು ಅದರೊಂದಿಗೆ ನಮ್ಮ ನಡವಳಿಕೆ, ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಸಾಧಕನಾಗಲು ಪರಿಪೂರ್ಣವಾದ ಶಿಕ್ಷಣ ಅತ್ಯವಶ್ಯ. ಎರಡು ದಿನದ ಈ ವಿಜ್ಞಾನ ಮೇಳವು ನಿಮ್ಮ ಸಾಧನೆಯ ಅನವರಕ್ಕೊಂದು ಉತ್ತಮ ವೇದಿಕೆಯನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಕಲ್ಪಿಸಿಕೊಟ್ಟಿದೆ ಎಂದು ಹೇಳಿದರು.

ತನ್ನ ಸಾರ್ಥಕ ಬದುಕಿಗೆ ನಿರಂತರ ಮಾರ್ಗದರ್ಶನ, ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಎಸ್.ಡಿ.ಎಂ. ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ. ಎಸ್. ಪ್ರಭಾಕರ್ ಮತ್ತು ಡಾ.ಬಿ.ಯಶೋವರ್ಮರನ್ನು ಹಾಗೂ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಬಣ್ಣಿಸಿದರು.

ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸದಾ ಪ್ರಶ್ನಿಸುವ ಮನೋಭಾವದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಅನ್ವೇಷಣೆ ಮತ್ತು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಬೇಕು. ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ತಮ್ಮ ಜ್ಞಾನ, ಶಕ್ತಿ, ಸಾಮರ್ಥ್ಯವನ್ನು ಬಳಸಿ ದೇಶದ ಪ್ರಗತಿಗೆ ಅಮೂಲ್ಯ ಕೊಡುಗೆ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕ ಕುಮಾರ್, ಟಿ. ಸ್ವಾಗತಿಸಿದರು. ಡಾ.ರವೀಶ್ ವಂದಿಸಿದರು. ಡಾ. ಸಂಜಯ್ ಕಾರ್ಯಕ್ರಮ ನಿರ್ವಹಿಸಿದರು.

ರಾಜ್ಯದ 10 ಜಿಲ್ಲೆಗಳ 25 ಕಾಲೇಜುಗಳಿಂದ 225 ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

Gayathri SG

Recent Posts

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

9 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

29 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

53 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

1 hour ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

2 hours ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

2 hours ago