‘ಎಸ್.ಡಿ.ಎಂ. ನೆನಪಿನಂಗಳ’ದ ಹನ್ನೊಂದನೇ ಕಂತಿನ ಕಾರ್ಯಕ್ರಮ: ಸಹಾಯಧನ ಹಸ್ತಾಂತರ

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇಂದು (ಮಾ. 28) ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) ‘ಎಸ್.ಡಿ.ಎಂ. ನೆನಪಿನಂಗಳ’ದ ಹನ್ನೊಂದನೇ ಕಂತಿನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಂಗವಾಗಿ, ಪ್ರತಿಭಾನ್ವಿತ ವಿದ್ಯಾರ್ಥಿನಿ ತೃತೀಯ ಬಿಎಸ್ಸಿಯ ಶಬಾ ಎಸ್. ಅವರಿಗೆ ಮುಖ್ಯ ಅತಿಥಿ, ಉದ್ಯಮಿ, ಪುತ್ತೂರಿನ ಆರ್.ಎಚ್. ಸೆಂಟರ್ ನ ಆಡಳಿತ ಪಾಲುದಾರ ಗೋಪಾಲ ಎಂ.ಯು. ಅವರು 5,000 ರೂ. ಸಹಾಯಧನ ಹಸ್ತಾಂತರಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಶಾಲಾ ಕಾಲೇಜು ದಿನಗಳ ಅನುಭವಗಳನ್ನು ಹಂಚಿಕೊಂಡರು. ಕಾಲೇಜು ದಿನಗಳಲ್ಲಿ ಕೊನೆ ಬೆಂಚಿನ ವಿದ್ಯಾರ್ಥಿಯಾಗಿದ್ದರೂ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮವಾಗಿ ತೊಡಗಿಸಿಕೊಂಡಿದ್ದು ಜೀವನದಲ್ಲಿ ಯಶಸ್ಸನ್ನು ಕಾಣಲು ಪೂರಕವಾಯಿತು ಎಂದು ಅವರು ಸ್ಮರಿಸಿಕೊಂಡರು.

“ಜೀವನದಲ್ಲಿ ಸರಕಾರಿ ನೌಕರಿ ಪಡೆಯುವುದೇ ಗುರಿ ಆಗುವುದಕ್ಕಿಂತ ಸ್ವಂತ ಉದ್ದಿಮೆ ಹುಟ್ಟುಹಾಕಿ ಉದ್ಯೋಗದಾತರಾಗುವುದೂ ನಮ್ಮ ಗುರಿಯಾಗಬೇಕು. ನಮ್ಮದೇ ಉದ್ದಿಮೆ ಆರಂಭಿಸಲು ಚಾಣಾಕ್ಷತೆಯ ಜೊತೆಗೆ ಭಾಷೆಯ ಮೇಲಿನ ಹಿಡಿತವೂ ಮುಖ್ಯ” ಎಂದು ಅವರು ಸಲಹೆ ನೀಡಿದರು.

“ನಾನು ಮೊದಲಿಗೆ ಸ್ವೋದ್ಯೋಗ ಪ್ರಾರಂಭಿಸಬೇಕು ಎಂದಾಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಾಡಿದ ಸಹಾಯ ಚಿರಸ್ಮರಣೀಯ. ಅವರ ನುಡಿ ನನ್ನ ಸಾಧನೆಗೆ ಪ್ರೇರಣೆ” ಎಂದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ, “ಆಲೋಚನೆಗಳಿಂದಲೇ ಅನುಭವ. ಅನುಭವಗಳಿಂದಲೇ ಜೀವನ. ಅದಕ್ಕಾಗಿಯೇ ನೆನಪಿನಂಗಳ ಕಾರ್ಯಕ್ರಮ ನಡೆಸಲಾಗುತ್ತಿದೆ” ಎಂದರು.

ಅತಿಥಿಗಳನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳಾದ ಬೆಳ್ತಂಗಡಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷೆ ಮನೋರಮಾ ಉದಯಚಂದ್ರ ಹಾಗೂ ಛಾಯಾಗ್ರಾಹಕ ಕೆ. ವಸಂತ್ ಶರ್ಮ ಮತ್ತಿತರರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಸ್ವಾಗತಿಸಿ, ಪ್ರಸ್ತಾವಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಕ್ರಮ ಸಂಯೋಜಕ ಡಾ. ಎಂ.ಪಿ. ಶ್ರೀನಾಥ್ ಕಾರ್ಯಕ್ರಮ ನಿರೂಪಿಸಿದರು.

Ashika S

Recent Posts

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

12 mins ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

34 mins ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

1 hour ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

1 hour ago

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

2 hours ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

2 hours ago