News Karnataka Kannada
Thursday, May 02 2024
ಕ್ಯಾಂಪಸ್

ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ ವಾರ್ಷಿಕೋತ್ಸವ ಸಂಭ್ರಮ

Dr. B. B. Hegde College, Kundapur Anniversary Celebrations
Photo Credit : News Kannada

ಕುಂದಾಪುರ: ಬದುಕಿನಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು,ವಿದ್ಯಾರ್ಥಿ ದೆಸೆಯಲ್ಲೇ ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕವಾದುದು ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಮ್.ಬಾಲಕೃಷ್ಣ ಶೆಟ್ಟಿ ಹೇಳಿದರು.

ಬಿ.ಬಿ.ಹೆಗ್ಡೆ ಕಾಲೇಜಿನ 2022-23ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೆಂಗಳೂರಿನ ಟೊಯೊಟಾ ಕಿರ್ಲೊಸ್ಕರ್ ಮೋಟರ್ಸ್‍ನ ಗ್ರೂಪ್ ಡಿಪಾರ್ಟ್‍ಮೆಂಟ್ ಮುಖ್ಯಸ್ಥರಾದ ಶ್ರೀ ದೀಪಕ್ ಶೆಟ್ಟಿ ಬಾರ್ಕೂರು ಮಾತನಾಡಿ,ಯುವ ಸಮುದಾಯ ಸ್ವಾಮಿ ವಿವೇಕಾನಂದರ ತತ್ವ ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು.ಜೀವನದಲ್ಲಿ ಉತ್ತಮ ಆಯ್ಕೆ, ಬದಲಾವಣೆಗೆ ಒಗ್ಗಿಕೊಳ್ಳುವುದು ಹಾಗೂ ನಿರಂತರ ಪರಿಶ್ರಮ ವಹಿಸಿದ್ದಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.

ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಮಾಜಿ ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೀತಿ ಹೆಗ್ಡೆ,ವಿದ್ಯಾರ್ಥಿ ಪ್ರತಿನಿಧಿ ವಿಘ್ನೇಶ್ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಿನ್ಸಿಪಾಲ್ ಪ್ರೊ| ಕೆ. ಉಮೇಶ್ ಶೆಟ್ಟಿ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು.ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು.ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್ ವಂದಿಸಿದರು.ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ಮೋನಿಕಾ ಡಿಸೋಜಾ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು