ಮಂಗಳೂರು

ಬೆಳ್ತಂಗಡಿ: ಸಾಮರ್ಥ್ಯ ಸಂವರ್ಧನೆಗೆ ಕ್ರೀಡೆ ಅತಿ ಮುಖ್ಯ – ರವಿಶಂಕರ್ ವಿ. ಎಸ್.

ಬೆಳ್ತಂಗಡಿ: ದೈಹಿಕ ಆರೋಗ್ಯ ಮಾನಸಿಕ ಆರೋಗ್ಯಕ್ಕೂ ಕ್ರೀಡೆ ಅತಿ ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಕ್ರೀಡಾ ಸ್ಪೂರ್ತಿಯಿಂದ ಎಲ್ಲಾ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆತ್ಮವಿಶ್ವಾಸವೂ ಇದರಿಂದ ಸಾಧ್ಯ. ಸಾಮರ್ಥ್ಯ ಸಂವರ್ಧನೆಗೆ ಕ್ರೀಡೆ ಅತಿ ಮುಖ್ಯ ಎಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ. ಎಸ್ ಹೇಳಿದರು.

ಇವರು ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಚಾರ್ಯ ಪ್ರೊ.ದಿನೇಶ ಚೌಟ ಹಾಗೂ ಅಭ್ಯಾಗತರಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕ್ರೀಡಾ ಕಾರ್ಯದರ್ಶಿ ರಮೇಶ್ ಹೆಚ್ ಅವರು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.

ದೇಶ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದವರನ್ನು , ಗುಂಪು ಸ್ಪರ್ಧೆಗಳಲ್ಲಿ ಹಾಗೂ ಪಥ ಸಂಚಲನ ಕಾರ್ಯಕ್ರಮದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಮೊದಲು ಎಲ್ಲಾ ತರಗತಿ ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಮಟ್ಟದ ಆಟಗಾರ್ತಿ ಸಿಂಚನಾ ಕ್ರೀಡಾ ಶಪಥಗೈದರು. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳು ಕ್ರೀಡಾಜ್ಯೋತಿ ಬೆಳಗಿಸಿದರು.

ಕನ್ನಡ ಭಾಷಾ ಉಪನ್ಯಾಸಕ ಡಾ.ರಾಜೇಶ್ ಬಿ . ಸ್ವಾಗತಿಸಿದರು. ಉಪನ್ಯಾಸಕರಾದ ಮಹಾವೀರ ಜೈನ್ ಹಾಗೂ ದೀಕ್ಷಿತ್ ರೈ ನಿರೂಪಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಧನ್ಯವಾದ ಅರ್ಪಿಸಿದರು.

Gayathri SG

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

13 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

40 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

49 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago