ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಯೂತ್ ರೆಡ್ ಕ್ರಾಸ್ ಘಟಕದ ನೇತೃತ್ವದಲ್ಲಿ ರೆಡ್ ಕ್ರಾಸ್ ಪುತ್ತೂರು ಘಟಕ, ರೋಟರಿ ಕ್ಲಬ್ ಪುತ್ತೂರು ಹಾಗೂ ಪುತ್ತೂರಿನ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರವು ಮಂಗಳವಾರ ನಡೆಯಿತು.

ಕಾರ್ಯಕ್ರಮದಲ್ಲಿ ರಕ್ತದಾನದ ಕುರಿತು ವಿಶೇಷ ಉಪನ್ಯಾಸ ನೀಡಿದ ಪುತ್ತೂರಿನ ಬ್ಲಡ್ ಬ್ಯಾಂಕ್ ನ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ಮಾತನಾಡಿ, ಸರಿಯಾದ ಕಾಲಕ್ಕೆ ರಕ್ತ ಸಿಗದೇ ಸಾಕಷ್ಟು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವಿಶೇಷ ಕಾಯಿಲೆಗಳಿಂದ ಬಳಲುವರು, ಅಪಘಾತ, ಹೆರಿಗೆ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ತುಂಬಾ ಅಗತ್ಯ ಆಗಿರುತ್ತದೆ ಎಂದು ಹೇಳಿದರು.“18 ವರ್ಷ ಮೇಲ್ಪಟ್ಟ, 60 ವರ್ಷದೊಳಗಿನ ಎಲ್ಲ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದಾಗಿದೆ. ಯುವ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನದಲ್ಲಿ ಪಾಲ್ಗೊಳುವ ಮೂಲಕ ಇತರರಿಗೆ ಮಾದರಿ ಆಗಬೇಕು ಎಂದು ಹೇಳಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ.ಪಿ. ವಹಿಸಿದ್ದರು.

ವೇದಿಕೆಯಲ್ಲಿ ರೆಡ್ ಕ್ರಾಸ್ ಪುತ್ತೂರು ಘಟಕದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ರೋಟರಿ ಕ್ಲಬ್ ಪುತ್ತೂರು ಘಟಕದ ಅಧ್ಯಕ್ಷರಾದ ಪ್ರಶಾಂತ್ ಶೆಣೈ, ಝೋನಲ್ ಲೆಪ್ಟಿನೆಂಟ್ ರೋಟರಿ ಕ್ಲಬ್ ನ ಪ್ರಮೋದ್ ಮಲ್ಲಾರ್, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ನವೀನ್ ಕುಮಾರ್ ಎಂ.ಕೆ., ತಿಲಕ್ ಟಿ ಉಪಸ್ಥಿತರಿದ್ದರು.

ಯೂತ್ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿ ಸಂಯೋಜಕ ಆಯುಷ್ ಸ್ವಾಗತಿಸಿ, ಇನ್ನೊರ್ವ ಸಂಯೋಜಕಿ ಕು. ರಶ್ಮಿ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಶ್ರೇಯಸ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ರಕ್ತದಾನವು ನಡೆಯಿತು. ಒಟ್ಟು 46 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

5 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

6 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

8 hours ago