ಕ್ಯಾಂಪಸ್

ಮಂಗಳೂರು: ಮಿಲಾಗ್ರಿಸ್‌ ಕಾಲೇಜಿನಲ್ಲಿ ಎಕ್ಸೆಲ್ಸೊ – 2022 ಅಂತರ್‌ ಕಾಲೇಜು ಸ್ಪರ್ಧೆ

ಮಂಗಳೂರು, ಜು. 23:  ಮಿಲಾಗ್ರಿಸ್‌ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಎಕ್ಸೆಲ್ಸೊ – 2022 ಒಂದು ದಿನದ ಅಂತರ್‌ ಕಾಲೇಜು ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಕುಲ ಸಚಿವರಾಗಿರುವ ರಿಜಿಸ್ಟ್ರಾರ್ ಆಗಿರುವ ಡಾ. ಅಲ್ವಿನ್‌ ಡೆಸಾ ಮುಖ್ಯ ಅತಿಥಿಯಾಗಿ ಆಗಮಿಸಿ ತಮ್ಮ ಸಂದೇಶದಲ್ಲಿ ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ತನ್ನನ್ನು ತಾನು ಅನ್ವೇಷಿಸಲು ವೇದಿಕೆಯಾಗಿದೆ ಮತ್ತು ಪ್ರತಿಯೊಬ್ಬರಿಗೂ ಅವರ ಭವಿಷ್ಯದ ಪ್ರಯತ್ನಕ್ಕೆ ಮಾರ್ಗದರ್ಶನ ನೀಡುತ್ತದೆ. ಶಿಕ್ಷಣವು ಒಬ್ಬರಿಗೆ ಜ್ಞಾನದ ಮಡಕೆಯನ್ನು ತುಂಬುವುದು ಮಾತ್ರವಲ್ಲಆದರೆ ಪ್ರತಿಯೊಬ್ಬರ ಸೂಕ್ತ ಕೌಶಲ್ಯವನ್ನು ಗುರುತಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

ಗೌರವಾನ್ವಿತ ಅತಿಥಿ ವಿಜ್ಡೋಮ್‌ ಈದ್‌ನ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕ ನಿರ್ದೇಶಕಿಯಾಗಿರು ವಡಾ ಫ್ರಾನ್ಸಿಸ್ಕಾ ತೇಜ್‌ ಇವರು ಮಾತನಾಡಿ ಒಬ್ಬ ವಿದ್ಯಾರ್ಥಿಯು ಜೀವನದಲ್ಲಿಎಲ್ಲಾ ಮೌಲ್ಯಗಳನ್ನು ಅನುಸರಿಸಿದಾಗ ಮಾತ್ರ ತನ್ನದೇ ಆದ ಸ್ವಂತಿಕೆಯನ್ನು ಬೆಳೆಸಲು ಸಾಧ್ಯ ಹಾಗೂ ಇಂತಹ ಅವಕಾಶಗಳು ಇದಕ್ಕೆ ಪೂರಕವಾಗಿರುತ್ತದೆ.

ಮಿಲಾಗ್ರಿಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ವಂ. ಫಾ. ಬೊನವೆಂಚರ್ ನಜರೆತ್‌  ಅಧ್ಯಕ್ಷೀಯ ಭಾಷಣದಲ್ಲಿ, ಒಂದು ವ್ಯಕ್ತಿಯ ವ್ಯಕ್ತಿತ್ವವನ್ನು ಅವನ ಸಾಮಾಜಿಕ ವರ್ತನೆಯಿಂದ ಅಳೆಯಬಹುದು. ಅದುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಒಂದು ಧೃಢ ಸಂಕಲ್ಪ ಹೊಂದಿದ್ದರೆ ಅವನು ಜೀವನದಲ್ಲಿ ಯಶಸ್ಸುಕಾಣಲು ಸಾಧ್ಯ.

ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ. ಮೈಕಲ್ ಸಾಂತುಮಾಯೋರ್ ಅತಿಥಿಗಳನ್ನು ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ  ಕ್ಯಾಸಿನ್ ರೊಡ್ರಿಗಸ್, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಫ್ಲೋರಿಡಾ, ವಿದ್ಯಾರ್ಥಿ ಪ್ರತಿನಿಧಿಗಳಾದ ಅನೂಪ್ ಹಾಗೂ ಹಫೀಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಹಾಗೂ ಕಾರ್ಯಕ್ರಮದ ಸಂಯೋಜಕಿ  ಕಾರ್ತಿಕ ವಂದಿಸಿದರು. ವಿದ್ಯಾರ್ಥಿನಿ ಪರ್ಲ್ ಕಾರ್ಯಕ್ರಮ ನಿರೂಪಿಸಿದರು.

ಬೆಸ್ಟ್ ಮ್ಯಾನೆಜರ್, ಮಾರ್ಕೆಟ್ ಲೀಡರ್, ಆರ್‌ಜೆ, ನ್ಯೂಟ್ರಿಕೊಲೋಕ್ವಿಮ್, ಕಸದಿಂದರಸ, ಫೋಟೊಗ್ರಾಫಿ, ಕೊಕ್ಟೇಲ್‌ ಮೇಕಿಂಗ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಈ ಅಂತರ್‌ ಕಾಲೇಜು ಸ್ಪರ್ಧೆಯಲ್ಲಿ 20 ಕಾಲೇಜುಗಳ ಸುಮಾರು 150  ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೆನರಾ ಕಾಲೇಜು, ಮಂಗಳೂರು ಸಮಗ್ರ ಚಾಂಪಿಯನ್ ಹಾಗೂ ಬೆಸೆಂಟ್‌ಮಹಿಳಾ ಕಾಲೇಜು, ಮಂಗಳೂರು ರನ್ನರ್‌ ಆಪ್ ಗಳಿಸಿದರು.

Gayathri SG

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

6 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

36 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

52 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago