ಕಡಬ: ಬೈಲು-ಬಿಳಿನೆಲೆ ಸರಕಾರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆಗೆ ವಿರೋಧ

ಕಡಬ: ತಾಲೂಕಿನ ಬಿಳಿನೆಲೆ ಗ್ರಾಮದ ಬೈಲು ಬಿಳಿನೆಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಬೇರೆ ಶಾಲೆಗೆ ವರ್ಗಾವಣೆಗೆ ಶಾಲಾ ಎಸ್.ಡಿ.ಎಂ.ಸಿ., ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

ಈ ಬಗ್ಗೆ ಶಾಲೆಯಲ್ಲಿ ಗುರುವಾರ ಹಾಗೂ ಶುಕ್ರವಾರ ಸಭೆಗಳನ್ನು ನಡೆಸಿ ಶಿಕ್ಷಕರ ವರ್ಗಾವಣೆ ತಡೆ ಹಿಡಿಯುವಂತೆ ಆಗ್ರಹಿಸಿದ್ದಾರೆ. ಮುಂದಿನ ಹೋರಾಟದ ಬಗ್ಗೆ ಚರ್ಚಿಸಿದ್ದಾರೆ. ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ವಿನೀಶ್ ಬಿಳಿನೆಲೆ ಮಾತನಾಡಿ, ಬೈಲು ಬಿಳಿನೆಲೆ ಶಾಲೆಯಲ್ಲಿ 90ಕ್ಕೂ ಅಧಿಕ ಮಕ್ಕಳಿದ್ದು, ಮೂವರು ಸರಕಾರಿ ಶಿಕ್ಷಕರಿದ್ದಾರೆ. ಆದರೆ ಇದೀಗ ದೈಹಿಕ ಶಿಕ್ಷಣ ಶಿಕ್ಷಕರನ್ನು ವರ್ಗಾವಣೆ ಮಾಡಲಾಗುತ್ತಿದೆ. ಇದಕ್ಕೆ ನಮ್ಮೆಲ್ಲರ ವಿರೋಧ ಇದೆ. 90 ಮಕ್ಕಳಿರುವ ಶಾಲೆಗಳಿಗೂ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಿಸಬೇಕು. ಇರುವ ಶಿಕ್ಷಕರನ್ನು ವರ್ಗಾವಣೆ ಮಾಡುವುದು ಸರಿಯಲ್ಲ ಎಂದರು. ಮುಂದೆ ವರ್ಗಾವಣೆ ರದ್ದು ಮಾಡದಿದ್ದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸದೇ ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ. ದುಗ್ಗಪ್ಪಗೌಡ ಸೂಡ್ಲು, ಎಸ್.ಡಿ.ಎಂ.ಸಿ. ಅಧ್ಯಕ್ಷ ಯಶೋಧರ ಪರ್ಲಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಮೇಶ್ ಪೂಂಭೂಳಿ, ದುಗ್ಗಪ್ಪಗೌಡ ಸೇರಿದಂತೆ ಪೋಷಕರು, ಎಸ್ಡಿಎಂಸಿಯವರು, ಊರಿನವರು ಉಪಸ್ಥಿತರಿದ್ದರು.

ಶನಿವಾರ ಮಕ್ಕಳನ್ನು ಕಳುಹಿಸದೇ ಪ್ರತಿಭಟನೆಗೆ ನಿರ್ಧಾರ;
ಶುಕ್ರವಾರವೂ ಶಾಲೆಯಲ್ಲಿ ಸೇರಿದ ಪ್ರಮುಖರು ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ ರದ್ದು ಮಾಡಿ ಬೈಲು ಬಿಳಿನೆಲೆ ಶಾಲೆಯಲ್ಲಿ ಅವರನ್ನು ಉಳಿಸಲು ಮುಂದೆ ನಡೆಸುವ ಹೋರಾಟದ ಬಗ್ಗೆ ಚರ್ಚಿಸಿದರು. ಜೂ.24ರಂದು ಮಕ್ಕಳನ್ನು ಶಾಲೆಗೆ ಕಳುಹಿಸದೇ ಪ್ರತಿಭಟಿಸುವ ನಿರ್ಧಾರಕ್ಕೆ ಪೋಷಕರು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಸಭೆಯಲ್ಲಿ ಶಾಲಾ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಊರಿನ ಪ್ರಮುಖರು, ಎಸ್.ಡಿ.ಎಂ.ಸಿ. ಯವರು ಉಪಸ್ಥಿತರಿದ್ದರು.

Gayathri SG

Recent Posts

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

19 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

43 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

1 hour ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

2 hours ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

2 hours ago